ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಸಿಎಂ ಭೇಟಿಯಾದ ಗೃಹ ಸಚಿವರು

ಬೆಂಗಳೂರು, ಮಾರ್ಚ್ 02; ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಚಿವರ ವಿರುದ್ಧ ದೂರು ದಾಖಲಾಗಿದೆ.

ಮಂಗಳವಾರ ಸಂಜೆ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಕರ್ನಾಟಕದ ಬಿಜೆಪಿ ಸರ್ಕಾರ ಮುಜುಗರ ಅನುಭವಿಸಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬುಧವಾರ ಮಧ್ಯಾಹ್ನ 2 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು.

Ramesh Jarkiholi Sex CD Case: Basavaraj Bommai Meets Yediyurappa

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಚಿವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು. ಆಯುಕ್ತರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಚಿವರ ವಿರುದ್ಧ ದೂರು ದಾಖಲಿಸಿಕೊಳ್ಳಲು ಸೂಚನೆ ನೀಡಿದ್ದಾರೆ.

ಅಧಿವೇಶನ; ಮಾರ್ಚ್ 4ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 31ರ ತನಕ ಅಧಿವೇಶನ ನಡೆಯಲಿದ್ದು, ರಮೇಶ್ ಜಾರಕಿಹೊಳಿ ಸಿಡಿ ವಿಚಾರ ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸುವ ನಿರೀಕ್ಷೆ ಇದೆ. ಅಧಿವೇಶನ ಆರಂಭವಾಗುವ ಹೊತ್ತಿನಲ್ಲೇ ಸರ್ಕಾರ ತೀವ್ರ ಮುಜುಗರ ಎದುರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+