ವೈದ್ಯಕೀಯ ಕಾಲೇಜು ಮುಖ್ಯಸ್ಥರ ಜೊತೆ ಸುಧಾಕರ್ ಸಭೆ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗದಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
Recommended Video
ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಅವರು ವಿಡಿಯೋ ಸಭೆ ನಡೆಸಿದರು. ಕೋವಿಡ್ ಪರೀಕ್ಷೆಯ ಉಸ್ತುವಾರಿ ಎಸಿಎಸ್ ಡಾ.ಶಾಲಿನಿ ರಜನೀಶ್ ಪಾಲ್ಗೊಂಡಿದ್ದರು.
"ಕೊರೊನಾ ಸೋಂಕಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆ ಮಾಡಿದರೆ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಪ್ರತಿ ಪ್ರಯೋಗಾಲಯಗಳಲ್ಲಿ ನಿಗದಿ ಮಾಡಿದಷ್ಟು ಸಂಖ್ಯೆಯಲ್ಲಿ ಪರೀಕ್ಷೆ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಲು ಇರುವ ಅಡ್ಡಿಗಳನ್ನು ನಿವಾರಿಸಲು ಸರ್ಕಾರದಿಂದ ಎಲ್ಲ ಬಗೆಯ ನೆರವು ನೀಡಲಾಗುವುದು" ಎಂದು ಸಚಿವ ಡಾ.ಕೆ.ಸುಧಾಕರ್ ಸಭೆಗೆ ತಿಳಿಸಿದರು.

ಆನ್ ಲೈನ್ ನಲ್ಲೇ ವರದಿ
"ಕೋವಿಡ್ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ವೆಬ್ ಸೈಟ್ ನಲ್ಲೇ ಪಡೆಯಬಹುದು. ಕೊರೊನಾ ಪರೀಕ್ಷೆ ಮಾಡಿಸಿಕೊಂಡವರು ತಮ್ಮ ಎಸ್‍ಆರ್ ಎಫ್ ಗುರುತು ಬಳಸಿ www.covidwar.karnataka.gov.in/service1 ನಲ್ಲಿ ಆನ್ ಲೈನ್ ನಲ್ಲೇ ಪರೀಕ್ಷೆಯ ವರದಿಯನ್ನು ಪಡೆಯಬಹುದು" ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೆರೆಗಳಿಗೆ ನೀರು
ವೃಷಭಾವತಿ ಕಣಿವೆಯಿಂದ 308 ದಶಲಕ್ಷ ಲೀಟರ್ ಸಂಸ್ಕರಿತ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ 224 ಕೆರೆಗಳಿಗೆ ಹರಿಸುವ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಸಭೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡರು.












Click it and Unblock the Notifications