ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಶಂಕಿತ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

|
Google Oneindia Kannada News

ಬೆಂಗಳೂರು, ಜೂ. 08: ಮಾಜಿ ಸಚಿವ ರಮೇಶ್ ಜಾರಕಿಹೊಳಿ ದಾಖಲಿಸಿದ್ದ ಬ್ಲಾಕ್ ಮೇಲ್ ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿದ್ದ ಶಂಕಿತ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಕುಮಾರ್ ಗೆ 91 ನೇ ಸಿಟಿ ಸಿವಿಲ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಿಡಿ ಸ್ಫೋಟ ಬಳಿಕ ನಾನಾ ತಿರುವು ಪಡೆಯುತ್ತಿದ್ದಂತೆ ಇಬ್ಬರೂ ತಲೆ ಮರೆಸಿಕೊಂಡಿದ್ದರು. ಇಬ್ಬರಿಗಾಗಿ ಎಸ್ಐಟಿ ಅಧಿಕಾರಿಗಳು ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇದೀಗ ನಿರೀಕ್ಷಣಾ ಜಾಮೀನು ದೊರೆತಿದ್ದು, ಶೀಘ್ರದಲ್ಲಿಯೇ ಎಸ್ಐಟಿ ವಿಚಾರಣೆಗೆ ಹಾಜರಾಗಲಿದ್ದಾರೆ.

ಷರತ್ತು ಬದ್ಧ ಜಾಮೀನು: ಕಳೆದ ಮಾರ್ಚ್ 2 ರಂದು ಯುವತಿಯೊಬ್ಬಳಿಗೆ ಕೆಲಸದ ಅಮಿಷೆ ಒಡ್ಡಿ ಲೈಂಗಿಕವಾಗಿ ಬಳಿಸಿಕೊಂಡಿದ್ದಾರೆ ಎಂದು ಆರೋಪಿಸಿ ದಿನೇಶ್ ಕಲ್ಲಹಳ್ಳಿ ಎಂಬಾತ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ರಮೇಶ್ ಜಾರಕಿಹೊಳಿಯ ಅಶ್ಲೀಲ ಸಿಡಿ ಬಿಡುಗಡೆಯಾಗಿತ್ತು. ಸಿಡಿ ಬಿಡುಗಡೆ ಬೆನ್ನಲ್ಲೇ ಜಲ ಸಂಪನ್ಮೂಲ ಸಚಿವ ಸ್ಥಾನಕ್ಕೆ ಜಾರಕಿಹೊಳಿ ರಾಜೀನಾಮೆ ನೀಡಿದ್ದರು. ಆನಂತರ ದಿನಕ್ಕೊಂದು ಬೆಳವಣಿಗೆ ಪಡೆದುಕೊಂಡಿತ್ತು. ಸಂತ್ರಸ್ತ ಯುವತಿ ಕೂಡ ಕಣ್ಮರೆಯಾಗಿದ್ದಳು. ಇದಾದ ಬಳಿಕ ನಾನಾ ತಿರುವು ಪಡೆದ ಬೆನ್ನಲ್ಲೇ ತನ್ನನ್ನು ಬ್ಲಾಕ್ ಮೇಲ್ ಮಾಡಿದ್ದಾಗಿ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಸಂತ್ರಸ್ತ ಯುವತಿ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿ ದೂರು ದಾಖಲಿಸಿದರು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಈ ಪ್ರಕರಣಗಳ ತನಿಖೆಗಾಗಿ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ನೇತತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿತ್ತು.

Ramesh jarkiholi cd case: Suspects got anticipatory bail form civil court

ಎಸ್ಐಟಿ ರಚನೆ ಬಳಿಕ ಸಂತ್ರಸ್ತ ಯುವತಿ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಳು. ಆನಂತರ ಸಂತ್ರಸ್ತ ಯುವತಿಯನ್ನು ಎಸ್ಐಟಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದ್ದರು. ಸಂತ್ರಸ್ತೆ ದಾಖಲಿಸಿರುವ ಅತ್ಯಾಚಾರ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು ವರದಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಯುವತಿ ಜತೆ ಇರುವುದು ನಾನೇ. ನಮ್ಮದು ಸಹಮತದ ಲೈಂಗಿಕ ಕ್ರಿಯೆ. ನನ್ನನ್ನು ಮುಗಿಸುವ ವಿಚಾರವಾಗಿ ಅಶ್ಲೀಲ ದೃಶ್ಯ ರೆಕಾರ್ಡ್ ಮಾಡಿ ಸಿಡಿ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಹೇಳಿಕೆ ನೀಡಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಇದರ ಬೆಳವಣಿಗೆ ನಡುವೆ ಜಾಮೀನು ಕೋರಿ ನರೇಶ್ ಹಾಗೂ ಶ್ರವಣ್ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

Recommended Video

ಸೂರ್ಯಗ್ರಹಣದಿಂದ ಈ 5 ರಾಶಿಯವರಿಗೆ ತೊಂದರೆಗಳು ಕಟ್ಟಿಟ್ಟಬುತ್ತಿ | Oneindia Kannada

ಆರೋಪಿತರಿಗೆ ಜಾಮೀನು ನೀಡದಂತೆ ಎಸ್ಐಟಿ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ್ದರು. ಆರೋಪಿಗಳ ಪರ ಹಿರಿಯ ವಕೀಲ ಪೊನ್ನಣ್ಣ ವಾದ ಮಂಡಿಸಿದ್ದರು. ಎರಡೂ ಕಡೆ ವಾದ ಆಲಿಸಿದ 91 ನೇ ಸಿಟಿ ಸಿವಿಲ್ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಆರೋಪಿತರಿಬ್ಬರೂ ಅತಿ ಶೀಘ್ರದಲ್ಲಿಯೇ ಎಸ್ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಬ್ಲಾಕ್ ಮೇಲ್ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆ ಎದುರಿಸಲಿದ್ದಾರೆ.

English summary
The City Civil Court has granted anticipatory bail to the suspects in connection with the Ramesh jarkiholi cd case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X