ಬೆಂಗಳೂರಿನ ಶಾಲೆಯಲ್ಲಿ ಮತ್ತೊಂದು ಹೀನಕೃತ್ಯ

ಬೆಂಗಳೂರು, ಡಿ. 3 : ಶಾಲೆಯಲ್ಲಿ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ. ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ ಅಟೆಂಡರ್‌ ಅನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಹಳೆ ಮದ್ರಾಸ್ ರಸ್ತೆಯಲ್ಲಿರುವ ಖಾಸಗಿ ಶಾಲೆಯಲ್ಲಿ ನ.26ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾಲೆಯ ಅಟೆಂಡರ್ ನಾಗರಾಜ್, ಖಾಲಿ ಕೊಠಡಿಗೆ ಮೂರು ವರ್ಷದ ಮಗುವನ್ನು ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ.

rape

ನ.29ರಂದು ಈ ಘಟನೆ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನ.30ರಂದು ನಾಗರಾಜ್‌ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಮಗುವಿನ ಮೇಲೆ ದೌರ್ಜನ್ಯ ನಡೆದಿರುವುದು ಖಚಿತವಾಗಿದೆ. [ಶಿಕ್ಷಕಿಯಿಂದ ಲೈಂಗಿಕ ಕಿರುಕುಳ]

ನ.26ರಂದು ಶಾಲೆಯಿಂದ ಮನೆಗೆ ಮರಳಿದ ಬಾಲಕಿ ಜ್ವರದಿಂದ ಬಳುತ್ತಿದ್ದಳು, ಮಗುವನ್ನು ತಾಯಿ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ಮಾಡಿಸಿದಾಗ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದ್ದು, ಪೋಷಕರು ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶಾಲೆಯಲ್ಲಿ ನಡೆದ ದೌರ್ಜನ್ಯ ಪ್ರಕರಣಗಳು

* ಆರ್‌.ಟಿ.ನಗರದ ಶಾಲೆಯೊಂದರಲ್ಲಿ ಆರು ವರ್ಷದ ಬಾಲಕಿಗೆ ಶಿಕ್ಷಕಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನ.22ರಂದು ಬೆಳಕಿಗೆ ಬಂದಿತ್ತು.

* ಜುಲೈ ತಿಂಗಳಿನಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣದ ಬೆಂಗಳೂರಿನ ವಿಬ್‌ಗಯಾರ್ ಶಾಲೆಯಲ್ಲಿ ಬೆಳಕಿಗೆ ಬಂದಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಶಿಕ್ಷಣ ಮತ್ತು ಪೊಲೀಸ್ ಇಲಾಖೆ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಮಾರ್ಗಸೂಚಿಯನ್ನು ರೂಪಿಸಿತ್ತು. [ಶಾಲೆಯಲ್ಲಿ ದೌರ್ಜನ್ಯ ಪ್ರಕರಣಗಳು]

* ಉಡುಪಿಯ ಹೆಬ್ರಿ ಸಮೀಪದ ಶಾಲೆಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿ‌ನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಾಗಿತ್ತು. ನಾಲ್ವರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕನನ್ನು ಹೆಬ್ರಿ ಪೊಲೀಸರು ಬಂಧಿಸಿದ್ದರು. [ಈ ನಿರ್ಧಾರದಿಂದ ಅತ್ಯಾಚಾರ ನಿಲ್ಲುತ್ತಾ?]

* ಬೆಂಗಳೂರಿನಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಲಾಳದ ಮಾರುತಿ ಶಾಲೆಯ ಅತಿಥಿ ಶಿಕ್ಷಕ ಚಂದ್ರಮೌಳಿ (69)ಯನ್ನು ಪೊಲೀಸರು ಬಂಧಿಸಿದ್ದರು.

* ಒಂದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಪ್ರಕರಣ ಇಂದಿರಾನಗರ ಕೇಂಬ್ರಿಡ್ಜ್ ಇಂಗ್ಲೀಷ್ ಶಾಲೆಯಲ್ಲಿ ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿತ್ತು. ಆರೋಪಿ ಜೈಶಂಕರ್‌ನನ್ನು ಬೈಯಪ್ಪನ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+