• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಹೈಕಮಾಂಡ್ ಸೂಚನೆ

|

ಬೆಂಗಳೂರು, ಮಾರ್ಚ್ 02: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶಗೊಂಡಿರುವ ಬಿಜೆಪಿ ಹೈಕಮಾಂಡ್, ರಮೇಶ್ ಅವರ ರಾಜೀನಾಮೆಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.

   Ramesh Jarakiholi ಸಿಕ್ಕಿ ಬಿದ್ದಿದ್ದು ಹೇಗೆ | Oneindia Kannada

   ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಹರಿದಾಡುತ್ತಿದ್ದು, ಈ ಸಂಗತಿ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯೂ ಎದುರಾಗುತ್ತಿದ್ದು, ಸಚಿವರ ರಾಜೀನಾಮೆಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ. ಕೂಡಲೇ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಆದೇಶ ಬಂದಿರುವುದಾಗಿ ತಿಳಿದುಬಂದಿದೆ.

   ರಾಜ್ಯ ರಾಜಕೀಯದಲ್ಲಿ ಸಿಡಿ ಸ್ಫೋಟ; ರಮೇಶ್ ಜಾರಕಿಹೊಳಿ ವಿರುದ್ಧ ದೂರು

   ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

   ಮಂಗಳವಾರ ಸಚಿವ ರಮೇಶ್ ಜಾರಕಿಹೊಳಿ ಯುವತಿ ಜೊತೆ ರಾಸಲೀಲೆ ನಡೆಸಿದ ಸಿಡಿಯನ್ನು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬಿಡುಗಡೆ ಮಾಡಿದ್ದಾರೆ. ಸಚಿವರ ವಿರುದ್ಧ ಪೊಲೀಸರಿಗೆ ಸಹ ದೂರು ನೀಡಿದ್ದಾರೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಜೊತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ನಡೆಸಿದ್ದಾರೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ. ಯುವತಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಿಡಿ ಜೊತೆಗೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

   English summary
   Ramesh Jarakiholi Sex cd case BJP High command Instructed for his resignation immediately.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X