ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ಮುಂದಾದ ರಾಮಚಂದ್ರಾಪುರ ಮಠ
ಬೆಂಗಳೂರು, ಜೂನ್ 17: ವಿಷ್ಣುಗುಪ್ತ (ಚಾಣಕ್ಯ) ಹೆಸರಿನ ವಿಶ್ವವಿದ್ಯಾಪೀಠದ ಮಹಾಸಂಕಲ್ಪದ ಸಾಕಾರಕ್ಕಾಗಿ ರಾಘವೇಶ್ವರ ಶ್ರೀಗಳು ಜೂನ್ ತಿಂಗಳ 20ರಿಂದ ಸಮಗ್ರ ರಾಮಾಯಣ ಪ್ರವಚನ ಆರಂಭಿಸಲಿದ್ದಾರೆ. ರಾಘವೇಶ್ವರ ಸ್ವಾಮಿಗಳು ಪೀಠಾರೋಹಣ ಮಾಡಿ 25 ವಸಂತಗಳು ತುಂಬಿದ್ದು, ಸುವರ್ಣಯುಗ ಆರಂಭದ ನೆನಪಿಗಾಗಿ ಈ ವಿಶಿಷ್ಟ ಕೊಡುಗೆಯನ್ನು ರಾಮಚಂದ್ರಾಪುರ ಮಠ ಸಮಾಜಕ್ಕೆ ನೀಡುತ್ತಿದೆ.
ದೇಸಿ ಗೋವಂಶ ರಕ್ಷಣೆಗಾಗಿ ಕಳೆದ ವರ್ಷ ವಿಶ್ವದ ಏಕೈಕ ಗೋಸ್ವರ್ಗವನ್ನು ಸಮಾಜಕ್ಕೆ ನೀಡಿದ್ದ ಶ್ರೀಮಠ ಇದೀಗ ಆದಿಗುರು ಶಂಕರಾಚಾರ್ಯರಿಗೆ ಕಿರುಗಾಣಿಕೆಯಾಗಿ ದೇಸಿ ವಿದ್ಯೆಗಳ ಪುನರುತ್ಥಾನಕ್ಕೆ ಮುಡಿಪಾಗಿರುವ ವಿಶ್ವವಿದ್ಯಾಪೀಠವನ್ನು ಸಮರ್ಪಿಸುತ್ತಿದೆ. "ಬಾಳದಾರಿಗೆ ರಾಮದೀವಿಗೆ" ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರು ಗಿರಿನಗರದಲ್ಲಿರುವ ರಾಮಾಶ್ರಮದಲ್ಲಿ ಪ್ರತಿದಿನ ಸಂಜೆ 6.45ರಿಂದ 8.15ರವರೆಗೆ ಆರು ತಿಂಗಳ ಕಾಲ ಎಡೆಬಿಡದೇ ಸಮಗ್ರ ರಾಮಾಯಣ ಪ್ರವಚನ ಶ್ರೀಗಳಿಂದ ನಡೆಯಲಿದೆ.
ಧಾರಾ ರಾಮಾಯಣದ ಮೂಲಕ ಇಡೀ ಸಮಾಜದಲ್ಲಿ ಧರ್ಮಜಾಗೃತಿ ಹಾಗೂ ದೇಶದ ಸಂಸ್ಕೃತಿ ಪುನರುತ್ಥಾನಕ್ಕೆ ನಾಂದಿ ಹಾಡುವ ವಿಶ್ವವಿದ್ಯಾಪೀಠವೊಂದರ ಸ್ಥಾಪನೆಯ ಅಗತ್ಯತೆ- ಅನಿವಾರ್ಯತೆ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಸಂಕಲ್ಪ ಶ್ರೀಗಳದ್ದು. ಧಾರಾ ರಾಮಾಯಣದ ಮೂಲಕ ಈ ಸಂದೇಶವನ್ನು ಸಮಸ್ತ ಕನ್ನಡ ಕುಲಕೋಟಿಗೆ ತಲುಪಿಸುವ ಕಾರ್ಯಯೋಜನೆಯನ್ನು ಮಠದ ಕಡೆಯಿಂದ ಹಮ್ಮಿಕೊಳ್ಳಲಾಗಿದೆ.

ಭರತಖಂಡದ ಸುವರ್ಣಯುಗದ ಕುರುಹಾಗಿ ಉಳಿದಿರುವ ತಕ್ಷಶಿಲೆ ವಿಶ್ವವಿದ್ಯಾನಿಲಯದ ಪುನರವತರಣ ಮತ್ತು ಧರ್ಮಯೋಧರ ಸೃಷ್ಟಿ ಈ ಯೋಜಿತ ವಿಶ್ವವಿದ್ಯಾಪೀಠದ ಮೂಲಧ್ಯೇಯವಾಗಿದೆ. ನಮ್ಮ ಪೂರ್ವಜರು ಕಂಡುಕೊಂಡ ಒಂದೊಂದು ವಿದ್ಯೆಯೂ ಪಾಶ್ಚಿಮಾತ್ಯ ದಾಳಿಯ ಪ್ರಭಾವಕ್ಕೆ ಸಿಲುಕಿ ರೂಪುಗೆಟ್ಟಿದೆ ಅಥವಾ ಅರ್ಥ ಕಳೆದುಕೊಂಡಿದೆ. ಉಳಿದವು ಅಳಿವಿನ ಅಂಚಿನಲ್ಲಿವೆ. ಅಳಿದುಳಿದ ವಿದ್ಯೆಗಳ ಪುನರುಜ್ಜೀವನ ಉದ್ದೇಶಿತ ವಿಶ್ವವಿದ್ಯಾಪೀಠದ ಉದ್ದೇಶ ಎಂದು ರಾಮಚಂದ್ರಾಪುರ ಮಠ ಹೇಳಿದೆ.
ದಾಖಲೆ ಹತ್ತು ತಿಂಗಳ ಅವಧಿಯಲ್ಲಿ ಪರಿಪೂರ್ಣ ವಿಶ್ವವಿದ್ಯಾಪೀಠವನ್ನು ಸಮಾಜಕ್ಕೆ ಸಮರ್ಪಿಸಲು ಉದ್ದೇಶಿಸಲಾಗಿದೆ. ಭಾರತೀಯ ವಿದ್ಯೆಗಳನ್ನು ಉಳಿಸಿ ಬೆಳೆಸುವುದು ಹಾಗೂ ದೇಶರಕ್ಷಣೆ- ಧರ್ಮರಕ್ಷಣೆಗೆ ಬದ್ಧರಾದ, ಸಂಸ್ಕತಿಯ ಆಳ ಅರಿವು ಇರುವ ಧರ್ಮಯೋಧರನ್ನು ಸಿದ್ಧಪಡಿಸುವುದು ಈ ವಿಶ್ವವಿದ್ಯಾಪೀಠದ ಉದ್ದೇಶ.

ತಕ್ಷಶಿಲೆ ವಿಶ್ವವಿದ್ಯಾನಿಲಯದಲ್ಲಿ ಆಚಾರ್ಯ ವಿಷ್ಣುಗುಪ್ತ ಚಾಣಕ್ಯನು ಧರ್ಮಯೋಧ ಚಂದ್ರಗುಪ್ತನನ್ನು ಸೃಷ್ಟಿಸಿ ಆತನ ಮೂಲಕ ನಂದನ ಅಂಧಕಾರಶಾಸನವನ್ನು ಕೊನೆಗೊಳಿಸಿ ಧರ್ಮಸಾಮ್ರಾಜ್ಯ ಉದಯಕ್ಕೆ ಕಾರಣನಾದಂತೆ ವಿಶ್ವವಿದ್ಯಾಪೀಠದ ಮಡಿಲಲ್ಲಿ ವಿಶ್ವವಿಜಯೀ ವಿದ್ಯಾವೀರರನ್ನು ಸೃಜಿಸುವ ಮೂಲಕ ಭಾರತವರ್ಷದಲ್ಲಿ ಮತ್ತೊಮ್ಮೆ ರಾಮರಾಜ್ಯವನ್ನು ಉದಯಗೊಳಿಸುವುದು, ಧರ್ಮಪ್ರಭುತ್ವವನ್ನು ಮರಳಿ ಸ್ಥಾಪಿಸುವುದು ಯೋಜಿತ ವಿಶ್ವವಿದ್ಯಾಪೀಠದ ಧ್ಯೇಯವಾಗಿದೆ.
ಶಂಕರಾಚಾರ್ಯರು ಮೂರು ಬಾರಿ ಭೇಟಿ ನೀಡಿದ ಮತ್ತು ಹಲವು ತಿಂಗಳ ಕಾಲ ವಾಸವಿದ್ದ, ಶಂಕರರ ಜ್ಞಾನಶಿಶು ಎನಿಸಿದ ರಾಮಚಂದ್ರಾಪುರ ಮಠದ ಮೂಲಸ್ಥಾನ, ಗೋಕರ್ಣ ಸಮೀಪದ ಅಶೋಕೆಯ ಸ್ವಚ್ಛ, ಸುಂದರ ಪರಿಸರದಲ್ಲಿ ನೂತನ ವಿಶ್ವವಿದ್ಯಾಪೀಠ ತಲೆ ಎತ್ತಲಿದೆ. ವಿಶ್ವದಲ್ಲಿ ಎಲ್ಲೂ ಇಲ್ಲದಂಥ ಅಪೂರ್ವ ವಿದ್ಯಾಪೀಠ ಆದಿಶಂಕರರ ನೆನಪಿನಲ್ಲಿ ಅವರಿಗೇ ಸಮರ್ಪಣೆಯಾಗಲಿದೆ.
ವಿಶ್ವವಿದ್ಯಾಪೀಠದಲ್ಲಿ ವಿಕಾಸಗೊಂಡ ವಿದ್ಯಾರ್ಥಿ ಬಾಹ್ಯಜಗತ್ತಿನಲ್ಲಿ ಅಪ್ರಸ್ತುತನಾಗಬಾರದು ಎಂಬ ಕಾರಣಕ್ಕೆ ಇಂಗ್ಲಿಷ್, ಹಿಂದಿ ಮೊದಲಾದ ಆಧುನಿಕ ಸಮಾಜ ಭಾಷೆಗಳ ಅಧ್ಯಯನಕ್ಕೂ ಅವಕಾಶ ಇರುತ್ತದೆ. ಸಮಾಜದ ಎಲ್ಲ ವರ್ಗದವರಿಗೂ ಇಲ್ಲಿ ಅವಕಾಶವಿದ್ದು, ಅವರವರಿಗೆ ಸಲ್ಲುವ ವಿದ್ಯೆಗಳನ್ನು ಅವರು ಪಡೆದುಕೊಳ್ಳಬಹುದಾಗಿದೆ. ಒಂದು ವಿಷಯದಲ್ಲಿ ವಿದ್ಯಾರ್ಥಿ ಪರಿಪೂರ್ಣ ಪರಿಣತಿ ಪಡೆಯುವಂತೆ ರೂಪಿಸುವ ಜತೆಜತೆಗೆ ಬಾಕಿ ವಿದ್ಯೆಗಳ ಪರಿಚಯ ಇಲ್ಲಿನ ವಿದ್ಯಾವಿನ್ಯಾಸ ಎಂದು ಶ್ರೀಮಠ ಹೇಳಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications