ಸೋಮವಾರ ಸುರ್ಜೆವಾಲ ಬೆಂಗಳೂರಿಗೆ: ನಿಗಮ ಮಂಡಳಿ ನೇಮಕಾತಿ ಅಂತಿಮ ಸಾಧ್ಯತೆ
ಬೆಂಗಳೂರು, ಅಕ್ಟೋಬರ್ 15: ಕರ್ನಾಟಕದ ರಾಜ್ಯದಲ್ಲಿ ಶಾಸಕರ ಅಸಮಾಧಾನ ಗುಟ್ಟಾಗೇನು ಉಳಿದಿಲ್ಲ. ಈ ಮದ್ಯೆ ಕಗ್ಗಂಟಾಗಿ ಪರಿಣಿಸಿರುವ ರಾಜ್ಯ ಕಾಂಗ್ರೆಸ್ ನಲ್ಲಿನ ನಿಗಮ ಮಂಡಳಿ ನೇಮಕಾತಿಯು ಸೋಮವಾರ ಅಂತಿಮಗೊಳ್ಳುವ ಸಾಧ್ಯತೆಗಳು ಇವೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಾಳೆ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇಲ್ಲಿಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆಗೆ ಸಂಜೆ ಸಭೆ ನಡೆಸಲಿದ್ದಾರೆ. ಸಭೆ ಬಳಿಕ ಯಾರು ಯಾವ ನಿಗಮ ಮಂಡಳಿ ವಹಿಸಿಕೊಳ್ಳಬೇಕು ಎಂಬುದು ಅಂತಿಮಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಇನ್ನೂ ಈ ನಿಗಮ ಮಂಡಳಿಗೆ ಅಧ್ಯಕ್ಷರು ಸೇರಿದಂತೆ ಇತರ ಹುದ್ದೆಗಳ ನೇಮಕಾತಿ ವೇಳೆ ಮೊದಲು ಕಾಂಗ್ರೆಸ್ ಶಾಸಕರಿಗೆ ಪ್ರಾಮುಖ್ಯತೆ ನೀಡಲಾಗುವುದು. ಜೊತೆಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಪರಿಗಣಿಸಲಾಗುವುದು. ಸಭೆ ಬಳಿಕ ರಾಜ್ಯ ಸರ್ಕಾರದಿಂದ ಅಧಿಕೃತ ಅದೇಶವಾಗುವ ಸಾಧ್ಯತೆಗಳು ಇವೆ.












Click it and Unblock the Notifications