ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಡಿದ ಸಿಡಿ ಬಾಂಬ್: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಮಾರ್ಚ್ 03: ಬಿಜೆಪಿ ಸರ್ಕಾರ ಹಾಗೂ ರಾಜ್ಯ ಬಿಜೆಪಿಯನ್ನು ತೀವ್ರ ಮುಜುಗರಕ್ಕೆ ಈಡು ಮಾಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Recommended Video

ರಮೇಶ್ ಜಾರಕಿಹೊಳಿ 'ಸಿಡಿ' ವಿಚಾರದಲ್ಲಿ ನಿಶ್ಪಕ್ಷಪಾತ ತನಿಖೆಯ ಭರವಸೆ ನೀಡಿದ ಗೃಹ ಸಚಿವ ಬೊಮ್ಮಾಯಿ | Oneindia Kannada

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಈ ವಿಚಾರವಾಗಿ ನಾನು ಸಿಎಂ ಭೇಟಿಯಾಗಿಲ್ಲ. ಈಗಾಗಲೇ ಒಂದು ದೂರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಆ ಬಗ್ಗೆ ವಿಸ್ತೃತ ತನಿಖೆ ಮಾಡಲಿದ್ದೇವೆ. ಪಕ್ಷದ ನಿಲುವು ಅಥವಾ ಇನ್ಯಾವುದೇ ತೀರ್ಮಾನವನ್ನು ಪಕ್ಷದ ಹಿರಿಯರು ಪ್ರಕಟ ಮಾಡುತ್ತಾರೆ. ಆ ಬಗ್ಗೆ ಮಾತನಾಡುವ ಅಧಿಕಾರ ನನಗಿಲ್ಲ. ಇದೆಲ್ಲವೂ ನಮ್ಮ ಗಮನದಲ್ಲಿದೆ. ಪಕ್ಷ ಮತ್ತು ಹಿರಿಯರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಪಕ್ಷದ ನಿಲುವು ತನಿಖೆಗೆ ಸಂಬಂಧ ಇಲ್ಲ, ನಿಪ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಜಾರಕಿಹೊಳಿ ಸಿಡಿ ಪ್ರಕರಣ: ದಿನೇಶ್ ಕಲ್ಲಹಳ್ಳಿಗೆ ಪೊಲೀಸ್‌ ನೋಟಿಸ್ ಜಾರಕಿಹೊಳಿ ಸಿಡಿ ಪ್ರಕರಣ: ದಿನೇಶ್ ಕಲ್ಲಹಳ್ಳಿಗೆ ಪೊಲೀಸ್‌ ನೋಟಿಸ್

Ramesh Jarkiholi CD Row: Home Minister Basavaraj Bommai reaction

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದು ನಿನ್ನೆ (ಮಾ. 02) ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ಸಲ್ಲಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇನ್ನೂ ಎಫ್‌ಐಆರ್ ಆಗಬೇಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೊಟ್ಟಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ದಿನೇಶ್ ಕಲ್ಲಹಳ್ಳಿ ಯಾರು ಅಂತಾ ನನಗೇ ಗೊತ್ತಿಲ್ಲ. ಜೊತೆಗೆ ಇದು ನಕಲಿ ವಿಡಿಯೋ ಎಂದಿದ್ದಾರೆ.

English summary
Water Resources Minister Ramesh Jarkiholi CD Row: Home Minister Basavaraj Bommai reaction in Bengalruu today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X