ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಕಾಲ್ತುಳಿತ 20ಕ್ಕೂ ಹೆಚ್ಚು ಜನರಿಗೆ ಗಾಯ, 8ಕ್ಕೂ ಹೆಚ್ಚು ಜನ ಸಾವು!

ಬೆಂಗಳೂರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸಂಭ್ರಮಾಚರಣೆಯ ಸಂದರ್ಭದಲ್ಲಿ ಭಾರೀ ದುರಂತ ಸಂಭವಿಸಿದ್ದು. ಈ ದುರಂತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯ, 3 ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಬೆಂಗಳೂರಿಗೆ ಆರ್‌ಸಿಬಿ ತಂಡವು ಬಂದಿದ್ದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಎಂಟ್ರಿ ಕೊಡುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕಾಲ್ತುಳಿತ ದುರಂತ ಆಘಾತವನ್ನುಂಟು ಮಾಡಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಮೊದಲ ಬಾರಿ ಐಪಿಎಲ್‌ ಟ್ರೋಫಿಯನ್ನು ಗೆದ್ದಿದೆ. ಆದರೆ, ಈ ಸಂಭ್ರಮಾಚರಣೆ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಬೆಂಗಳೂರಿಗೆ ಆರ್‌ಸಿಬಿ ತಂಡ ಬರಲಿದೆ ಎಂದು ತಿಳಿಯುತ್ತಿದ್ದಂತೆಯೇ ಬೆಂಗಳೂರಿನ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾವಿರಾರು ಜನ ಸೇರಿದ್ದರು. ಸಾವಿರಾರು ಜನರನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಲಿಲ್ಲ. ಬೆಂಗಳೂರು ಪೊಲೀಸರು ಆರ್‌ಸಿಬಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ವಿಧಾನಸೌಧದ ಬಳಿ ಬರಬಾರದು ಎಂದು ಹೇಳಿದ್ದರೂ. ಸಾವಿರಾರು ಜನ ಅಭಿಮಾನಿಗಳು ವಿಧಾನಸೌಧದ ಬಳಿ ಬಂದಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಎಂಟ್ರಿಯಲ್ಲಿ ಭಾರೀ ನೂಕುನುಗ್ಗಲು ಸೃಷ್ಟಿಯಾಗಿದ್ದು ಕಾಲ್ತುಳಿತವಾಗಿದೆ.

RCB celebration tragedy More than 20 people injured 3 dead in stampede

ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಿಕಿತ್ಸೆ ಮುಂದುವರಿದಿದೆ. ಗಾಯಗೊಂಡವರನ್ನು ಬೆಂಗಳೂರಿನ ಪೊಲೀಸರು ಎತ್ತುಕೊಂಡು ಓಡಿ ಹೋಗುತ್ತಿರುವ ಹೃದಯವಿದ್ರಾವಕ ದೃಶ್ಯಗಳು ಮನಕಲಕುವಂತೆ ಇವೆ.

ಅಭಿಮಾನಿಗಳು ಸಂತೋಷದಿಂದ ಕುಣಿದಾಡುತ್ತಿರುವಾಗಲೇ ಈ ದುರಂತ ಸಂಭವಿಸಿದೆ. ಭಾರೀ ಜನ ಸೇರಲಿದ್ದಾರೆ ಎನ್ನುವ ಕಾರಣಕ್ಕೆ ತೆರೆದ ಬಸ್‌ನಲ್ಲಿ ಮೆರವಣಿಗೆಯನ್ನು ರಾಜ್ಯ ಸರ್ಕಾರವು ರದ್ದುಪಡಿಸಿತ್ತು. ಕಾನೂನು ಹಾಗೂ ಸುವ್ಯವಸ್ಥೆಯ ದೃಷ್ಟಿಯಿಂದ ಮೆರವಣಿಗೆಯನ್ನು ರದ್ದುಪಡಿಸಿರುವುದಾಗಿ ಹೇಳಲಾಗಿತ್ತು.

ನಿಮ್ಮ ಪ್ರಾಣ ಮುಖ್ಯ ಮನೆಗೆ ಹೋಗಿ: ನಿಮ್ಮ ಪ್ರಾಣ ಮುಖ್ಯ & ನಿಮ್ಮ ಜೀವ ಅಮೂಲ್ಯವಾದದ್ದು. ದಯವಿಟ್ಟು ‌ಮನೆಗೆ‌ ಹೋಗಿ ಎಂದು ಬೆಂಗಳೂರು ಪೊಲೀಸರು ಮನವಿ ಮಾಡುತ್ತಿದ್ದಾರೆ‌. ಜನರ‌ನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರಿಂದ ಸಾಧ್ಯವಾಗುತ್ತಿಲ್ಲ. ಏಕಾಏಕಿ ಸಾವಿರಾರು ಜನ ಸೇರಿರುವುದು ಪರಿಸ್ಥಿತಿ ವಿಕೋಪಕ್ಕೆ ಹೋಗುವುದಕ್ಕೆ ಕಾರಣವಾಗಿದೆ.

ಸಾವಿನ ಸಂಖ್ಯೆ ಹೆಚ್ಚಳ: ಆರ್ ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಳವಾಗುತ್ತಿದೆ ಎನ್ನುವ ಅಪ್ಡೇಟ್ಸ್ ಬರುತ್ತಿದೆ‌. 7 ಜನ ದುರಂತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ನಿಖರ ಮಾಹಿತಿ ಲಭ್ಯವಾಗಬೇಕಿದೆ.

10ಕ್ಕೂ ಹೆಚ್ಚು ಜನ ಸಾವು: ಬೆಂಗಳೂರಿನಲ್ಲಿ ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ಸರ್ಕಾರದಿಂದ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+