ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಶ್ಲೀಲ ಸಿಡಿ ಪ್ರಕರಣ ಕುರಿತು ಹೈಕೋರ್ಟ್ ನಲ್ಲಿ ಐದು ಅರ್ಜಿ ವಿಚಾರಣೆ!

|
Google Oneindia Kannada News

ಬೆಂಗಳೂರು, ಜೂ. 23: ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಿಸಿರುವ 'ಬ್ಲಾಕ್ ಮೇಲ್ -ಬೆದರಿಕೆ' ಪ್ರಕರಣ ರದ್ದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ನ ಜನ ಪ್ರತಿನಿಧಿಗಳ ವಿಶೇಷ ಪೀಠ ವಿಚಾರಣೆ ನಡೆಸಿತು. ಇದರ ಜತೆಗೆ ಬೇರೆ ಅರ್ಜಿಗಳ ವಿಚಾರಣೆ ಕೂಡ ನಡೆಯಿತು. ಬುಧವಾರ ವಿಚಾರಣೆಗೆ ಬಂದ ಅರ್ಜಿಗಳ ಸಮಗ್ರ ವಿವರ ಇಲ್ಲಿದೆ ನೋಡಿ. ಕಾನೂನು ಸಮರದಲ್ಲಿ ಯಾರು ಜಯ ಗಳಿಸುತ್ತಾರೆ ಎಂಬ ಕುತೂಹಲ ಕೆಳಿಸಿದೆ.

ಜನ ಪ್ರತಿನಿಧಿಗಳ ವಿಶೇಷ ಪೀಠಕ್ಕೆ ಜಾರಕಿಹೊಳಿ ಪ್ರಕರಣ ವರ್ಗಾವಣೆ ಜನ ಪ್ರತಿನಿಧಿಗಳ ವಿಶೇಷ ಪೀಠಕ್ಕೆ ಜಾರಕಿಹೊಳಿ ಪ್ರಕರಣ ವರ್ಗಾವಣೆ

ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ

ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ

ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರು ವಿಚಾರಣೆ ಕೈಗೆತ್ತಿಕೊಂಡರು. ಇದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ವಿಭಾಗೀಯ ಪೀಠಕ್ಕೆ ಅರ್ಜಿಯನ್ನು ವರ್ಗಾವಣೆ ಮಾಡಬೇಕು ಎಂದು ಎಸ್ಐಟಿ ಪರ ವಿಶೇಷ ಅಭಿಯೋಜಕರು ಮನವಿ ಮಾಡಿದರು. ಇದಕ್ಕೆ ಸಂತ್ರಸ್ತೆ ಪರ ವಕೀಲರಾದ ಸಂಕೇತ ಏಣಗಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಪ್ರಸ್ತುತ ಪ್ರಕರಣ ಜನಪ್ರತಿನಿಧಿಯೊಬ್ಬರಿಗೆ ಸೇರಿದ್ದಾಗಿದೆ. ಇದು ವಿಶೇಷ ಪೀಠಕ್ಕೆ ವರ್ಗಾವಣೆಯಾಗಿದ್ದು, ಮರು ವರ್ಗಾವಣೆಯ ಅವಶ್ಯಕತೆ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಅರ್ಜಿಗೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ವಕೀಲರು ಲಿಖಿತ ಹೇಳಿಕೆ ದಾಖಲಿಸಲು ನ್ಯಾಯಾಲಯ ಸೂಚಿಸಿತು. ಅರ್ಜಿಯ ಮುಂದಿನ ವಿಚಾರಣೆಯನ್ನು ಜು. 6 ಕ್ಕೆ ಮುಂದೂಡಲಾಗಿದೆ.

ಮತ್ತೆ ರಾಜಕೀಯ ಮೇಲಾಟ: ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ?ಮತ್ತೆ ರಾಜಕೀಯ ಮೇಲಾಟ: ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ?

ಇನ್ನೂ ಐದು ಅರ್ಜಿ ವಿಚಾರಣೆ

ಇನ್ನೂ ಐದು ಅರ್ಜಿ ವಿಚಾರಣೆ

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇನ್ನೂ ಐದು ಅರ್ಜಿಗಳ ವಿಚಾರಣೆ ಬಾಕಿಯಿದೆ. ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಮಹತ್ವ ಪಡೆದುಕೊಂಡಿದೆ. ಸಂತ್ರಸ್ತ ಯುವತಿ ತಂದೆ ಸಲ್ಲಿಸಿದ್ದ ಅರ್ಜಿ ಯಷ್ಟೇ ಇತ್ಯರ್ಥವಾಗದ್ದು, ಉಳಿದ ಪ್ರಕರಣಗಳ ವಿಚಾರಣೆ ಇಂದು ನ್ಯಾಯಾಲಯದ ಮುಂದೆ ಬರಲಿದೆ.

ಇಂದಿರಾ ಜೈಸಿಂಗ್ ವಾದ ಮಂಡನೆ

ಇಂದಿರಾ ಜೈಸಿಂಗ್ ವಾದ ಮಂಡನೆ

ಇನ್ನು ರಮೇಶ್ ಜಾರಕಿಹೊಳಿ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಇದೇ ಅರ್ಜಿ ವಿಚಾರಣೆ ಕೂಡ ಮುಖ್ಯ ನ್ಯಾಯಮೂರ್ತಿ ಒಳಗೊಂಡ ಪೀಠದ ಮುಂದೆ ಬಂತು. ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ವಾದ ಮಂಡಿಸಿದರು. ಎಸ್ಐಟಿ ಅಧಿಕಾರಿಗಳು ಪಕ್ಷಪಾತವಾಗಿ ನಡೆದುಕೊಂಡಿದ್ದಾರೆ. ಎಸ್ಐಟಿ ತನಿಖೆ ಬಗ್ಗೆ ಅನುಮಾನವಿದೆ ಎಂದು ಈ ಹಿಂದೆ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ಎಂದು ಸಂತ್ರಸ್ತ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ನ್ಯಾಯಾಲಕ್ಕೆ ಮನವಿ ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪದ್ಮಶ್ರೀ ಪುರಸ್ಕೃತ ಇಂದಿರಾ ಜೈಸಿಂಗ್ ಎಂಟ್ರಿರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪದ್ಮಶ್ರೀ ಪುರಸ್ಕೃತ ಇಂದಿರಾ ಜೈಸಿಂಗ್ ಎಂಟ್ರಿ

Recommended Video

Ramesh Jarkiholiಗೆ ನೋಟೀಸ್ ನೀಡಿದ ಕೋರ್ಟ್ | Oneindia Kannada
ಜಾರಕಿಹೊಳಿ ಪರ ವಕೀಲರ ಆಕ್ಷೇಪಣೆ

ಜಾರಕಿಹೊಳಿ ಪರ ವಕೀಲರ ಆಕ್ಷೇಪಣೆ

ಎಸ್ ಐಟಿ ಸಮರ್ಥ ತನಿಖೆ ನಡೆಸುತ್ತಿದೆ. ಮೂರನೇ ವ್ಯಕ್ತಿ ಈ ಪ್ರಕರಣದಲ್ಲಿ ಸಿಬಿಐ ತನಿಖೆ ಕೋರುವುದು ಸೂಕ್ತವಲ್ಲ. ನ್ಯಾಯಾಲಯದ ಕಣ್ಗಾವಲಿನಲ್ಲಿ ಎಸ್ಐಟಿ ತನಿಖೆ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ರಮೇಶ್ ಜಾರಕಿಹೊಳಿ ಪರ ವಕೀಲ ಸಿ.ವಿ. ನಾಗೇಶ್ ಮನವಿ ಮಾಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ್ದ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ ಮಾಧ್ಯಮಗಳಲ್ಲಿ ನೂರು ದಿನ ನಿರಂತರ ಸುದ್ದಿ ಪ್ರಸಾರವಾಗಿತ್ತು. ಅಂತೂ ಒಂದಕ್ಕೊಂದು ಅರ್ಜಿ ಗುಜರಾಯಿಸಿ ಐದಕ್ಕೂ ಹೆಚ್ಚು ಅರ್ಜಿಗಳು ಹೈಕೋರ್ಟ್ ನಲ್ಲಿವೆ. ಒಂದು ಪ್ರಕರಣದಲ್ಲಿ ಈ ಪರಿಯ ಅರ್ಜಿಗಳು ಸಲ್ಲಿಕೆಯಾಗಿರುವುದು ಇದೇ ಮೊದಲು.

English summary
The legal battle over the Ramesh Jarkiholi CD case has just come to an end. Five cases related to Jarkliholi CD case are being heard in High Court know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X