ರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥರೆಡ್ಡಿ ಬೆಂಬಲಿಗರ ಹಲ್ಲೆ
ಬೆಂಗಳೂರು, ಮಾರ್ಚ್ 14: ಪಡಿತರ ಚೀಟಿ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಪ್ರಶ್ನಿಸಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಬೆಂಬಲಿಗರು ಹಲ್ಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ.
ಮಡಿವಾಳ ವಾರ್ಡ್ ನ ತಾವರೆಕೆರೆ ಬಿಬಿಎಂಪಿ ಕಚೇರಿಯಲ್ಲಿ ಪಡಿತರ ಚೀಟಿಯನ್ನು ವಿತರಿಸಲಾಗುತ್ತಿತ್ತು. ಆದರೆ ಆ ಪಡಿತರ ಚೀಟಿ ವಿತರಣೆಯಲ್ಲಿ ಅಕ್ರಮವಿದೆ ಎನ್ನುವ ಮಾಹಿತಿ ಮೇರೆ ರವಿಕೃಷ್ಣಾರೆಡ್ಡಿ ಹಾಗೂ ಬೆಂಬಲಿಗರು ಅಲ್ಲಿಗೆ ತೆರಳಿದ್ದರು. ಬಿಬಿಎಂಪಿ ಕಚೇರಿಗೆ ತೆರಳಿ ದಾಖಲೆಗಳನ್ನು ನೀಡುವಂತೆ ಕೇಳಿದ್ದಾರೆ.

ಆದರೆ ರವಿಕೃಷ್ಣಾರೆಡ್ಡಿ ಮಾತಿಗೆ ಬೆಲೆ ಕೊಡದೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಅವರ ಬೆಂಬಲಿಗರು, ರವಿಕೃಷ್ಣಾ ರೆಡ್ಡಿಯವರ ಮೊಬೈಲ್ ಕಸಿದುಕೊಂಡು ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಈ ಮಧ್ಯೆ ಮಾತಿನ ಚಕಾಮಕಿ ನಡೆದಿದೆ. ನಂತರ ಪೊಲೀಸರು ಮಧ್ಯೆ ಪ್ರವೇಶಿಸಿ ಜಗಳವನ್ನು ನಿಲ್ಲಿಸಿದ್ದಾರೆ.












Click it and Unblock the Notifications