ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ್ಯಾಯಾಲಯಕ್ಕೆ ಹೋಗಲಿಕ್ಕೆ ಅಡ್ಡಿ ಪಡಿಸಿದರೆ ಆತ್ಮಹತ್ಯೆ ಮಾಡಿಕೊಳ್ತೇನೆ !

|
Google Oneindia Kannada News

ಬೆಂಗಳೂರು, ಮಾರ್ಚ್‌ 29: ''ನೀವೇನಾದರೂ ನನ್ನ ಹಿಂದೆ ಬಿದ್ದರೆ, ನಾನು ಮಹಡಿಯಿಂದ ಹಾರಿ ಆತ್ಮಹತ್ಮೆ ಮಾಡಿಕೊಳ್ಳುತ್ತೇನೆ'' ಎಂದು ಸಿಡಿ ಲೇಡಿ ಎಸ್ಐಟಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾಳೆ. ಕಳೆದ ಒಂದು ತಿಂಗಳಿನಿಂದ ನಾನಾ ಬೆಳವಣಿಗೆ ನಡೆಯುತ್ತಿದೆ. ಸಿಡಿಲೇಡಿ ಪತ್ತೆಗಾಗಿ ಎಸ್ಐಟಿ ಅಧಿಕಾರಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ. ಇವತ್ತು ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುವುದಾಗಿ ಸಿಡಿ ಲೇಡಿ ವಕೀಲರು ಮುನ್ಸೂಚನೆ ನೀಡಿದ್ದರು. ಈ ನಡುವೆ ಯುವತಿ ಶೋಧಕಾರ್ಯವನ್ನು ಎಸ್ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದರು.

ಸಿಡಿ ಲೇಡಿಯಿಂದ ಹೈಕೋರ್ಟಿಗೆ ಪತ್ರ: ಸಿದ್ದರಾಮಯ್ಯ ಪ್ರತಿಕ್ರಿಯೆಸಿಡಿ ಲೇಡಿಯಿಂದ ಹೈಕೋರ್ಟಿಗೆ ಪತ್ರ: ಸಿದ್ದರಾಮಯ್ಯ ಪ್ರತಿಕ್ರಿಯೆ

ಯುವತಿ ಬೆಂಗಳೂರಿನಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಎಸ್ಐಟಿ ಅಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದರು. ಇದರ ಬೆನ್ನಲ್ಲೇ ಗೂಗಲ್ ಮೂಲಕ ಎಸ್ಐಟಿ ಅಧಿಕಾರಿಗಳ ಸಂಪರ್ಕ ಸಂಖ್ಯೆ ಪಡೆದಿರುವ ಸಿಡಿಲೇಡಿ, ನಿಮ್ಮ ಮೇಲೆ ನನಗೆ ಯಾವುದೇ ನಂಬಿಕೆ ಇಲ್ಲ. ನಾನು ನ್ಯಾಯಾಲಯಕ್ಕೆ ಹಾಜರಾಗುವದನ್ನು ತಪ್ಪಿಸಿ ವಶಕ್ಕೆ ಪಡೆಯಲು ಯತ್ನಿಸಿದರ, ನಿಮ್ಮ ಹೆದರಲ್ಲೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನಿಮ್ಮ ಮೇಲೆ ನನಗೆ ಯಾವುದೇ ನಂಬಿಕೆ ಇಲ್ಲ. ನಾನು ನೇರವಾಗಿ ನ್ಯಾಯಾಲಯಕ್ಕೆ ಹೋಗುತ್ತೇನೆ. ಅದಕ್ಕೆ ಯಾವುದೇ ಕಾರಣಕ್ಕೆ ಅಡ್ಡಿಪಡಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾಳೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

Ramesh jarkiholi CD row: is CD girl threaten SIT officers ?

Recommended Video

ಯಡಿಯೂರಪ್ಪನನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ | Oneindia Kannada

ನ್ಯಾಯಾಲಯಕ್ಕೆ ಹಾಜರು: ಭಾನುವಾರ ಸಂಜೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಇಮೇಲ್ ಮಾಡಿದ್ದ ಯುವತಿ ನನಗೆ ಎಸ್ಐಟಿ ಅಧಿಕಾರಿಗಳ ಮೇಲೆ ನಂಬಿಕೆ ಇಲ್ಲ. ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿ. ನನ್ನ ತಂದೆ ತಾಯಿಗೆ ಹೆದರಿಸಿ ತಪ್ಪು ಹೇಳಿಕೆ ಕೊಡಿಸಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಹೀಗಾಗಿ ಈ ಪ್ರಕರಣವನ್ನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು. ಇದಕ್ಕೆ ಅವಕಾಶ ಕೊಡಬೇಕು ಎಂದು ಸಂತ್ರಸ್ತ ಯುವತಿ ಮನವಿ ಮಾಡಿಕೊಂಡಿದ್ದಳು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದರು. ಯುವತಿಯ ಕರೆ ಎಸ್‌ಐಟಿ ಅಧಿಕಾರಿಗಳಿಗೆ ನುಂಗುಲಾರದ ಬಿಸಿ ತುಪ್ಪವಾಗಿದೆ.

English summary
Ramesh Jarkiholi CD row: CD girl had threatened SIT officials know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X