• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶ

|

ಬೆಂಗಳೂರು,ಜನವರಿ 12: ಬೆಂಗಳೂರು ಬಸವನಗುಡಿಯ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ಅವರು ಸ್ವಾಮಿ ವಿವೇಕಾನಂದ ಜನ್ಮದಿನದಂದೇ ವಿಧಿವಶರಾಗಿದ್ದಾರೆ.

91 ವರ್ಷ ವಯಸ್ಸಾಗಿದ್ದ ಹರ್ಷಾನಂದ ಅವರಿಗೆ ಇಂದು ಮಧ್ಯಾಹ್ನ 1.05ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.

ಅವರು ಕನ್ನಡ, ಇಂಗ್ಲಿಷ್ ಮತ್ತು ಸಂಸ್ಕೃತದಲ್ಲಿ ಹಲವು ಪುಸ್ತಕಗಳನ್ನು ಅವರು ಬರೆದಿದ್ದಾರೆ. ಅವರು ಕೆಲವು ಕೃತಿಗಳು ಫ್ರೆಂಚ್, ಕೊರಿಯನ್ ಮತ್ತು ಇಂಡೋನೇಷಿಯನ್ ಭಾಷೆಗಳಿಗೂ ಅನುವಾದಗೊಂಡಿದೆ.

1962ರಲ್ಲಿ ಮಠದ 8ನೇ ಅಧ್ಯಕ್ಷರಾಗಿದ್ದ ಸ್ವಾಮಿ ವಿಶುದ್ಧಾನಂದರಲ್ಲಿ ಸನ್ಯಾಸಿ ಧೀಕ್ಷೆಯನ್ನು ಸ್ವೀಕರಿಸಿದ್ದರು. ಮಂಗಳೂರು, ಮೈಸೂರು, ಬೇಲೂರು ಮಠ ಮತ್ತು ಅಲಹಾಬಾದ್ ರಾಮಕೃಷ್ಣ ಮಠಗಳಲ್ಲೂ ಇವರು ಕಾರ್ಯ ನಿರ್ವಹಿಸಿದ್ದರು.

ಬುಧವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಮಠದಲ್ಲಿ ಅವರ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಹಿಂದೂ ಧರ್ಮದ ಬಗ್ಗೆ ಹರ್ಷಾನಂದ ಅವರು ಹಲವು ಪುಸ್ತಕಗಳನ್ನು ಬರೆದಿದ್ದರು. Encyclopedia of Hinduism ಎಂಬ ಮಹತ್ತರ ಕೃತಿಯನ್ನು ರಚಿಸಿದ್ದಾರೆ.

ಹರ್ಷಾನಂದ ಅವರ ನಿಧನಕ್ಕೆ ಆದಿಚುಂಚನಗಿರಿ ಮಠದ ಶ್ರೀಗಳಾದ ನಿರ್ಮಲಾನಂದನಾಥ ಅವರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ರಾಮಕೃಷ್ಣ ಪರಮಹಂಸ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಎತ್ತಿ ಹಿಡಿದ ವಿದ್ವಾಂಸರು, ಉತ್ತಮ ವಾಗ್ಮಿಗಳೂ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಭಗವಂತನು ಅವರಿಗೆ ಮೋಕ್ಷವನ್ನು ಕರುಣಿಸಲಿ, ಅವರ ಅನುಯಾಯಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

   Engineering ವಿಧ್ಯಾರ್ಥಿಗಳಿಗೆ ಸಿಹಿ ಸುದ್ದಿ!! ಕೊಟ್ಟ ಎಜುಕೇಶನ್ ಮಿನಿಸ್ಟರ್ | Suresh Kumar | Oneindia Kannada

   ಸ್ವರ್ಗೀಯ ಪೂಜ್ಯ ಹರ್ಷಾನಂದಜೀ ಮಹಾರಾಜರು ಓರ್ವ ಅಪರೂಪದ ಸಂತರು. ಅತ್ಯುನ್ನತ ಆಧ್ಯಾತ್ಮಿಕ ಸಾಧಕರಾಗಿ,ಉತ್ತಮ ಬರಹಗಾರು, ವಾಗ್ಮಿಗಳಾಗಿದ್ದವರು. ನೂರಾರು ಸಾಧಕರಿಗೆ, ಸಾಮಾನ್ಯರಿಗೆ ನಿರಂತರ ಮಾರ್ಗದರ್ಶನ ಮಾಡುತ್ತಿದ್ದವರು. ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶ್ರದ್ಧಾಂಜಲಿಯನ್ನು ಸಮರ್ಪಿಸುತ್ತದೆ.ವಿ. ನಾಗರಾಜ್

   ಕ್ಷೇತ್ರೀಯ ಸಂಘಚಾಲಕ, ರಾಷ್ಟ್ರೀಯ ಸ್ವಯಂಸೇವಕ ಸಂಘ

   English summary
   Bengaluru Ramakrishna Mutt Seer Swami Harshananda Passed Away In Bengaluru On January 12.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X