ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಸಿಎಂ ಭೇಟಿಯಾದ ಗೃಹ ಸಚಿವರು

|
Google Oneindia Kannada News

ಬೆಂಗಳೂರು, ಮಾರ್ಚ್ 02; ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಚಿವರ ವಿರುದ್ಧ ದೂರು ದಾಖಲಾಗಿದೆ.

ಮಂಗಳವಾರ ಸಂಜೆ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಕರ್ನಾಟಕದ ಬಿಜೆಪಿ ಸರ್ಕಾರ ಮುಜುಗರ ಅನುಭವಿಸಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬುಧವಾರ ಮಧ್ಯಾಹ್ನ 2 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದಾರೆ.

 ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ ದೂರಿನಲ್ಲಿ ಏನಿದೆ? ಸಂಪೂರ್ಣ ವಿವರ ಇಲ್ಲಿದೆ ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ ದೂರಿನಲ್ಲಿ ಏನಿದೆ? ಸಂಪೂರ್ಣ ವಿವರ ಇಲ್ಲಿದೆ

ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಗೋಕಾಕ್‌ನಲ್ಲಿ ಪವರ್ ಕಟ್ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಗೋಕಾಕ್‌ನಲ್ಲಿ ಪವರ್ ಕಟ್

Ramesh Jarkiholi Sex CD Case: Basavaraj Bommai Meets Yediyurappa

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಚಿವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು. ಆಯುಕ್ತರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಚಿವರ ವಿರುದ್ಧ ದೂರು ದಾಖಲಿಸಿಕೊಳ್ಳಲು ಸೂಚನೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಕಾಂಗ್ರೆಸ್ ಸರಣಿ ಟ್ವೀಟ್ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಕಾಂಗ್ರೆಸ್ ಸರಣಿ ಟ್ವೀಟ್

Recommended Video

ರಮೇಶ್ ಜಾರಕಿಹೊಳಿ 'ಸಿಡಿ' ವಿಚಾರದಲ್ಲಿ ನಿಶ್ಪಕ್ಷಪಾತ ತನಿಖೆಯ ಭರವಸೆ ನೀಡಿದ ಗೃಹ ಸಚಿವ ಬೊಮ್ಮಾಯಿ | Oneindia Kannada

ಅಧಿವೇಶನ; ಮಾರ್ಚ್ 4ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 31ರ ತನಕ ಅಧಿವೇಶನ ನಡೆಯಲಿದ್ದು, ರಮೇಶ್ ಜಾರಕಿಹೊಳಿ ಸಿಡಿ ವಿಚಾರ ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸುವ ನಿರೀಕ್ಷೆ ಇದೆ. ಅಧಿವೇಶನ ಆರಂಭವಾಗುವ ಹೊತ್ತಿನಲ್ಲೇ ಸರ್ಕಾರ ತೀವ್ರ ಮುಜುಗರ ಎದುರಿಸಿದೆ.

English summary
Home minister of Karnataka Basavaraj Bommai met the chief minister B. S. Yediyurappa in Cauvery after water resources minister Ramesh Jarakiholi CD with a woman in a compromising position goes viral.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X