ರವಿ ಬೆಳಗೆರೆ ಬಂಧನ : ಯಶೋಮತಿ ಫೇಸ್‌ಬುಕ್ ಸ್ಟೇಟಸ್
Recommended Video

ಬೆಂಗಳೂರು, ಡಿಸೆಂಬರ್. 11 : ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಬಂಧನದ ಬಗ್ಗೆ 2ನೇ ಪತ್ನಿ ಯಶೋಮತಿ ಮೌನ ಮುರಿದಿದ್ದಾರೆ.
ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರವಿ ಬೆಳಗೆರೆ, ನ್ಯಾಯಾಂಗ ಬಂಧನಲ್ಲಿದ್ದು, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಯಶೋಮತಿ ಅವರು ಇಂದು ಸಂಜೆ ಫೇಸ್ ಬುಕ್‌ನಲ್ಲಿ ಹಾಕಿರುವ ಸ್ಟೇಟಸ್ ಹೀಗಿದೆ.

'ಮೊನ್ನೆ ತಾನೇ ನಡೆದ ಹಿಮನ ಬರ್ತ್ ಡೇಯ ಫೊಟೋಗಳನ್ನು ನೋಡುತ್ತಾ ಕುಳಿತಿದ್ದೆ. ಅದರಲ್ಲಿ ಕೆಲವನ್ನು select ಮಾಡಿ ರವಿಗೆ ಕಳಿಸಬೇಕು ಅಂದುಕೊಳ್ಳುವಷ್ಟರಲ್ಲಿ.... "ಯಶೂ ಮಾ ಎಲ್ಲಿದ್ದೀರ? ಒಂದು ಸ್ವಲ್ಪ ಟಿವಿ ನೋಡಿ" ಅಂದ ಕೂಡಲೇ ಅದನ್ನು ಅಲ್ಲೇ ಬಿಟ್ಟು ಟಿವಿ ಆನ್ ಮಾಡಿದವಳ ಕಿವಿಗೆ ಮೊದಲು ರಾಚಿದ್ದೇ ನನ್ನ ಹೆಸರು... ಏನಾಗ್ತಿದೆ? ನನ್ನ ಹೆಸರು ಯಾಕೆ ಬರ್ತಿದೆ ಅದೂ ನಂಗೇ ಗೊತ್ತಿಲ್ಲದೇ.... ಹಿಮ ಬೇರೆ ಸ್ಕೂಲಿಂದ ಬರುವ ಹೊತ್ತಾಗಿತ್ತು. ಮೊದಲು ಓಡಿ ಹೋಗಿ ಅವನನ್ನು ಕರೆದುಕೊಂಡು ಬಂದೆ.
ರಾತ್ರಿಯಿಡೀ ಒಂದೇ ಸಮನೆ ಟಿವಿಗಳಲ್ಲಿ ಬಿತ್ತರವಾಗುತ್ತಿದ್ದ ಸುದ್ದಿಗಳು ಕಿವಿಗೆ ಕಾದ ಸೀಸದಂತೆ ಬೀಳುತ್ತಿದ್ದವು. ಕಚೇರಿಯಲ್ಲಿ ಫೋನುಗಳೆಲ್ಲ ಪೊಲೀಸರ ವಶದಲ್ಲಿದ್ದವು. ಹಾಗಾಗಿ ಎಲ್ಲಿಂದಲೂ ಉತ್ತರ ಸಿಗುತ್ತಿಲ್ಲ. ಸರಿ ಆದದ್ದಾಗಲಿ ನೋಡೋಣ ಭಗವಂತನೊಬ್ಬನಿದ್ದಾನೆ ಅಂದು ಧೈರ್ಯವಾಗಿ ಕುಳಿತವಳಿಗೆ ಅಮ್ಮ, ತಂಗಿ, ಅಣ್ಣನ ಮಗನ ಜೊತೆಗೆ ಗೆಳತಿಯರ ಧೈರ್ಯ ತುಂಬುವ ಮೆಸೇಜುಗಳು ಜೊತೆಯಾದವು.
ಅಮ್ಮಾ ಯಾವುದಕ್ಕೂ ಹೆದರಿಕೊಳ್ಳಬೇಡ. ಏನೇ ಬಂದ್ರೂ ಧೈರ್ಯವಾಗಿ face ಮಾಡು.... ಅಂದ ಹಿಮ.
ಅನುಮಾನಗಳು, ಅವಮಾನಗಳು, ಆರೋಪಗಳು ಬೆನ್ನ ಹಿಂದೆ ನೆರಳಿನಂತೆ ನಡೆದು ಬರುತ್ತಲೇ ಇವೆ. ನಿಖರವಾದ ಮಾಹಿತಿಯಿಲ್ಲದೆ ಟಿವಿ ಮಾಧ್ಯಮಗಳು ತಮಗೆ ಬೇಕಾದ ಬಣ್ಣ ತುಂಬಿ ಒಂದು ರೀತಿಯ ರಿವೇಂಜಿಗಿಳಿದಿವೆ. ಕೆಲವರಿಗೆ ಮನರಂಜನೆ, ಕೆಲವರಿಗೆ ಆತಂಕ. ಕೆಲವರಿಗೆ ಕುತೂಹಲ. ಇನ್ನು ಕೆಲವರಿಗೆ ಅನುಮಾನ....
"ಏನೂ ಯೋಚನೆ ಮಾಡಬೇಡ ನಂಗೇನೂ ಆಗಲ್ಲ" ಅಂತ ಚೆಲ್ಲಿ ಹೋದ ರವಿಯ ನಗುವೇ ಮನೆ ಮನ ತುಂಬಿದೆ. ಅದೇ ನಿರೀಕ್ಷೆಯಲ್ಲಿದ್ದೇವೆ ನಾನು ಹಿಮ.
ನಿಮಗೇನೂ ಆಗಲ್ಲ ವೀ. ನಮ್ಮೆಲ್ಲರ ಪ್ರಾರ್ಥನೆ ಸದಾ ನಿಮ್ಮೊಂದಿಗಿದೆ. ಇದೊಂದು ಸಣ್ಣ ಪರೀಕ್ಷೆ ಅಷ್ಟೆ. ಅದರಲ್ಲಿ ಗೆದ್ದು ಬರುವಿರೆಂಬ ನಂಬಿಕೆ ನನಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications