ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು, ಸೆ.9: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಗಾಯಕಿ ಪ್ರೇಮಲತಾ ಅವರ ಪುತ್ರಿ ಅಂಶುಮತಿ ನೀಡಿದ ದೂರಿನ ಅನ್ವಯ ಈ ಪ್ರಕರಣವನ್ನು ಸೋಮವಾರ ರಾತ್ರಿ ದಾಖಲಿಸಲಾಗಿದೆ.

ರಾಮಚಂದ್ರಾಪುರ ಮಠದ ರಾಮಕಥಾ ಕಲಾವಿದೆ ಪ್ರೇಮಲತಾ ಅವರ ಮಗಳು ಅಂಶುಮತಿ ನೀಡಿರುವ ದೂರಿಗೆ ಸಂಬಂಧಿಸಿದಂತೆ ರಾಘವೇಶ್ವರ ಭಾರತಿ ಸ್ವಾಮೀಜಿಗಳಿಗೆ ಬೆಂಗಳೂರಿನ ಗಿರಿನಗರ ಪೋಲೀಸರು ಇತ್ತೀಚೆಗೆ ನೋಟಿಸ್ ನೀಡಿದ್ದರು.

Ramachandrapura Math

ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ಪ್ರೇಮಲತಾ ಹಾಗೂ ದಿವಾಕರ ಶಾಸ್ತ್ರಿ ದಂಪತಿಗಳು ಬ್ಲ್ಯಾಕ್‌ಮೇಲ್‌ ಮಾಡಿದ್ದಾರೆ ಎಂದು ಮಠದವರು ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಪ್ರೇಮಲತಾ ಹಾಗೂ ಪತಿ ದಿವಾಕರ ಶಾಸ್ತ್ರಿ ದಂಪತಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. [ರಾಘವೇಶ್ವರ ಸ್ವಾಮೀಜಿಗಳ ವಿರುದ್ಧದ ದೂರಿನಲ್ಲೇನಿದೆ?]

ಈ ದಂಪತಿಯ ಪುತ್ರಿ ಅಂಶುಮತಿ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಪ್ರೇಮಲತಾ ಅವರ ಹೇಳಿಕೆ ಪಡೆದಿರುವ ಪೊಲೀಸರು ಸೋಮವಾರ ರಾತ್ರಿ ಶ್ರೀ ಗಳ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ. [ಸಿಐಡಿ ತನಿಖೆಯಿಂದ ಸತ್ಯ ತಿಳಿಯಲಿದೆ: ಶ್ರೀಮಠ]

ಹೈಕೋರ್ಟ್‌ ಮೊರೆ : ಅಂಶುಮತಿ ಅವರು ತಮ್ಮ ವಿರುದ್ಧ ನೀಡಿರುವ ದೂರನ್ನು ರದ್ದುಗೊಳಿಸುವಂತೆ ಕೋರಿ ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮಿಗಳು ಹೈಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಮಂಗಳವಾರ ನಡೆಯಲಿದೆ. [ರಾಘವೇಶ್ವರ ಸ್ವಾಮೀಜಿಗೆ ಬೆದರಿಕೆ : ದಂಪತಿ ಬಂಧನ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+