ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಜುನಾಥ ರೆಡ್ಡಿ ಬಂಧನಕ್ಕೆ ಆಗ್ರಹಿಸಿ ರವಿಕೃಷ್ಣಾರೆಡ್ಡಿ ಧರಣಿ

|
Google Oneindia Kannada News

ಬೆಂಗಳೂರು, ಮಾರ್ಚ್ 15: ಪಡಿತರ ಚೀಟಿಯಲ್ಲಿನ ಅಕ್ರಮ ವಿರೋಧಿಸಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾ ರೆಡ್ಡಿ ಮೇಲೆ ಹಲ್ಲೆ ನಡೆಸಿದ ಮಾಜಿ ಮೇಯರ್ ಮಂಜುನಾಥರೆಡ್ಡಿ ಬಂಧನಕ್ಕೆ ಆಗ್ರಹಿಸಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ಎದುರು ಧರಣಿ ಆರಂಭಗೊಂಡಿದೆ.

ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಬುಧವಾರ ಪಡಿತರ ಚೀಟಿ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಪ್ರಶ್ನಿಸಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಬೆಂಬಲಿಗರು ಹಲ್ಲೆ ಮಾಡಿದ್ದರು.

ರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥರೆಡ್ಡಿ ಬೆಂಬಲಿಗರ ಹಲ್ಲೆರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥರೆಡ್ಡಿ ಬೆಂಬಲಿಗರ ಹಲ್ಲೆ

ಮಡಿವಾಳ ವಾರ್ಡ್ ನ ತಾವರೆಕೆರೆ ಬಿಬಿಎಂಪಿ ಕಚೇರಿಯಲ್ಲಿ ಪಡಿತರ ಚೀಟಿಯನ್ನು ವಿತರಿಸಲಾಗುತ್ತಿತ್ತು. ಆದರೆ ಆ ಪಡಿತರ ಚೀಟಿ ವಿತರಣೆಯಲ್ಲಿ ಅಕ್ರಮವಿದೆ ಎನ್ನುವ ಮಾಹಿತಿ ಮೇರೆ ರವಿಕೃಷ್ಣಾರೆಡ್ಡಿ ಹಾಗೂ ಬೆಂಬಲಿಗರು ಅಲ್ಲಿಗೆ ತೆರಳಿದ್ದರು. ಬಿಬಿಎಂಪಿ ಕಚೇರಿಗೆ ತೆರಳಿ ದಾಖಲೆಗಳನ್ನು ನೀಡುವಂತೆ ಕೇಳಿದ್ದರು.

Ravikrishna Reddy protests seeking arrest of former mayor

ದಾಖಲೆ ಕೇಳಿದ್ದಕ್ಕೆ ಮಂಜುನಾಥರೆಡ್ಡಿ ಬಂಬೆಲಿಗರು ರವಿಕೃಷ್ಠಾರೆಡ್ಡಿ ಮೇಲೆ ಹಲ್ಲೆ ನಡೆಸಿದ್ದರು. ಇದಾದ ನಂತರ ಪೊಲೀಸರು ಬಂದು ರವಿಕೃಷ್ಣಾರೆಡ್ಡಿಯವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಬದಲು, ರವಿಕೃಷ್ಣಾ ರೆಡ್ಡಿಯವರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಮೇಯರ್ ಮಂಜುನಾಥ ರೆಡ್ಡಿಯವರನ್ನು ಬಂಧಿಸುವಂತೆ ಒತ್ತಾಯಿಸಲಾಗುತ್ತಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದಿದ್ದಾರೆ. ಪೊಲೀಸರು ಸರ್ಕಾರ, ಸಾರ್ವಜನಿಕರ ಹಣ ತೆಗೆದುಕೊಂಡು ನಾಗರಿಕರನ್ನು ರಕ್ಷಣೆ ಮಾಡುವ ಬದಲು ಕ್ರಿಮಿನಲ್ ಗಳು ಮಾಡುವುದನ್ನು ಬೆಂಬಲಿಸುತ್ತಾ ಮೂಕ ಪ್ರೇಕ್ಷಕರಾಗುತ್ತಿದ್ದಾರೆ. ಗೃಹ ಸಚಿವ ರಾಮಲಿಂಗಾರೆಡ್ಡಿ ಇಲ್ಲಿಗೆ ಬಂದು ಆದ ಘಟನೆ ಬಗ್ಗೆ ಕ್ಷಮೆ ಕೇಳಬೇಕು. ನಲಪಾಡ್ ಗೆ ಆದ ರೀತಿಯಲ್ಲೇ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು ಎಂದು ಎಸ್.ಆರ್. ಹಿರೇಮಠ್ ಹೇಳಿದರು.

English summary
Seeking arrest of former mayor Manjunatha Reddy, social activist Ravi krishna reddy agitating infront of Suddaguntepalya police station in Bengaluru on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X