ಅತ್ಯಾಚಾರ ಆರೋಪ: ಆದಾಯ ತೆರಿಗೆ ಅಧಿಕಾರಿ ವಿರುದ್ಧ ಎಫ್‌ಐಆರ್

ಬೆಂಗಳೂರು, ಜೂನ್ 6: ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಎಸಗಿದ್ದಾರೆ ಎಂದು ಅದಾಯ ತೆರಿಗೆ ಇಲಾಖೆ ಅಧಿಕಾರಿ ವಿರುದ್ಧ ಅವರ ಸಹೋದ್ಯೋಗಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಎಚ್‌.ಡಿ. ಸಂಭ್ರಮ್ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

2014ರ ಜೂನ್‌ನಿಂದ ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ಕೆಲಸ ಮಾಡುವ ಎಚ್‌.ಡಿ. ಸಂಭ್ರಮ್ ಎಂಬುವವರು 2017ರಲ್ಲಿ ಪರಿಚಯವಾಗಿದ್ದರು. ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಮದುವೆಯಾಗಿ ನಂಬಿಸಿದ್ದ ಅವರು ತಮ್ಮೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದರು. ಆದರೆ ಮದುವೆ ಮಾಡಿಕೊಳ್ಳಲು ಬಳಿಕ ಒಪ್ಪಿಕೊಳ್ಳಲಿಲ್ಲ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದರು.

rape case fir against income tax officer in bengaluru

ದೈಹಿಕ ಸಂಪರ್ಕ ಬೆಳೆಸಿದ್ದರಿಂದ ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದೆ. ಆದರೆ, ಅವರು ಅದನ್ನು ನಿರಾಕರಿಸಿದರು. ಅಲ್ಲದೆ, ಬೆಂಗಳೂರಿನ ಕಚೇರಿಯಿಂದ ಮಡಿಕೇರಿಗೆ ವರ್ಗಾವಣೆ ಮಾಡಿಸಿಕೊಂಡು ಹೋಗಿದ್ದಾರೆ. ಈ ಬಗ್ಗೆ ಅವರನ್ನು ಪ್ರಶ್ನಿಸಿದರೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿದ್ದರು.

ನನಗೆ ಮೋಸ ಮಾಡಿ, ಬಲಾತ್ಕಾರ ನಡೆಸಿದ್ದಲ್ಲದೆ, ಪ್ರಾಣ ಬದೆರಿಕೆ ಹಾಕಿರುವ ಸಂಭ್ರಮ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಅವರು ಕೊರಿದ್ದರು.

ಹೀಗಾಗಿ ಸಂಭ್ರಮ್ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿ ಅತ್ಯಾಚಾರ, ವಂಚನೆ ಆರೋಪ ಪ್ರಕರಣ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+