Bengaluru Rameshwaram Cafe Blast Case: ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ
ಬೆಂಗಳೂರು, ಏಪ್ರಿಲ್, 05: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಳಿಕ ಆರೋಪಿಗಾಗಿ ಪೊಲೀಸರು ತಲೆಕೆಡಿಸಿಕೊಂಡು ಶೋಧಕಾರ್ಯ ಕೈಗೊಂಡಿದ್ದು, ಮತ್ತೊಂದೆಡೆ ಎನ್‌ಐಎ ಆರೋಪಿಯನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನವನ್ನು ಕೊಡುವುದಾಗಿ ಘೋಷಣೆಯನ್ನೂ ಮಾಡಿತ್ತು. ಇದೀಗ ಇಂದು ಈ ಪ್ರಕರಣ ಸಂಬಂಧ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ಎಂಬ ಯುವಕನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಹಿಂದಿನ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಮತ್ತು ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಎನ್‌ಐಎ ಶೋಧಕಾರ್ಯ ನಡೆಸಿದ್ದು, ಈ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಎನ್ನುವ ಮಾಹಿತಿಯನ್ನು ತಿಳಿದುಬಂದಿದ್ದು, ಈ ಹಿನ್ನೆಲೆ ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.
"ಸೈಲೆಂಟ್" ಶೋಧಕಾರ್ಯ: ಈ ಸಂಬಂಧ ಕೆಲವು ದಿನಗಳ ಹಿಂದೆಯೇ ಎನ್ಐಎ ತೀರ್ಥಹಳ್ಳಿಯಲ್ಲಿ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ಸೈಲೆಂಟ್ ಆಗಿ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಳ್ಳುವ ಕೆಲಸವನ್ನು ಮಾಡಿತ್ತು. ಇದೀಗ ತೀರ್ಥಹಳ್ಳಿಯಲ್ಲಿ ಬಿಜೆಪಿಯ ಕಾರ್ಯಕರ್ತನನ್ನು ಎನ್‌ಐಎ ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಕಾದುನೋಡಬೇಕಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಲೆ. ಅದರಲ್ಲೂ ಎನ್‌ಐಎ ಸೈಲೆಂಟ್ ಆಗಿ ಶೋಧಕಾರ್ಯಕ್ಕೆ ಮುಂದಾಗಿದ್ದು, ಆರೋಪಿಯನ್ನು ಪತ್ತೆಹಚ್ಚುವ ಕೆಲಸವನ್ನು ಮಾಡುತ್ತಿದೆ. ಒಟ್ಟಿನಲ್ಲಿ ಶತಾಯಗತಾಯ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಬೇಕು ಎಂಬುದೇ ಗುರಿಯಾಗಿದೆ.
ದಿನೇಶ್ ಗುಂಡೂರಾವ್ ಹೇಳಿದ್ದೇನು?: ಇನ್ನು ಈ ಬಗ್ಗೆ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು, "ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ. ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ?," ಎಂದು ಪ್ರಶ್ನಿಸಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 5, 2024
ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ… pic.twitter.com/gygIPjGuBK
ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಿನಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರುವ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇಬೇಕು ಎಂದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications