ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಮಲಿಂಗಾರೆಡ್ಡಿ ಪತ್ರ!

ಬೆಂಗಳೂರು, ಅ. 15: ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಕೊರೊನಾ ವೈರಸ್ ಸಂಕಷ್ಟದ ಕಾಲದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಸತಿ, ವಾಣಿಜ್ಯ ಹಾಗೂ ಕೈಗಾರಿಕಾ ಕಟ್ಟಡಗಳ ಕಂದಾಯವನ್ನು ಶೇಕಡಾ 15 ರಿಂದ 30ರಷ್ಟು ಹೆಚ್ಚಿಸಲಾಗಿರುವ ನಿರ್ಧಾರ ಸರಿಯಲ್ಲ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಉದ್ಯೋಗ ಅರಸಿ ಸಾವಿರಾರು ಜ‌ನರು ಬೆಂಗಳೂರಿಗೆ ಬಂದು ನೆಲಸಿದ್ದಾರೆ. ಕೋವಿಡ್‌ನಿಂದಾಗಿ ಅವರೆಲ್ಲರ ವ್ಯಾಪಾರ ವಹಿವಾಟು ಸಂಪೂರ್ಣ ತಟಸ್ಥವಾಗಿದೆ. ವಾಣಿಜ್ಯ ಕಟ್ಟಡಗಳ ಬಾಡಿಗೆ ಕಟ್ಟಲಾಗದೇ ವ್ಯಾಪಾರಸ್ಥರು, ಖಾಸಗಿ ಕಂಪನಿಗಳು, ಅಂತಾರಾಷ್ಟ್ರೀಯ ಕಂಪನಿಗಳ ಶೋ ರೂಂಗಳು ವ್ಯಾಪಾರ ವಹಿವಾಟು ಕುಂಠಿತವಾಗಿರುವುದರಿಂದ ಬಾಡಿಗೆ ಕಟ್ಟಲಾಗದೇ ನಷ್ಠ ಅನುಭವಿಸಿ ಬಾಡಿಗೆ ಕಟ್ಟಲಾಗದೇ ಬಂದ್ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಕಂದಾಯ ಹೆಚ್ಚಿಸಿದರೆ ಸಮಸ್ಯೆ ಆಗಲಿದೆ. ಹೀಗಾಗಿ ಈ ಹೆಚ್ಚಳದ ಪ್ರಸ್ಥಾವನೆ ಕೈಬಿಡಬೇಕು ಎಂದು ಪತ್ರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಮಲಿಂಗಾರೆಡ್ಡಿ ಒತ್ತಾಯಿಸಿದ್ದಾರೆ.

ramalinga reddy letter to yediyurappa regarding building tax increase in bbmp limits

ಬಿಬಿಎಂಪಿ ಅಕ್ರಮ ತನಿಖೆಗೆ ನಾಗರಿಕರ ಸಮಿತಿ ರಚಿಸಿ: ಎಎಪಿ

ಬೆಂಗಳೂರಿನಲ್ಲಿ ಕಟ್ಟಡಗಳ ಮಾಲೀಕರು ಬಾಡಿಗೆಯನ್ನೇ ಜೀವನಾಧಾರವಾಗಿ ಬಂದಿದ್ದಾರೆ. ಈಗ ಬಾಡಿಗೆದಾರರಿಲ್ಲದೆ, ನಿಗದಿತ ಆದಾಯವಿಲ್ಲದೆ ಬ್ಯಾಂಕ್‌ಗಳ ಕಂತು ಕಟ್ಟಲಾರದೇ ಪರಿತಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಂದಾಯ ಹೆಚ್ಚಿಸುವುದನ್ನು ಮುಂದೂಡಬೇಕು. ಈ ಕುರಿತು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ರಾಮಲಿಂಗಾರೆಡ್ಡಿ ಒತ್ತಾಯ ಮಾಡಿದ್ದಾರೆ.

Recommended Video

      Cinema Halls to Re-open : ಸಿನಿ ಪ್ರೇಕ್ಷಕರಿಗೆ ಸಿಹಿ ಸುದ್ದಿ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+