Ration Card: ಅನ್ನಭಾಗ್ಯ: ಸರ್ವರ್ ಸಮಸ್ಯೆ ನಿವಾರಣೆ, ರೇಷನ್ ಡಿಪೋಗಳ ತಪಾಸಣೆ!

Ration Card: ಅನ್ನಭಾಗ್ಯ ಯೋಜನೆಯಲ್ಲಿ ಉಂಟಾಗುತ್ತಿರುವ ಸರ್ವರ್ ಸಮಸ್ಯೆ ನಿವಾರಣೆ ಹಾಗೂ ರೇಷನ್ ಡಿಪೋಗಳ ತಪಾಸಣೆಗೆ ಪಾಲಿಕೆಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಯಶ್ರೀ ಗೌಡ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಹಾಗೂ ಪರಿಣಾಮಕಾರಿ ಅನುಷ್ಠಾನ ಕುರಿತು ಪಾಲಿಕೆಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಯಶ್ರೀ ಗೌಡ ಅವರು ಪಾಲಿಕೆ ಸಭಾಂಗಣದಲ್ಲಿ ಆಗಸ್ಟ್‌ 28ರ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಲ್ಲಿನ ಸರ್ವರ್ ಸಮಸ್ಯೆ ನಿವಾರಣೆ ಹಾಗೂ ರೇಷನ್ ಡಿಪೋಗಳ ತಪಾಸಣೆಗೆ ಸೂಚನೆ ನೀಡಲಾಗಿದೆ. ಪಡಿತರ ವಿತರಣೆಯಲ್ಲಿ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಆಹಾರ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿದರು. ಫಲಾನುಭವಿಗಳಿಗೆ ತೂಕದಲ್ಲಿ ಮೋಸವಾಗದಂತೆ ಪೂರ್ಣ ಪ್ರಮಾಣದ ಆಹಾರ ಧಾನ್ಯ ವಿತರಿಸಬೇಕು ಮತ್ತು ಅಕ್ರಮಗಳ ತಡೆಗೆ ನಿರಂತರ ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

Ration Card

ಗೃಹಬಳಕೆಯ ವಿದ್ಯುತ್ ವಾಣಿಜ್ಯ ಉದ್ದೇಶಗಳಿಗೆ ದುರುಪಯೋಗ ಆಗುವುದನ್ನು ತಡೆಗಟ್ಟಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಬಿಲ್ ಪಾವತಿಗೆ ಸೂಕ್ತ ಕಾಲಾವಕಾಶ ನೀಡದೆ ಏಕಾಏಕಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬಾರದು. ಮೀಟರ್ ರೀಡರ್‌ಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು ಎಂದು ಅಧ್ಯಕ್ಷರು ತಿಳಿಸಿದರು.

ಮುಂದುವರಿದು ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೆ ಗೃಹಲಕ್ಷ್ಮಿ ಹಣ ಹೋಗುವುದನ್ನು ರದ್ದುಪಡಿಸಿ ನಿಯಮಾನುಸಾರ ಕುಟುಂಬದ ಇತರ ಮಹಿಳಾ ಮುಖ್ಯಸ್ಥರಿಗೆ ಬದಲಾಯಿಸುವ ಪ್ರಕ್ರಿಯೆ ಚುರುಕುಗೊಳಿಸಲು ಸೂಚಿಸಲಾಯಿತು. ಹೆಸರು ಹಾಗೂ ಆಧಾರ್ ವ್ಯತ್ಯಾಸಗಳ ದೋಷ ನಿವಾರಣೆ ಮತ್ತು ಇ-ಕೆವೈಸಿ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಸರಿಪಡಿಸಲು ಸಿಡಿಪಿಒ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Ration Card: ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್

ಇನ್ನು ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪ್ರಕ್ರಿಯೆ ಪ್ರಗತಿ ಹಾಗೂ ವಾರ್ಡ್‌ವಾರು ಅಂಕಿ-ಅಂಶಕ್ಕೆ ಸೂಚನೆ ನೀಡಲಾಗಿದೆ. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಯಶಸ್ವಿಯಾಗಿ ಸಾಗುತ್ತಿದ್ದು, ಸ್ಮಾರ್ಟ್ ಕಾರ್ಡ್ ವಿತರಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ದಕ್ಷಿಣ ನಗರ ಪಾಲಿಕೆಯ 72 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಎಷ್ಟು ಜನ ಮಹಿಳೆಯರು ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ನಿಖರ ಅಂಕಿ-ಅಂಶಗಳ ವರದಿಯನ್ನು ಮುಂದಿನ ಸಭೆಗೆ ಸಲ್ಲಿಸುವಂತೆ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಈ ಯೋಜನೆಗೆ 22,992 ನೋಂದಾಯಿತ ಯುವಕರಲ್ಲಿ 18,982 ಅರ್ಹ ಫಲಾನುಭವಿಗಳಿಗೆ ಮಾಸಿಕ ಭತ್ಯೆ ನೀಡಲಾಗುತ್ತಿದೆ. ಗರಿಷ್ಠ 2 ವರ್ಷಗಳವರೆಗೆ ಅಥವಾ ಉದ್ಯೋಗ ದೊರೆಯುವವರೆಗೆ ಈ ಸೌಲಭ್ಯ ಲಭ್ಯವಿರಲಿದ್ದು, ಮಧ್ಯದಲ್ಲಿ ಕೆಲಸ ದೊರೆತವರು ಸ್ವಯಂಪ್ರೇರಿತರಾಗಿ ಮಾಹಿತಿ ನೀಡಬೇಕು. ಕ್ಷೇತ್ರವಾರು ಫಲಾನುಭವಿಗಳ ಪಟ್ಟಿಯನ್ನು ಕ್ರೋಢೀಕರಿಸಿ ಮುಂದಿನ ಹಂತದ ಕಾರ್ಯಯೋಜನೆ ರೂಪಿಸಲು ಅಧಿಕಾರಿಗಳಿಗೆ ತಿಳಿಸಿದರು.

ಇನ್ನು ಈ ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು, ಪಾಲಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಸ್ಕಾಂ, ಬಿಎಂಟಿಸಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+