GST Tax: ಸಣ್ಣ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್: ಕ್ಲಾರಿಟಿ ಕೊಟ್ಟ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ಇತ್ತೀಚೆಗೆ ಸಣ್ಣ ವ್ಯಾಪಾರಿಗಳ ಮೇಲೆ ಜಿಎಸ್‌ಟಿ ಅಧಿಕಾರಿಗಳು ನೋಟಿಸ್ ನೀಡಿ ತೆರಿಗೆ, ಅದಕ್ಕೆ ಬಡ್ಡಿ, ಇತರ ಬಡ್ಡಿ ಸೇರಿ ಆರ್ಥಿಕವಾಗಿ ಹೊರೆ ಮಾಡುತ್ತಿದ್ದಾರೆ. ಇದಕ್ಕೆಲ್ಲ ರಾಜ್ಯ ಸರ್ಕಾರ ಕಾರಣ ಎಂದು ಬಿಜೆಪಿ ಗಂಭೀರ ಆರೋಪ ಮಾಡಿತ್ತು. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಬೆನ್ನಲ್ಲೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೆಲವು ವಿಚಾರಗಳನ್ನು ಸ್ಪಷ್ಟಪಡಿಸಿದ್ದಾರೆ. ಜಿಎಸ್‌ಟಿ ವ್ಯವಸ್ಥೆ ಬಗ್ಗೆ ವಿವರಣೆ ಕೊಟ್ಟಿದ್ದಾರೆ.

ಸಣ್ಣ ವ್ಯಾಪಾರಿಗಳಿಗೆ ತೆರಿಗೆ ವಿಧಿಸುತ್ತಿರುವ ಬಗ್ಗೆ ರಾಜ್ಯದಲ್ಲಿ ಚರ್ಚೆ ಆಗುತ್ತಿದೆ. ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್ ಟಿ ಶಾಕ್ ಕೊಟ್ಡಿರುವಂಥದ್ದು ಅತ್ಯಂತ ಖಂಡನೀಯ. ಜಿಎಸ್ ಟಿ ಕಾನೂನು ಅಡಿಯಲ್ಲಿ ವ್ಯಾಪಾರ ವಹಿವಾಟು ಮಾಡಲು ಕೆಲವು ರಿಯಾಯ್ತಿ ಇದೆ. ಆ ರಿಯಾಯಿತಿ ನಂತರ ತೆರಿಗೆ ಕಟ್ಟಬೇಕೆಂಬ ಪದ್ಧತಿ ಇದೆ. ರಾಜ್ಯ ಸರ್ಕಾರವೇ ಬಲವಂತವಾಗಿ ತೆರಿಗೆ ವಸೂಲಿ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ದೂರಿದ್ದರು.

Ramalinga Reddy Says Centre Not Karnataka Govt Responsible for GST Notices to Small Traders

GST ಕೌನ್ಸಿಲ್ ನಿರ್ಧಾರಕ್ಕೆ ರಾಜ್ಯ ಸರ್ಕಾರ ಹೊಣೆ ಅಲ್ಲ

ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ರಾಮಲಿಂಗಾ ರೆಡ್ಡಿ ಅವರು, ''ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್‌ನಿಂದ ತೆರಿಗೆ ನೋಟೀಸ್ ನೀಡಲಾಗುತ್ತಿದೆ. ಅದಕ್ಕೆ ರಾಜ್ಯ ಸರ್ಕಾರ ಹೊಣೆ ಎಂದು ಗೂಬೆ ಕೂರಿಸುತ್ತಿರುವ ಬಿ.ಜೆ.ಪಿ ಅವರೇ, ಮಗುವನ್ನು ಅಳುವಂತೆ ಮಾಡುವುದು ನೀವೇ, ನಂತರ ತೊಟ್ಟಿಲು ತೂಗುವುದು ನೀವೇ?. ಎಷ್ಟು ಕಾಲದ ಮೇಲೆಯೂ ಡ್ರಾಮವನ್ನು ಮುಂದುವರಿಸುವ ಇರಾದೆ ನಿಮಗಿದೆ?'' ಎಂದು ಪ್ರಶ್ನಿಸಿದ್ದಾರೆ.

GST ವ್ಯವಸ್ಥೆಯು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಜಿ ಎಸ್‌ ಟಿ ಕೌನ್ಸಿಲ್ ಕೂಡ ಕೇಂದ್ರ ಸರ್ಕಾರದಡಿಯಲ್ಲಿ ಕೆಲಸ ಮಾಡುತ್ತದೆ ಎಂಬುದು ತಮಗೆ ತಿಳಿದಿಲ್ಲವೇ? ಅಥವಾ ತಿಳಿದು ಕೂಡ ಅಸಹಾಯಕರಾಗಿ, ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ತಾಕತ್ತಿಲ್ಲದೆ ಜನರನ್ನು ದಾರಿ ತಪ್ಪಿಸಲು ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ತಮ್ಮ‌ಹುನ್ನಾರವೇ? ಎಂದು ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟರು.

ಕೇಂದ್ರದ ಮೂಲಕ ಸಮಸ್ಯೆ ಪರಿಹರಿಸಿ..

ಜಿ ಎಸ್ ಟಿ ಕೌನ್ಸಿಲ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ರಾಜ್ಯ ಸರ್ಕಾರ ನೇರ ಹೊಣೆಯಲ್ಲ. ತಮ್ಮ ಕುತಂತ್ರ ಆರೋಪಗಳು ಫಲಿಸುವುದಿಲ್ಲ. ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳಿಗೆ ನಿಜವಾಗಿಯೂ ಸಹಾಯ ಮಾಡುವ ಕಾಳಜಿ‌ ಇದ್ದಲ್ಲಿ, ಕೇಂದ್ರ ಸರ್ಕಾರಕ್ಕೆ ನಿಯೋಗ ತೆರಳಿ ಈ ಸಮಸ್ಯೆ ಪರಿಹರಿಸಿ, ಅದು ಬಿಟ್ಟು, ವ್ಯಾಪಾರಿಗಳಿಗೆ ಉಚಿತವಾಗಿ ಅಡಿಟರ್ ಸಲಹೆ ನೀಡುತ್ತೀವೆ ಎಂದು ಜಾಹೀರಾತು ಹಾಕಿ ತಮ್ಮ ಮಾರ್ಯಾದೆಯನ್ನು ಮತ್ತಷ್ಟು ಕಳೆದುಕೊಳ್ಳಬೇಡಿ.

ಬಿ.ಜೆ.ಪಿ ಯವರೇ ನಾಚಿಕೆ‌, ಮಾನ, ಮಾರ್ಯಾದೆ ಎಂಬ ಪದಕ್ಕೆ ಅರ್ಥವೇನಾದರೂ ಗೊತ್ತಿದ್ದರೆ ,ಸತ್ಯ ಮಾತನಾಡುವುದನ್ನು ಕಲಿಯಿರಿ... ಎಂದು ಸಚಿವರು ತಿರುಗೇಟು ನೀಡಿದರು. ರಾಜ್ಯದ ವ್ಯಾಪಾರಿಗಳ ಮೇಲೆ ತೆರಿಗೆ ಕಟ್ಟುವ ವಿಚಾರದ ಕುರಿತು ಸ್ಪಷ್ಟಪಡಿಸಿದ ಅವರು, ಇದೆಲ್ಲದ್ದಕ್ಕೂ ಕೇಂದ್ರ ಸರ್ಕಾರವೇ ಕಾರಣ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+