ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ಎಸ್ಐಟಿ ಅಧಿಕಾರಿಗಳ ಗುಪ್ತ ಸಭೆ

|
Google Oneindia Kannada News

ಬೆಂಗಳೂರು, ಮಾರ್ಚ್‌ 23 : ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ಕುರಿತು ಕಲಾಪದಲ್ಲಿ ಸದ್ದು ಮಾಡಿದ ಬೆನ್ನಲ್ಲೇ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬೆಂಗಳೂರಿನಲ್ಲಿ ರಹಸ್ಯ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಚಾಮರಾಜಪೇಟೆಯ ಸಿಎಆರ್ ಗ್ರೌಂಡ್ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

ಸಂತ್ರಸ್ತೆ ಎನ್ನಲಾದ ಯುವತಿ ಪತ್ತೆ ಮಾಡದ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳ ಕಾರ್ಯಶೈಲಿ ಬಗ್ಗೆ ಪ್ರತಿ ಪಕ್ಷಗಳು ಮುಗಿಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ತೀವ್ರ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

ಸಿಡಿ ಪ್ರಕರಣದಲ್ಲಿ ಎಸ್ಐಟಿ ತನಿಖೆ ಬೇಗ ಮುಗಿಯಲಿ: ಬಾಲಚಂದ್ರ ಜಾರಕಿ ಹೋಳಿ ಸಿಡಿ ಪ್ರಕರಣದಲ್ಲಿ ಎಸ್ಐಟಿ ತನಿಖೆ ಬೇಗ ಮುಗಿಯಲಿ: ಬಾಲಚಂದ್ರ ಜಾರಕಿ ಹೋಳಿ

ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸಂದೀಪ್ ಪಾಟೀಲ್, ರವಿಕುಮಾರ್ ಇತರೆ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಕಳೆದ ಹತ್ತು ದಿನದಿಂದ ಶಂಕಿತ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಸಂತ್ರಸ್ತೆ ಎನ್ನಲಾದ ಯುವತಿ ಮತ್ತು ಶಂಕಿತರೆನ್ನಲಾದ ಆರೋಪಿಗಳು ಸಿಕ್ಕಿಲ್ಲ.

Ramesh Jarkiholi CD row: SIT officials held secrete meeting in Bengaluru

Recommended Video

ಸಿಡಿ ಕೇಸಿಗೆ ಸಿಗಲಿದೆಯಾ ಮಹಾ ಟ್ವಿಸ್ಟ್ ! | Oneindia Kannada

ಹೊರ ರಾಜ್ಯಗಳಲ್ಲಿ ಹುಡುಕಾಡಿದರೂ ಶಂಕಿತರ ಸುಳಿವು ಸಿಕ್ಕಿಲ್ಲ. ಎಸ್ಐಟಿ ತನಿಖೆ ಪ್ರತಿ ಪಕ್ಷಗಳಿಗೆ ಆಹಾರ ವಾಗಿತ್ತು. ಈ ಹಿನ್ನೆಲೆಯಲ್ಲಿ ಮುಂದಿನ ಕಾರ್ಯಾ ಯೋಜನೆ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ. ಹೊರ ರಾಜ್ಯಗಳಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಇರುವ ಹಾದಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

English summary
Officials of the Special Investigation Team held a secrete meeting in Bengaluru in connection with the Ramesh Jarkiholi CD case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X