ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ಎಸಿಬಿಗೆ ದೂರು ಸಲ್ಲಿಕೆ

|
Google Oneindia Kannada News

ಬೆಂಗಳೂರು, ಮಾರ್ಚ್‌ 19: ದಿನ ಕಳೆಯುತ್ತಿದ್ದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಒಂದಡೆ ಪ್ರಕರಣ ಎಸ್ಐಟಿ ತನಿಖೆ ನಡೆಸುತ್ತಿದೆ. ಬ್ಲಾಕ್ ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬೆಳವಣಿಗೆಯಾಗಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಂಜುನಾಥ್ ಎಂಬುವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ.

ಅಶ್ಲೀಲ ಸಿಡಿ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಐದು ಕೋಟಿ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ಯಾವ ಮೂಲದಿಂದ ಐದು ಕೋಟಿ ರೂ. ಕೊಟ್ಟಿದ್ದಾರೆ. ಯಾಕೆ ಕೊಟ್ಟಿದ್ದಾರೆ. ಯಾರಿಗೆ ಕೊಟ್ಟಿದ್ದಾರೆ ಎಂಬುದು ಸತ್ಯಾಂಶ ಗೊತ್ತಾಗಬೇಕು. ಯಾವ ಆದಾಯದ ಮೂಲದಿಂದ ಅಷ್ಟು ಪ್ರಮಾಣದ ಹಣ ಬಂದಿದೆ ಎಂಬುದರ ಬಗ್ಗೆ ರಮೇಶ್ ಜಾರಕಿಹೊಳಿ ವಿರುದ್ಧ ತನಿಖೆ ನಡೆಸಿ ಎಂದು ದೂರುದಾರರು ಕೋರಿದ್ದಾರೆ.

 Ramesh jarkiholi CD row: case file against Ramesh jarkiholi in 5 Cr deal

ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಕೊನೆ ಟ್ವಿಸ್ಟ್ ಕೊಡ್ತಾಳಾ ಸಿಡಿ ಗರ್ಲ್ ?ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಕೊನೆ ಟ್ವಿಸ್ಟ್ ಕೊಡ್ತಾಳಾ ಸಿಡಿ ಗರ್ಲ್ ?

ಇನ್ನೊಂದಡೆ ಈ ವ್ಯವಹಾರದ ಬಗ್ಗೆ ನನಗೆ ಮೊದಲೇ ಗೊತ್ತಿತ್ತು. ಐದು ಕೋಟಿ ರೂ. ಡೀಲ್ ಆಗಿರುವುದು ನನಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ ಮತ್ತು ರಮೇಶ್ ಜಾರಕಿಹೊಳಿಯವರನ್ನು ವಿಚಾರಣೆಗೆ ಒಳಪಡಿಸಬೇಕು. ಐದು ಕೋಟಿ ರೂ. ವ್ಯವಹಾರದ ಬಗ್ಗೆ ಹೇಳಿಕೆ ದಾಖಲಿಸಿ ತನಿಖೆ ನಡೆಸಬೇಕು ಎಂದು ವಕೀಲರು ದೂರಿದ್ದಾರೆ.

 Ramesh jarkiholi CD row: case file against Ramesh jarkiholi in 5 Cr deal

Recommended Video

ಮಹಾರಾಷ್ಟ್ರದಿಂದ ಜಿಲ್ಲೆ ಸಂಪರ್ಕಿಸುವ ಎಲ್ಲಾ ಮಾರ್ಗದಲ್ಲಿ ಚೆಕ್‌ ಪೋಸ್ಟ್‌ ನಿರ್ಮಾಣ- ಜಿಲ್ಲಾಧಿಕಾರಿ ಪಿ ಸುನೀಲ್‌ ಕುಮಾರ್ ಮಾಹಿತಿ | Oneindia Kannada

ಅಶ್ಲೀಲ ಸಿಡಿ ಸ್ಫೋಟದ ನಂತರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಎಸ್ಐಟಿಗೆ ದೂರು ನೀಡಿದ್ದು, ನನ್ನನ್ನು ಬ್ಲಾಕ್ ಮೇಲ್ ಮಾಡಿದ್ದಾರೆ. ಐದು ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಹಣದ ಮೂಲ ಪತ್ತೆ ಮಾಡುವಂತೆ ವಕೀಲರೊಬ್ಬರು ಎಸಿಬಿಗೆ ರಮೇಶ್ ಜಾರಕಿಹೊಳಿ ವಿರುದ್ಧವೇ ದೂರು ನೀಡಿದ್ದಾರೆ.

English summary
Lawyer Manjunath has filed a complaint against Ramesh jarakiholi, who has filed a five-crore deal in connection with the CD blast case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X