ಡಾ. ಜಿಎಸ್ಎಸ್ ಅಂತಿಮ ದರ್ಶನದ ವಿವರಗಳು
ಬೆಂಗಳೂರು, ಡಿ. 25 : ರಾಷ್ಟ್ರಕವಿ ಡಾ ಜಿ. ಎಸ್. ಶಿವರುದ್ರಪ್ಪ ಅವರ ಅಂತಿಮ ದರ್ಶನಕ್ಕೆ ಡಿಸೆಂಬರ್ 26ರಂದು ಬೆಂಗಳೂರಿನ ವಿವಿಧೆಡೆ ಅನುವುಮಾಡಿಕೊಡಲಾಗಿದೆ. ಅದೇ ದಿನ ಸಂಜೆ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯದ ಬಳಿಯ ಕರ್ನಾಟಕ ಕಲಾಗ್ರಾಮದಲ್ಲಿ ನಡೆಯಲಿದೆ.
ಅಂತಿಮ ದರ್ಶನ ಎಲ್ಲೆಲ್ಲಿ?
ಡಾ ಜಿ. ಎಸ್. ಶಿವರುದ್ರಪ್ಪ ಅವರ ಪಾರ್ಥಿವ ಶರೀರವನ್ನು ಡಿಸೆಂಬರ್ 26ರಂದು ಬೆಳಿಗ್ಗೆ 7 ಗಂಟೆಗೆ ಆಸ್ಪತ್ರೆಯಿಂದ ಬನಶಂಕರಿ ಎರಡನೇ ಹಂತದಲ್ಲಿರುವ ರಾಷ್ಟ್ರಕವಿಯ ಮನೆಗೆ ತರಲಾಗುವುದು. ಅಂದು ಬೆಳಿಗ್ಗೆ 8 ಗಂಟೆಯಿಂದ 8.30 ಗಂಟೆಯವರೆಗೆ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. [ಭಾವ ಜೀವಿಯ ಕೈ ಹಿಡಿದ ಪ್ರೀತಿಯ ಸೆಲೆ]

ನಂತರ, ಬೆಳಿಗ್ಗೆ 9.30 ಗಂಟೆಯಿಂದ 10 ಗಂಟೆಯವರೆಗೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ನ ಪ್ರಾಂಗಣದಲ್ಲಿ ಡಾ ಜಿ. ಎಸ್. ಶಿವರುದ್ರಪ್ಪ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ತದನಂತರ, ನಗರದ ಜಯಚಾಮರಾಜೇಂದ್ರ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಎಸ್ಸೆಸ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. [ಜಿಎಸ್ಎಸ್ ಬರೆದ ಉಯಿಲಿನಲ್ಲೇನಿದೆ]
ಇದಾದ ಬಳಿಕ ಮೈಸೂರು ರಸ್ತೆ ಮಾರ್ಗವಾಗಿ ಜ್ಞಾನಭಾರತಿಯಲ್ಲಿರುವ ಕನ್ನಡ ಅಧ್ಯಯನ ಸಂಸ್ಥೆಯತ್ತ ರಾಷ್ಟ್ರಕವಿಯ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುವುದು. ಜಿ ಎಸ್ ಎಸ್ ಅವರ ಪಾರ್ಥಿವ ಶರೀರಕ್ಕೆ ಅಲ್ಲಿ ಗೌರವ ಸಲ್ಲಿಸಿದ ನಂತರ ಪಾರ್ಥಿವ ಶರೀರವನ್ನು ಕರ್ನಾಟಕ ಕಲಾಗ್ರಾಮಕ್ಕೆ ಕೊಂಡೊಯ್ಯಲಾಗುವುದು. ಡಾ ಜಿ ಎಸ್ ಶಿವರುದ್ರಪ್ಪ ಅವರ ಅಂತ್ಯ ಸಂಸ್ಕಾರ ಕಲಾಗ್ರಾಮದಲ್ಲಿ ಸಂಜೆ 4.30 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications