ರೇಪ್ ಕೇಸ್ : ಹುಣಸೇಮಾರನಹಳ್ಳಿ ಸ್ವಾಮೀಜಿಗೆ ವಿರುದ್ಧ ಎಫ್ಐಆರ್

ಮಂಗಳೂರು/ಬೆಂಗಳೂರು, ನವೆಂಬರ್ 24: ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯ ಜಂಗಮ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಸ್ವಾಮಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರಾಸಲೀಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದಯಾನಂದ ವಿರುದ್ಧ ಮಂಗಳೂರಿನಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಎಫ್ಐಆರ್ ಹಾಕಿದ್ದಾರೆ.

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಮದ್ದೇವಣಾಪುರ ಮಠದ ಪೀಠಾಧಿಪತಿ ಶಿವಚಾರ್ಯ ಸ್ವಾಮೀಜಿ ಪುತ್ರ ದಯಾನಂದ ಅಲಿಯಾಸ್ ನಂಜೇಶ್ವರ ಸ್ವಾಮೀಜಿ ನಟಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ದೃಶ್ಯ ವಿವಿಧ ಮಾಧ್ಯಮಗಳಲ್ಲಿ ಹರಿದಾಡಿತ್ತು.

Rape Case: FIR filed against Dayanad Swamiji Maddevanapura mutt

2017ರ ಸೆಪ್ಟೆಂಬರ್ ತಿಂಗಳಿನಲ್ಲಿ ಅತ್ಯಾಚಾರ ಎಸಗಲಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ ರಾಸಲೀಲೆ ವಿಡಿಯೋ ಹರಿದಾಡಿತ್ತು. ಈ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಮಂಗಳೂರು ಮೂಲದ ಸ್ಯಾಂಡಲ್ ವುಡ್ ನಟಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಈಗ ಈ ಕುರಿತಂತೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಸ್ವಾಮೀಜಿ ಸೇರಿದಂತೆ ಏಳು ಮಂದಿ ವಿರುದ್ಧ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಮದ್ದೇವಣಾಪುರ ಮಠದ ಪೀಠಾಧಿಪತಿ ಶಿವಚಾರ್ಯ ಸ್ವಾಮೀಜಿ ಪುತ್ರ ದಯಾನಂದ ಅಲಿಯಾಸ್ ನಂಜೇಶ್ವರ ಸ್ವಾಮೀಜಿಯ ಬಳಿ ಹನಿಟ್ರ್ಯಾಪ್ ಮೂಲಕ ಹಣ ವಸೂಲಿಗೆ ಇಳಿದಿದ್ದಾರೆ. ಮಠದ ಆಸ್ತಿಗಾಗಿ ದಯಾನಂದ ಅವರ ಸಂಬಂಧಿಕರೇ ಈ ಕೃತ್ಯ ಮಾಡಿಸಿದ್ದಾರೆ ಎಂದು ದಯಾನಂದ ಅವರ ಭಕ್ತರು ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+