ಅಡುಗೋಡಿ ಟೆಕ್ನಿಕಲ್ ಸೆಂಟರ್‌ನಲ್ಲಿ ಸಿಡಿಲೇಡಿ ಹೇಳಿಕೆ ದಾಖಲಿಸುತ್ತಿರುವ ಎಸ್ಐಟಿ

ಬೆಂಗಳೂರು, ಮಾರ್ಚ್‌ 30: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ನ್ಯಾಯಾಲಯದ ಮುಂದೆ ಸ್ವ ಇಚ್ಛಾ ಹೇಳಿಕೆ ದಾಖಲಿಸಿರುವ ಸಿಡಿ ಸಂತ್ರಸ್ತ ಯುವತಿಯನ್ನು ಎಸ್ಐಟಿ ಅಧಿಕಾರಿಗಳು ಅಡುಗೋಡಿಯಲ್ಲಿರುವ ಟೆಕ್ನಿಕಲ್ ಸೆಂಟರ್‌ನಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯ ಭಾಗವಾಗಿ ಸಿಡಿ ಸಂತ್ರಸ್ತ ಯುವತಿಯ ಹೇಳಿಕೆಯನ್ನು ತನಿಖಾಧಿಕಾರಿಗಳು ದಾಖಲಿಸಿಕೊಳ್ಳಬೇಕು. ಮಹಿಳಾ ಪೊಲೀಸ್ ಅಧಿಕಾರಿ ಕವಿತಾ ನೇತೃತ್ವದಲ್ಲಿ ಸಿಡಿ ಸಂತ್ರಸ್ತ ಯುವತಿಯ ಹೇಳಿಕೆ ದಾಖಲಿಸಿಕೊಳ್ಳುವ ಕಾರ್ಯ ಮುಂದುವರೆದಿದೆ.

ಎಸ್ಐಟಿ ವಶಕ್ಕೆ ಅಲ್ಲ: ಸಿಡಿ ಸಂತ್ರಸ್ತ ಯುವತಿಯನ್ನು ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಳ್ಳಲು ಕರೆದೊಯ್ದಿದ್ದಾರೆ. ನಾವೇ ತನಿಖೆಗೆ ಸಹಕರಿಸುತ್ತಿದ್ದೇವೆ. ಸಂತ್ರಸ್ತ ಯುವತಿ ಸ್ವ ಇಚ್ಛಾ ಹೇಳಿಕೆ ದಾಖಲಿಸಿದ್ದು, ಕೂಡಲೇ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು ಎಂದು ಸಿಡಿ ಸಂತ್ರಸ್ತ ಯುವತಿ ಪರ ವಕೀಲರ ಕೆ.ಎನ್. ಜಗದೀಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದಲ್ಲಿಯೇ ಹೇಳಿಕೆ ದಾಖಲಿಸಿಕೊಳ್ಳಲು ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ನಾವೇ ಅಡುಗೋಡಿಯಲ್ಲಿರುವ ಟೆಕ್ನಿಕಲ್ ಸೆಂಟರ್‌ನಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ಹೇಳಿದ್ದೇವೆ. ಬೇರೆ ಪ್ರಕರಣದಲ್ಲಿ ಆಕೆಯನ್ನು ವಶಕ್ಕೆ ಪಡೆಯುವ ಪ್ರಮೇಯವೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

 Ramesh jarkiholi cd case : SIT officials recording cd girl statement in Audugodi center

ಮೆಡಿಕಲ್ ಪರೀಕ್ಷೆ: ಗುರುನಾನಕ್ ಭವನದಲ್ಲಿರುವ ವಿಶೇಷ ನ್ಯಾಯಾಲಯದಲ್ಲಿ ಸಿಡಿ ಸಂತ್ರಸ್ತ ಯುವತಿಯ ಸ್ವ ಇಚ್ಛಾ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಂಡಿದೆ. ಅದನ್ನು ಮುಚ್ಚಿದ ಲಕೋಟೆಯಲ್ಲಿ ಸಂಬಂಧ ಪಟ್ಟ ನ್ಯಾಯಾಲಯಕ್ಕೆ ಸಲ್ಲಿಸುತ್ತಾರೆ. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ವೇಳೆ ಈ ಹೇಳಿಕೆಯನ್ನು ಪರಗಣಿಸುತ್ತಾರೆ. ಇದೀಗ ಆಕೆ ಸ್ವ ಇಚ್ಛಾ ಹೇಳಿಕೆ ದಾಖಲಿಸಿದ ಬಳಿಕ ಅತ್ಯಾಚಾರ ಆರೋಪ ಸಂಬಂಧ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಆನಂತರ ಅಡುಗೋಡಿಯಲ್ಲಿರುವ ಟೆಕ್ನಿಕಲ್ ಸೆಂಟರ್‌ಗೆ ಕರೆದುಕೊಂಡು ಹೋಗಿದ್ದು ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ನಾಳೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಸಿದ್ಧತೆ ನಡೆದಿದೆ.

ಹೇಳಿಕೆ ಬಳಿಕ ವಿಚಾರಣೆ: ಇನ್ನು ಸಿಡಿ ಸಂತ್ರಸ್ತ ಯುವತಿಯ ಹೇಳಿಕೆಯನ್ನು ಎಸ್ಐಟಿ ಅಧಿಕಾರಿಗಳು ದಾಖಲಿಸಿಕೊಂಡ ಬಳಿಕ ಆರೋಪಿ ಎನ್ನಲಾದ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಒಳಪಡಿಸುತ್ತಾರೆ. ಈ ವೇಳೆ ಬಂಧಿಸಿ ನ್ಯಾಯಾಲದ ಮುಂದೆ ಹಾಜರು ಪಡಿಸಿದರೂ ಅಚ್ಚರಿ ಪಡಬೇಕಿಲ್ಲ. ಆದರೆ ಸಿಡಿ ಯುವತಿ ಹೇಳಿಕೆ ಸುಳ್ಳಿನಿಂದ ಕೂಡಿದ್ದಲ್ಲಿ ಅದನ್ನು ಸಾಬೀತು ಮಾಡುವ ಸಾಕ್ಷಾಧಾರಗಳು ಎಸ್ಐಟಿಗೆ ಲಭ್ಯವಾದರೇ ಪ್ರಕರಣ ಹೊಸ ಆಯಾಮ ಪಡೆದುಕೊಂಡರೂ ಅಚ್ಚರಿ ಪಡಬೇಕಿಲ್ಲ.

Recommended Video

      RCBಯ Dan Christian ಬಗ್ಗೆ ನಿಮಗೆಷ್ಟು ಗೊತ್ತು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+