Rameshwaram Cafe: ಸ್ಫೋಟ ಪ್ರಕರಣದಲ್ಲಿ ನಾಲ್ವರು ಪೊಲೀಸ್ ವಶ, ಪ್ರಮುಖ ಆರೋಪಿಯ ಕಥೆಯೇನು?
ಬೆಂಗಳೂರು, ಮಾರ್ಚ್ 03: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ಅಪರಾಧ ವಿಭಾಗವು ಶನಿವಾರ ನಾಲ್ವರನ್ನು ಬಂಧಿಸಿದೆ. ಇನ್ನೇನು ಪ್ರಮುಖ ಆರೋಪಿಯ ಗುರುತು ಪತ್ತೆ ಮಾಡಲು ಸುಳಿವು ಸಿಕ್ಕಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಜನನಿಬಿಡ ರಾಮೇಶ್ವರಂ ಕೆಫೆ ರೆಸ್ಟೋರೆಂಟ್‌ನಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ. ಇನ್ನು, ಪೋಲೀಸರ ಪ್ರಕಾರ, ಬಂಧಿತರು ಸ್ಫೋಟ ನಡೆಸಿದ ಆರೋಪವನ್ನು ಹೊಂದಿಲ್ಲ. ಆದರೆ, ರೆಸ್ಟೋರೆಂಟ್‌ನಲ್ಲಿ "ಬಾಂಬ್ ಇರುವ ಚೀಲವನ್ನು ಇಡಲು ಅಪರಿಚಿತ ವ್ಯಕ್ತಿಗೆ ಸಹಾಯ ಮಾಡಿರಬಹುದು".

ರಾಮೇಶ್ವರಂ ಕೆಫೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಶನಿವಾರ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಬೆಂಗಳೂರಿನಾದ್ಯಂತ ಭದ್ರತೆಯನ್ನು ಹೆಚ್ಚಿಸಲು ಸೂಚನೆ ನೀಡಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.
ಪ್ರಕರಣದಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಂಗ್ರಹಿಸಿದ ಸುಳಿವುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ವಿವಿಧ ಕೋನಗಳನ್ನು ಪರಿಶೀಲಿಸುತ್ತಿವೆ.
ವಶಕ್ಕೆ ಪಡೆದವರು ಶಂಕಿತರಲ್ಲ!
ಬಂಧಿತ ನಾಲ್ವರಲ್ಲಿ ಯಾರೂ "ಪ್ರಕರಣದಲ್ಲಿ ಶಂಕಿತರಲ್ಲ" ಮತ್ತು ಅವರನ್ನು ಶಂಕಿತರ ಬಗ್ಗೆ ಪ್ರಶ್ನಿಸಲಾಗುತ್ತಿದೆ. ನಮಗೆ ಕೆಲವು ಸುಳಿವುಗಳು ಸಿಕ್ಕಿವೆ ಮತ್ತು ತನಿಖೆ ನಡೆಸಲಾಗುತ್ತಿದೆ ಎಂದು ಈ ಬೆಳವಣಿಗೆಯ ಬಗ್ಗೆ ತಿಳಿದ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
"ಸಿಸಿಟಿವಿ ದೃಶ್ಯಾವಳಿಗಳಲ್ಲಿ ಶಂಕಿತ ಕೆಫೆಗೆ ಬರುವುದು ಕಾಣಿಸಿದೆ. ಬ್ಯಾಗ್ ಹಿಡಿದುಕೊಂಡು ಆರೋಪಿ ಇಡ್ಲಿ ತಿನ್ನಲು ಮುಂದಾಗಿದ್ದನು. ಶಂಕಿತ ವ್ಯಕ್ತಿಯು ಊಟ ಮಾಡುವಾಗ ತನ್ನ ಮೊಬೈಲ್ ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡುತ್ತಿದ್ದನು. ಸ್ಫೋಟದ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ಬಳಸಲಾದ ಮೊಬೈಲ್ ಫೋನ್‌ಗಳ ಡೇಟಾ ಸಂಗ್ರಹಿಸಲಾಗುತ್ತಿದೆ. ಶಂಕಿತರ ಫೋನ್ ಸಂಖ್ಯೆಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಹೇಳಿದ್ದಾರೆ.
"ಸ್ಫೋಟಕ್ಕೂ ಶಂಕಿತ ವ್ಯಕ್ತಿ ಬಳಸುತ್ತಿದ್ದ ಮೊಬೈಲ್ ಫೋನ್‌ಗೂ ಏನಾದರೂ ಸಂಬಂಧವಿದೆಯೇ ಎಂದು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಆ ಸಮಯದಲ್ಲಿ ಆ ಪ್ರದೇಶದಲ್ಲಿ ಬಳಕೆಯಲ್ಲಿದ್ದ 500 ಕ್ಕೂ ಹೆಚ್ಚು ಸಕ್ರಿಯ ಸಂಖ್ಯೆಗಳನ್ನು ಸಹ ನಾವು ನೋಡುತ್ತಿದ್ದೇವೆ" ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

"ಬಿಎಂಟಿಸಿ ಡಿಪೋ-13 ಕಾಮಕ್ಯಕ್ಕೆ ಸೇರಿದ ವೋಲ್ವೋ ಬಸ್ ಸಂಖ್ಯೆ ಕೆಎ-57-ಎಫ್ 186 ಬನಶಂಕರಿಯಿಂದ ಐಟಿಪಿಎಲ್‌ಗೆ ಹೋಗುತ್ತಿತ್ತು. ಆರೋಪಿ ಕುಂದಹಳ್ಳಿ ಬಳಿ ಬಸ್ ಹತ್ತಿ ಸಿಎಂಆರ್‌ಐಟಿ ಕಾಲೇಜು ನಿಲ್ದಾಣದಲ್ಲಿ ಇಳಿದ ದೃಶ್ಯಗಳು ಬಸ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಸ್ಸಿನ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಚಾಲಕ ಮತ್ತು ಕಂಡಕ್ಟರ್ ಕೂಡ ಬಸ್ಸಿನಲ್ಲಿ ಶಂಕಿತ ಇದ್ದ ಎಂಬುದನ್ನು ಖಚಿತಪಡಿಸಿದ್ದಾರೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ, ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ಪೊಲೀಸ್ ಆಯುಕ್ತ ಬಿ ದಯಾನಂದ್ ಮತ್ತು ಇತರ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ, ಜನನಿಬಿಡ ಪ್ರದೇಶಗಳು ಸೇರಿದಂತೆ ಬೆಂಗಳೂರಿನಾದ್ಯಂತ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಪೊಲೀಸರಿಗೆ ಸೂಚಿಸಿದ್ದಾರೆ.
ಇದಕ್ಕೂ ಮುನ್ನ ಸಿಎಂ ರಾಮೇಶ್ವರಂ ಕೆಫೆ ಮತ್ತು ಬ್ರೂಕ್‌ಫೀಲ್ಡ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿದ್ದರು. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. ಸ್ಫೋಟದ ಸಂದರ್ಭದಲ್ಲಿ ಕಿವಿಗೆ ಗಾಯವಾಗಿದ್ದ ಗಾಯಾಳು ದೀಪಾಂಶು ಎಂಬುವರನ್ನು ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನಿಬ್ಬರು ಗಾಯಾಳುಗಳನ್ನು ಡಿಸ್ಚಾರ್ಜ್ ಮಾಡಲಾಗಿದೆ. ಉಳಿದ ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ












Click it and Unblock the Notifications