ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಾರಕಿಹೊಳಿ ಸಿಡಿ ಪ್ರಕರಣ: ದೂರುದಾರ ದಿನೇಶ್ ಕಲ್ಲಹಳ್ಳಿ ವಿರುದ್ಧವೇ ದೂರು ದಾಖಲು

|
Google Oneindia Kannada News

ಬೆಂಗಳೂರು, ಮಾರ್ಚ್ 3: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಪ್ರಕರಣದಲ್ಲಿ ದೂರು ದಾಖಲಿಸಿರುವ ರಾಮನಗರ ಮೂಲದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರ ವಿರುದ್ಧವೇ ಬುಧವಾರ ದೂರು ದಾಖಲಾಗಿದೆ.

ಕರ್ನಾಟಕ ಕನ್ನಡಪರ ಸಂಘಟನೆ ಒಕ್ಕೂಟದ ಸಂಸ್ಥಾಪಕ ಪುಟ್ಟೇಗೌಡ ಅವರು ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಅಸ್ಲೀಲ ವಿಡಿಯೋವನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ದಿನೇಶ್ ಕಲ್ಲಹಳ್ಳಿ ವಿರುದ್ಧ ಅವರು ದೂರು ಸಲ್ಲಿಸಿದ್ದಾರೆ. ಜತೆಗೆ ವಿಡಿಯೋದಲ್ಲಿರುವ ಸಂತ್ರಸ್ತೆ ಹಾಗೂ ಅಶ್ಲೀಲ ವಿಡಿಯೋವನ್ನು ಚಿತ್ರೀಕರಿಸಿರುವುದರ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸುವಂತೆ ಅವರು ಕೋರಿದ್ದಾರೆ.

ರಮೇಶ್ ಜಾರಕಿಹೊಳಿ ಅವರಿಗೆ ಸಂತ್ರಸ್ತ ಯುವತಿಯು ಸಮ್ಮತಿಯಿಂದಲೇ ವಿಡಿಯೋ ಕಾಲ್ ಮಾಡಿದ್ದಾರೆ. ಲೈಂಗಿಕ ಕ್ರಿಯೆಗೂ ಅವರು ಸಮ್ಮತಿಸಿದ್ದಾರೆ. ಇಲ್ಲಿ ಬಲವಂತದ ಲೈಂಗಿಕ ಕ್ರಿಯೆ ನಡೆದಿಲ್ಲ. ಸಮ್ಮತಿಪೂರ್ವಕವಾಗಿ ಲೈಂಗಿಕ ಕ್ರಿಯೆ ನಡೆದಿದ್ದು, ಇಂತಹ ಪ್ರಕರಣಗಳಲ್ಲಿ ಅನ್ಯಾಯವಾಗಿದ್ದರೆ ಸಂತ್ರಸ್ತೆ ದೂರು ನೀಡಬೇಕು. ಇಲ್ಲಿ ಯುವತಿ ದೂರು ನೀಡಿಲ್ಲ. ಆದರೆ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಕುಗ್ಗಿಸಲು ಷಡ್ಯಂತ್ರ ನಡೆದಿದೆ. ಅವರ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Ramesh Jarkiholi CD Row: Complaint Filed Against Dinesh Kallahalli

ಸಹಮತದೊಂದಿಗೆ ಲೈಂಗಿಕ ಸಂಪರರ್ಕ ನಡೆಸುವುದು ಅವರ ವೈಯಕ್ತಿಕ ಸ್ವಾತಂತ್ರ್ಯವಾಗಿದೆ. ಅದನ್ನು ಪ್ರಶ್ನಿಸಲು ಸಾಮಾಜಿಕ ಹೋರಾಟಗಾರರಿಗೆ ಯಾವ ಹಕ್ಕೂ ಇಲ್ಲ. ಇದು ವೈಯಕ್ತಿಕ ವಿಚಾರವಾಗಿದ್ದು, ಇದರ ಹಿಂದೆ ದೊಡ್ಡ ವ್ಯಕ್ತಿಗಳಿದ್ದಾರೆ. ಆದ್ದರಿಂದ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಯುವತಿ ಹಾಗೂ ದೂರುದಾರ ದಿನೇಶ್ ಕಲ್ಲಹಳ್ಳಿ ಬಗ್ಗೆ ಸಂಪೂರ್ಣ ವಿಚಾರಣೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

Recommended Video

ಮೇಟಿ ಮಾಡಿದ್ದು ಸರೀನಾ ! ರಾಜೀನಾಮೆ ಕೊಡಬೇಡ ಅಂತ ಹೇಳಿದೀನಿ! | Oneindia Kannada

ಜಾರಕಿಹೊಳಿ ವಿರುದ್ಧ ದೂರು ನೀಡಿರುವ ದಿನೇಶ್ ಕಲ್ಲಹಳ್ಳಿ ಅವರಿಗೆ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಬುಧವಾರ ಬೆಳಿಗ್ಗೆ ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗಿ, ದೂರಿಗೆ ಸಂಬಂಧಿಸಿದ ಮಾಹಿತಿ ಒದಗಿಸುವಂತೆ ಸೂಚಿಸಲಾಗಿತ್ತು.

English summary
Ramesh Jakiholi CD Case: A complaint filed against social activist Dinesh Kallahalli and victim woman for revealing obscene video in Cubban Park police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X