Rameshwaram Cafe: ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು, ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು, ಮಾರ್ಚ್ 03: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ರಾಜಕೀಯ ತಿರುವು ನೀಡಲಾಗುತ್ತಿದ್ದು. ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿ ಕಾರಿದ್ದಾರೆ.

ಕೆಫಿ ಸ್ಪೋಟ ಪ್ರಕರಣ ವಿಚಾರಕ್ಕೆ ಬಿಜೆಪಿ ನಾಯಕರ ರಾಜಕೀಯ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ತನಿಖೆ. ವಿಚಾರವಾಗಿ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲಾಗುತ್ತಿದೆ. ಬೆಂಗಳೂರಿನ ಗೌರವ ರಕ್ಷಣೆಗೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ" ಎಂದಿದ್ದಾರೆ.

Rameshwaram Cafe blast update Deputy CM Shivakumar slams bjp

"ಈ ಮಧ್ಯೆ ಬಿಜೆಪಿ ನಾಯಕರು ಈ ವಿಚಾರವಾಗಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಘನತೆಗೆ ಧಕ್ಕೆ ತರುತ್ತಿದ್ದಾರೆ. ಆಮೂಲಕ ತಮ್ಮ ಗೌರವವನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅವರ ಕಾಲದಲ್ಲಿ ಏನೆಲ್ಲಾ ಆಗಿದೆ ಎಂದು ಮರೆತಿದ್ದಾರೆ. ಅವರು ತಮ್ಮ ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ. ಈ ವಿಚಾರವಾಗಿ ರಾಜಕೀಯ ಮಾಡಲು ನನಗೆ ಇಚ್ಛೆ ಇಲ್ಲ. ಈ ಸಮಯದಲ್ಲಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿ ಬಗ್ಗೆ ಅರಿವಿರಬೇಕು" ಎಂದು ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ಇನ್ನು, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನ ಸರ್ಕಾರ ಸಿಸಿಬಿಗೆ ವಹಿಸಿದ್ದು, ಸಿಎಂ ಸಿದ್ದರಾಮಯ್ಯ ಅವರ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಕೂಡ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್,​ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್​​ ಸೇರಿ ಹಿರಿಯ ಪೊಲೀಸ್ ಅಧಿಕಾರುಗಳು ಸಭೆಯಲ್ಲಿ ಹಾಜರಿದ್ದರು.

Rameshwaram Cafe blast update Deputy CM Shivakumar slams bjp

ಶಿವರಾತ್ರಿ ಹಬ್ಬದಂದು ಮತ್ತೆ ರಾಮೇಶ್ವರಂ ಕೆಫೆ ಓಪನ್

ಇನ್ನು,ಇ ರಾಮೇಶ್ವರಂ ಕೆಫೆಯ ಸಂಸ್ಥಾಪಕ ಮತ್ತು ಸಿಇಒ ರಾಘವೇಂದ್ರ ರಾವ್ ಅವರು, ದುರಂತ ಸಂಭವಿಸಿದ ಶುಕ್ರವಾರವೇ ಮತ್ತೆ ರಾಮೇಶ್ವರಂ ಕೆಫೆಯನ್ನು ಪುನರಾರಂಭಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಮೇಶ್ವರಂ ಕೆಫೆಯನ್ನು ಈ ವರ್ಷ ಮಾರ್ಚ್ 8ರ ಶಿವರಾತ್ರಿ ಹಬ್ಬದಂದು ಪುನರಾರಂಭಿಸಲಾಗುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+