ಜೂನ್ 30ಕ್ಕೆ ರಕ್ಷಾ ಫೌಂಡೇಷನ್ ಪುಸ್ತಕ ವಿತರಣೆ, ಕಾಮಿಡಿ ಷೋ
Recommended Video

ಬೆಂಗಳೂರು, ಜೂನ್ 28 : ಬಿಬಿಎಂಪಿಯ ಮಾಜಿ ಸದಸ್ಯ ಸಿ.ಕೆ.ರಾಮಮೂರ್ತಿ ಸ್ಥಾಪಿಸಿರುವ ರಕ್ಷಾ ಫೌಂಡೇಷನ್ ನಿಂದ ಇದೇ ಜೂನ್ ಮೂವತ್ತರ ಶನಿವಾರದಂದು ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಎಂಟನೇ ವರ್ಷದ ಕಾರ್ಯಕ್ರಮವಾಗಿದ್ದು, ಅಂದು ಬೆಳಗ್ಗೆ 9.30ಕ್ಕೆ ಆರಂಭವಾಗಲಿದೆ.
ಜಯನಗರ 11ನೇ ಮುಖ್ಯರಸ್ತೆಯ ಚಂದ್ರಗುಪ್ತ ಮೌರ್ಯ (ಶಾಲಿನಿ) ಆಟದ ಮೈದಾನದಲ್ಲಿ ಈ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರ ಉಳಿದ ವಿವರ ಇಂತಿದೆ.

ಉದ್ಘಾಟನೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಪುಸ್ತಕ ವಿತರಣೆ- ಕೇಂದ್ರ ಸಚಿವ ಅನಂತಕುಮಾರ್
ಅಧ್ಯಕ್ಷತೆ- ಆರ್.ಅಶೋಕ್
ಮುಖ್ಯ ಅತಿಥಿಗಳು- ಮೇಯರ್ ಸಂಪತ್ ರಾಜ್, ಶಾಸಕ ಸತೀಶ್ ರೆಡ್ಡಿ, ನಟ ಧ್ರುವ ಸರ್ಜಾ, ನಟಿ ತಾರಾ, ತಿಪ್ಪೇಸ್ವಾಮಿ, ಬಿ.ಎನ್.ಪ್ರಹ್ಲಾದ್, ಸುಬ್ಬನರಸಿಂಹ, ಪಿ.ಎನ್.ಸದಾಶಿವ, ಮನೋಹರ ಟಿ ಭಂಡಾರಿ, ರಮೇಶ್, ಎಚ್.ಸಿ.ನಾಗರತ್ನಾ ರಾಮಮೂರ್ತಿ
ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ತಂಡದವರಿಂದ ಕಾಮಿಡಿ ಷೋ.

ಎಂಟು ವರ್ಷಗಳ ಹಿಂದೆ ಸಿ.ಕೆ.ರಾಮಮೂರ್ತಿ ಆವರು ಆರಂಭಿಸಿದ ರಕ್ಷಾ ಫೌಂಡೇಷನ್ ಹಲವಾರು ಜನಪರ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಣೆ, ಹಿಂದುಳಿದ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಯಂತ್ರದ ವಿತರಣೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದೆ.
ಇದರ ಜತೆಗೆ ವಿಕಲಚೇತನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ಮತ್ತು ಉಚಿತವಾಗಿ ಕಂಪ್ಯೂಟರ್ ವಿತರಣೆ ಮಾಡಲಾಗುತ್ತಿದೆ. ಇನ್ನು ಮುಂದೆ ಮತ್ತಷ್ಟು ಜನಪರ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶವನ್ನು ಹೊಂದಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications