ಇಂದು ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ?
Recommended Video
ಬೆಂಗಳೂರು, ಜುಲೈ 29: ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸದ್ಯದ ರಾಜಕೀಯ ಪರಿಸ್ಥಿತಿಯಿಂದ ಮಾನಸಿಕವಾಗಿ ನೊಂದಿದ್ದೇನೆ, ನಾಲ್ಕು ದಶಕದ ರಾಜಕೀಯ ಜೀವನದ ಅಂತಿಮ ಘಟ್ಟಕ್ಕೆ ಬಂದಿದ್ದೇನೆ, ನಾಳೆ ವಿಧಾನಸಭೆ ಅಧಿವೇಶನದಲ್ಲಿ ಎಲ್ಲರಿಗೂ ಅಚ್ಚರಿ ಕಾದಿದೆ ಎಂದು ಖುದ್ದಾಗಿ ರಮೇಶ್ ಕುಮಾರ್ ಹೇಳಿಕೊಂಡಿದ್ದಾರೆ.
ಈ ಮೂಲಕ ಸೋಮವಾರ ಯಡಿಯೂರಪ್ಪ ಅವರ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಬೆನ್ನಲ್ಲೇ ರಮೇಶ್ ಕುಮಾರ್ ರಾಜೀನಾಮೆ ನೀಡಲಿದ್ದಾರೆಯೇ ಎಂಬ ಪ್ರಶ್ನೆಯೂ ಉದ್ಭವವಾಗಿದೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರದ ಸದನದಲ್ಲಿ ನಿಮಗೆ ಅಚ್ಚರಿ ಕಾದಿದೆ , ಏನೋ ಹೇಳಬೇಕು ಎಂದುಕೊಂಡಿದ್ದೇನೆ ಎಂಬುದನ್ನು ಸದನದಲ್ಲೇ ಹೇಳುತ್ತೇನೆ, ನನ್ನ ನಾಲ್ಕು ದಶಕದ ರಾಜಕೀಯ ಜೀವನದ ಅಂತಿಮ ಘಟ್ಟಕ್ಕೆ ಬಂದಿದ್ದೇನೆ ಸದನವನ್ನು ಯಾರೂ ತಪ್ಪಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.
ಕಳೆದ ಗುರುವಾರದ ಸುದ್ದಿಗೋಷ್ಠಿಯಲ್ಲೂ ಸ್ಪೀಕರ್ ಸ್ಥಾನದಿಂದ ನಿರ್ಗಮಿಸುವ ಬಗ್ಗೆ ಪರೋಕ್ಷವಾಗಿ ಮುನ್ಸೂಚನೆ ನೀಡಿದ್ದ ಅವರು , ಹೊಸ ಸರ್ಕಾರ ರಚನೆಯಾದ ಬಳಿಕವೂ ನನ್ನ ಮೇಲೆ ಅವರಿಗೆ ವಿಶ್ವಾಸ ಇಲ್ಲದಿದ್ದರೆ ಸ್ಪೀಕರ್ ಬದಲಾವಣೆಗೆ ಅವಿಶ್ವಾಸಕ್ಕೆ ಅವಕಾಶ ಮಾಡಿಕೊಡಬೇಕಾಗುತ್ತದೆ. ಆದರೆ ಗೌರವದಿಂದ ಬದುಕುವ ನಾನು ಅಲ್ಲಿಯವರೆಗೂ ಕಾಯುವುದಿಲ್ಲ ಎಂದು ಹೇಳಿಕೆ ನೀಡಿದ್ದರು.












Click it and Unblock the Notifications