ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು
ಬೆಂಗಳೂರು, ಡಿಸೆಂಬರ್ 12: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
"ಲೋ ಬಿಪಿ, ಮದುಮೇಹ ಉಲ್ಬಣಗೊಂಡ ಹಿನ್ನೆಲೆಯಲ್ಲಿ ರವಿ ಬೆಳಗೆರೆ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಡಿಐಜಿ ರೇವಣ್ಣ ತಿಳಿಸಿದ್ದಾರೆ.

ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ಜಗದೀಶ್ ಅವರು ರವಿ ಬೆಳಗೆರೆ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿದೆ. ಆದರೆ, ಮಂಗಳವಾರ ಸಂಜೆ ರವಿ ಬೆಳಗೆರೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.












Click it and Unblock the Notifications