ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ: ಎಎಪಿ ಮಹಿಳಾ ಘಟಕ ಆಗ್ರಹ

ಬೆಂಗಳೂರು, ಮಾರ್ಚ್ 2: ಯುವತಿಗೆ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ಪಡೆಯಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ‌ಕುಶಲ ಸ್ವಾಮಿ ಆಗ್ರಹಿಸಿದ್ದಾರೆ.

ಕರ್ನಾಟಕ ಭವನವನ್ನು ಕೆಟ್ಟ ಉದ್ದೇಶಕ್ಕೆ ಬಳಸಿಕೊಂಡಿರುವ ರಮೇಶ್ ಜಾರಕಿಹೊಳಿ ಅವರು ನಮ್ಮ ಕರ್ನಾಟಕದ ಘನತೆಗೆ ಕಪ್ಪು ಚುಕ್ಕೆ ಈ ಕೂಡಲೇ ಶಾಸಕ ಸ್ಥಾನದಿಂದಲೂ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಜಾ ಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ‌ಕುಶಲ ಸ್ವಾಮಿ ಆಗ್ರಹಿಸಿದರು.

ಮಹಿಳಾ ದಿನಾಚರಣೆ ಹತ್ತಿರ ಇರುವಾಗಲೇ ಇಂತಹ ಘಟನೆ ಹೊರಬಂದಿರುವುದು ನಾಚಿಕೆಗೇಡು. ಬಿಜೆಪಿ ಸರ್ಕಾರಕ್ಕೆ ಮಹಿಳಾ ದಿನಾಚರಣೆ ನಡೆಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.

Ramesh Jarkiholi Sex CD: AAP women Division president demand his resignation

ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದವರಿಗೆ ಸಚಿವ ಸ್ಥಾನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸರ್ಕಾರದ ಮೇಲೆ ಮಹಿಳೆಯರಿಗೆ ಕಿಂಚಿತ್ತೂ ನಂಬಿಕೆ ಇಲ್ಲ. ಈ ಕೂಡಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ, ನೀವು ಈ ಕೂಡಲೇ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹಾಗೂ ಯುವತಿಯ ಕುಟುಂಬಸ್ಥರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಹೇಳಿದರು.

Recommended Video

      ಮತ್ತೆ ಕೋಟ್ಯಾಧೀಶನಾದ ನಂಜುಂಡೇಶ್ವರ.. 105 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ ಕಾಣಿಕೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+