ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರವಿಕೃಷ್ಣಾ ರೆಡ್ಡಿ ಅವರಿಗೆ ಚುನಾವಣೆಗೆ ಸ್ಪರ್ಧಿಸದಂತೆ ಬೆದರಿಕೆ

|
Google Oneindia Kannada News

ಬೆಂಗಳೂರು, ಮಾರ್ಚ್ 25 : ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರವಿ ಕೃಷ್ಣಾ ರೆಡ್ಡಿ ಅವರಿಗೆ ಬೆದರಿಕೆ ಕರೆ ಬಂದಿದೆ. ಜಯನಗರ ವಿಧಾನಸಭಾ ಕ್ಷೇತ್ರದಿಂದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ರವಿಕೃಷ್ಣಾ ರೆಡ್ಡಿ ಅವರು ತಮ್ಮ ಫೇಸ್‌ ಬುಕ್ ಖಾತೆಯಲ್ಲಿ ಈ ಕುರಿತು ವಿಡಿಯೋ ಅಪ್‌ ಲೋಡ್ ಮಾಡಿದ್ದಾರೆ. ಮಾ.24ರಂದು ಸಂಜೆ ಶಶಾಂಕ್ ಎಂಬ ವ್ಯಕ್ತಿ ಅವರಿಗೆ ಬೆದರಿಕೆ ಹಾಕಿದ್ದಾನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಜಯನಗರದ ಅಭಿವೃದ್ಧಿಗೆ ರವಿಕೃಷ್ಣಾ ರೆಡ್ಡಿ 5 ಸೂತ್ರಗಳುಜಯನಗರದ ಅಭಿವೃದ್ಧಿಗೆ ರವಿಕೃಷ್ಣಾ ರೆಡ್ಡಿ 5 ಸೂತ್ರಗಳು

ಜಯನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬಾರದು ಎಂದು ಶಶಾಂಕ್ ಎಂಬ ವ್ಯಕ್ತಿ ಬೆದರಿಕೆ ಹಾಕಿದ್ದಾರೆ. ದೂರವಾಣಿ ಕರೆಯನ್ನು ರೆಕಾರ್ಡ್ ಮಾಡಿಕೊಂಡಿದ್ದು,ಪೊಲೀಸರಿಗೆ ದೂರು ನೀಡುವುದಾಗಿ ರವಿಕೃಷ್ಣಾ ರೆಡ್ಡಿ ಹೇಳಿದ್ದಾರೆ.

Ravi Krishna Reddy receives threat call

ಮಾದರಿ ರಾಜಕಾರಣಕ್ಕೆ ಅಣಿಯಾಗಿರುವ ರವಿಕೃಷ್ಣಾ ರೆಡ್ಡಿ ಸಂದರ್ಶನಮಾದರಿ ರಾಜಕಾರಣಕ್ಕೆ ಅಣಿಯಾಗಿರುವ ರವಿಕೃಷ್ಣಾ ರೆಡ್ಡಿ ಸಂದರ್ಶನ

ಮಾರ್ಚ್ 14ರಂದು ರವಿಕೃಷ್ಣಾ ರೆಡ್ಡಿ ಅವರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಲಾಗಿತ್ತು. ಪಡಿತರಚೀಟಿ ವಿತರಣೆಯಲ್ಲಿ ನಡೆಯುತ್ತಿದ್ದ ಅಕ್ರಮ ಪ್ರಶ್ನಿಸಿದ್ದಕ್ಕೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಬೆಂಬಲಿಗರು ಅವರ ಮೇಲೆ ಹಲ್ಲೆ ನಡೆಸಲು ಪ್ರಯತ್ನ ನಡೆಸಿದ್ದರು.

ರವಿಕೃಷ್ಣಾ ರೆಡ್ಡಿ ಜಯನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಅವರು ಪ್ರಚಾರ ಕಾರ್ಯವನ್ನು ನಡೆಸುತ್ತಿದ್ದಾರೆ.

English summary
Anti-corruption crusader, independent politician Ravi Krishna Reddy received a threat call on his cell phone. He will contest for Karnataka assembly elections 2018 from Jayanagar assembly constituency, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X