ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ರವಿ ಡಿ.ಚನ್ನಣ್ಣನವರ್ ವರ್ಗಾವಣೆ

ಬೆಂಗಳೂರು, ಜೂನ್ 8: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಮುಖ ಅಧಿಕಾರಿಗಳ ವರ್ಗಾವಣೆ ಪರ್ವ ಶುರುವಾಗಿದೆ. ಈಗ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಬುಧವಾರ ತಾನೆ ಕರ್ನಾಟಕ ಸರ್ಕಾರ ಹಿರಿಯ ಅಧಿಕಾರಿ ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

 Ravi D Channannavar is transferred As DIGP

ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಎಡಿಜಿಪಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಿದ್ದರೆ, ಆರ್ ಹಿತೇಂದ್ರ ಅವರನ್ನು ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ, ಉಮೇಶ್ ಕುಮಾರ್ ಅವರನ್ನು ಎಡಿಜಿಪಿ ಕ್ರೈಂ & ಟೆಕ್ನಿಕಲ್ ಸರ್ವಿಸ್​ ಮತ್ತು ಸೌಮೇಂದು ಮುಖರ್ಜಿ ಅವರನ್ನು ಎಡಿಜಿಪಿ ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶಿಸಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೆಲವು ದಿನಗಳ ಹಿಂದ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಕಪಿಲ್ ಮೋಹನ್ ಅವರನ್ನು ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ, ಮುಂದಿನ ಆದೇಶದವರೆಗೆ ಅವರು ಅದೇ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.

ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು

ಜಲ್ಲಿ ಕ್ರಷರ್ ಮಾಲೀಕರಿಂದ ಲಂಚ ಪಡೆದಿದ್ದಾರೆ ಎನ್ನುವ ಆರೋಪ ಇವರ ಮೇಲೆ ಕೇಳಿಬಂದಿತ್ತು, ಸದನದಲ್ಲಿ ಕೂಡ ಈ ಬಗ್ಗೆ ಚರ್ಚೆ ನಡೆದಿತ್ತು. ಅಲ್ಲದೆ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಬಗ್ಗೆ ಕೂಡ ಆರೋಪ ಕೇಳಿ ಬಂದಿತ್ತು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ನಾನು ಗಳಿಸಿರುವ ಆಸ್ತಿ ಕಾನೂನು ಬದ್ದವಾಗಿದ್ದು, ನನ್ನ ಮೇಲಿನ ಆರೋಪ ಸುಳ್ಳು ಎಂದು ಸ್ಪಷ್ಟನೆ ಕೊಟ್ಟಿದ್ದರು. ಅವರ ವಿರುದ್ಧ ಮಾಧ್ಯಮಗಳು ಯಾವುದೇ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ಕೂಡ ತಂದಿದ್ದರು.

ಪತ್ನಿಗೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸೋದರನ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಕೂಡ ಸುದ್ದಿಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+