• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜನ ಪ್ರತಿನಿಧಿಗಳ ವಿಶೇಷ ಪೀಠಕ್ಕೆ ಜಾರಕಿಹೊಳಿ ಪ್ರಕರಣ ವರ್ಗಾವಣೆ

|
Google Oneindia Kannada News

ಬೆಂಗಳೂರು, ಜೂ. 21: ಸಿಡಿ ಸ್ಫೋಟ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಬ್ಲಾಕ್ ಮೇಲ್ ಪ್ರಕರಣದ ರದ್ದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿರುವ ಅರ್ಜಿ ಹೈಕೋರ್ಟ್ ಜನಪ್ರತಿನಿಧಿಗಳ ವಿಶೇಷ ಪೀಠಕ್ಕೆ ವರ್ಗಾವಣೆಯಾಗಿದೆ.

   Ramesh Jarkiholiಗೆ ನೋಟೀಸ್ ನೀಡಿದ ಕೋರ್ಟ್ | Oneindia Kannada

   ರಮೇಶ್ ಜಾರಕಿಹೊಳಿ ದಾಖಲಿಸಿರುವ ಬ್ಲಾಕ್ ಮೇಲ್ ಪ್ರಕರಣ ರದ್ದು ಕೋರಿ ಸಂತ್ರಸ್ತ ಯುವತಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಇಂದು ನ್ಯಾ. ಶ್ರೀನಿವಾಸ ಹರೀಶ್ ಕುಮಾರ್ ಇದ್ದ ಪೀಠಕ್ಕೆ ಬಂದಿತ್ತು. ನ್ಯಾ. ಸುನೀಲ್ ದತ್‌ ಯಾದವ್ ಅವರ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬರಬೇಕಿತ್ತು. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿ ಸಂತ್ರಸ್ತ ಯುವತಿ ಪರ ವಕೀಲರಾದ ಸಂಕೇತ ಏಣಗಿ ವಾದ ಮಂಡಿಸಿದರು. ಇವರ ಮನವಿ ಆಲಿಸಿದ ನ್ಯಾಯಪೀಠ ಅರ್ಜಿಯನ್ನು ಜನ ಪ್ರತಿನಿಧಿಗಳ ವಿಶೇಷ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

   ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನು ಹನಿಟ್ರ್ಯಾಪ್ ಮಾಡಲಾಗಿದೆ. ಬ್ಲಾಕ್ ಮೇಲ್ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರನ್ನು ರದ್ದು ಕೋರಿ ಸಂತ್ರಸ್ತ ಯುವತಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಪೀಠ ರಮೇಶ್ ಜಾರಕಿಹೊಳಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ ನೋಟಿಸ್‌ನ್ನು ರಮೇಶ್ ಜಾರಕಿಹೊಳಿ ಸ್ವೀಕರಿಸಿರಲಿಲ್ಲ. ಇದೀಗ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ ನೋಟಿಸ್ ಜಾರಿ ಮಾಡಿದೆ. ರಮೇಶ್ ಜಾರಕಿಹೊಳಿ ಕುಟುಂಬ ನ್ಯಾಯಾಲಯದ ನೋಟಿಸ್‌ನ್ನು ಸ್ವೀಕರಿಸಿದೆ. ಅರ್ಜಿಯನ್ನು ಜೂ. 23 ಕ್ಕೆ ಮುಂದೂಡಲಾಗಿದೆ.

   ಜೂ. 23 ರಂದು ಎಲ್ಲಾ ಅರ್ಜಿಗಳ ವಿಚಾರಣೆ: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಸ್ಫೋಟ ಪ್ರಕರಣವನನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ವಕೀರೊಬ್ಬರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಜೂ. 23 ಕ್ಕೆ ಮುಂದೂಡಲಾಗಿದೆ. ಇನ್ನು ಎಸ್ಐಟಿ ತನಿಖೆ ಸರಿಯಿಲ್ಲ. ಎಸ್ಐಟಿ ತನಿಖೆಯನ್ನು ರದ್ದು ಮಾಡಿ ಎಂದು ಸಂತ್ರಸ್ತ ಯುವತಿ ಕೋರಿ ಸಲ್ಲಿಸಿರುವ ಅರ್ಜಿ ಕೂಡ ಇದೇ ಜೂ. 23 ರಂದು ಬರಲಿದೆ. ಈ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ವಕೀಲರಾದ ಇಂದಿರಾ ಜೈಸಿಂಗ್ ಸಂತ್ರಸ್ತ ಯುವತಿ ಪರ ವಕಾಲತು ವಹಿಸಿದ್ದು, ಜೂ. 23 ರಂದೇ ವಾದ ಮಂಡನೆ ಮಾಡಲಿದ್ದಾರೆ. ಇನ್ನ ಸಿಬಿಐ ತನಿಖೆ ಪ್ರಶ್ನಿಸಿ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ಆಕ್ಷೇಪಣಾ ಅರ್ಜಿ ಕೂಡ ಇದೇ ಜೂ. 23 ರಂದೇ ವಿಚಾರಣೆಗೆ ಬರಲಿದೆ. ಇದೀಗ ಪ್ರಕರಣದ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೂಡ ಅದೇ ದಿನ ಬರಲಿದೆ.

   English summary
   Ramesh jarkiholi cd case: all All the petitions of the Ramesh jarkiholi cd case are Coming on the 23rd in High court know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X