ರವಿ ಬೆಳಗೆರೆ ಮಧ್ಯಂತರ ಜಾಮೀನು ಅವಧಿ ಅಂತ್ಯ
ಬೆಂಗಳೂರು, ಡಿಸೆಂಬರ್ 18 : ಪತ್ರಕರ್ತ ರವಿ ಬೆಳಗೆರೆ ಮಧ್ಯಂತರ ಜಾಮೀನು ಸೋಮವಾರ ಕೊನೆಗೊಳ್ಳಲಿದ್ದು, ನ್ಯಾಯಾಲಯ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಕೆರಳಿಸಿದೆ.
ಮಧ್ಯಂತರ ಜಾಮೀನು ಅರ್ಜಿ ಸೋಮವಾರ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆಯಿಂದ ಹೆಚ್ಚಿನ ಮಾಹಿತಿ ಪೊಲೀಸರಿಗೆ ಲಭ್ಯವಾಗದ ಹಿನ್ನೆಲೆಯಲ್ಲಿ ಇನ್ನು ಕೆಲ ದಿನಗಳವರೆಗೆ ಪೊಲೀಸ್ ಕಸ್ಟಡಿ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.

ಮಾಜಿ ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದ ಆರೋಪ ಎದುರಿಸುತ್ತಿದ್ದ ಬೆಳಗೆರೆ, ಕಳೆದ ಆರು ದಿನಗಳಿಂದ ಮಧ್ಯಂತರ ಜಾಮೀನಿನ ಮೇಲೆ ಚಿಕಿತ್ಸೆ ಪಡೆಯುತ್ತಿದ್ದರು. ರವಿ ಬೆಳಗೆರೆ ಅವರನ್ನು ಸೋಮವಾರ ಸೆಷನ್ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಲಾಗುತ್ತಿದೆ. ಸರ್ಕಾರಿ ಅಭಿಯೋಜನಕರು ಜಾಮೀನು ವಿಸ್ತರಿಸದಂತೆ ಮನವಿ ಸಲ್ಲಿಸಿದ್ದಾರೆ.












Click it and Unblock the Notifications