IPL 2026: ಆರ್‌ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ
RCB IPL 2026: ಲಕ್ಷಾಂತರ ಕ್ರಿಕೆಟ್ ಪ್ರೇಮಿಗಳು ಕಾಯುತ್ತಿದ್ದ ಐಪಿಎಲ್ 2026 (IPL 2026) ಪಂದ್ಯಾವಳಿಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮ್ಯಾಚ್ ಬೆಂಗಳೂರಿನಲ್ಲಿ ಇದೇ ಮಾರ್ಚ್ 28 ರಂದು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಅಂದು ಮೆಟ್ರೋ ಸಂಚಾರ ಸೇವೆ ತಡರಾತ್ರಿ 2 ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ರೈಲು ಸೇವಾಅವಧಿ ವಿಸ್ತರಿಸಿದೆ. ಪಂದ್ಯ ನಡೆಯುವ ದಿನದಂದು, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11:00 ಗಂಟೆಗೆ ಬದಲಾಗಿ ತಡರಾತ್ರಿ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಹೊರಡುವ ಸಮಯ
ವೈಟ್‌ಫೀಲ್ಡ್ (ಕಾಡುಗೋಡಿ) ಯಿಂದ ರಾತ್ರಿ 12.30ಕ್ಕೆ ಮತ್ತು ಚೆಲ್ಲಘಟ್ಟ ದಿಂದ ರಾತ್ರಿ 12.45 ಗಂಟೆಗೆ ಹೊರಡಲಿವೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ ರಾತ್ರಿ 12.45 ಗಂಟೆಗೆ, ಬೊಮ್ಮಸಂದ್ರ ದಿಂದ ರಾತ್ರಿ 01.00ಕ್ಕೆ ಹಾಗೂ ಆರ್.ವಿ. ರಸ್ತೆ ಯಿಂದ ರಾತ್ರಿ 02.00ಕ್ಕೆ ಸಂಚಾರ ನಡೆಸಲಿವೆ.
ಇನ್ನೂ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು ಹೊರಡಲಿದೆ. ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲು ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ನಮ್ಮ ಮೆಟ್ರೋ ಕ್ಯೂಆರ್ ಕೋಡ್ ಎರಡು ಪ್ರಯಾಣಕ್ಕೆ (ಟು-ವೇ ಟ್ರಾವೆಲ್), ಐಪಿಎಲ್ ಟಿಕೆಟ್ ಮೇಲೆಯೇ ಮುದ್ರಿತವಾಗಿರುತ್ತದೆ ಅಥವ ಡಿಜಿಟಲ್ ಐಪಿಎಲ್ ಟಿಕೆಟ್‌ಗಳು ಲಭ್ಯವಿರುತ್ತವೆ.
ಕಬ್ಬನ್ ರಸ್ತೆ ಭಾಗದಿಂದ ಸ್ಟೇಡಿಯಂಗೆ ಪ್ರವೇಶ/ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಹಾಗೂ ಲಿಂಕ್ ರಸ್ತೆ ಭಾಗದಿಂದ ಪ್ರವೇಶ ಅಥವಾ ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಸಮೀಪದಲ್ಲಿರುವ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಸೂಚನೆ ನೀಡಲಾಗಿದೆ.
ವಾಹನಗಳ ಪಾರ್ಕಿಂಗ್‌ಗೆ ಹಣ ನಿಗದಿ
ಪಂದ್ಯದ ದಿನದಂದು ಪ್ರೇಕ್ಷಕರಿಗೆ ಅನುಕೂಲವಾಗಲು ಮತ್ತು ನಮ್ಮ ಮೆಟ್ರೋದಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಲು, ಬಿಎಂಆರ್‌ಸಿಎಲ್ ಅನೇಕ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಪಂದ್ಯದ ದಿನಗಳಲ್ಲಿ ಮೆಟ್ರೋ ನಿಲ್ದಾಣಗಳ ಪಾರ್ಕಿಂಗ್ ಸೌಲಭ್ಯವನ್ನು ಎರಡು ಚಕ್ರ ವಾಹನಗಳಿಗೆ 30 ರೂಪಾಯಿ, ಕಾರುಗಳಿಗೆ 60 ರೂಪಾಯಿ ನಿಗದಿಪಡಿಸಲಾಗಿದೆ. ಈ ದರವು ದಿನದ ಮೆಟ್ರೋ ಸೇವೆ ಮುಕ್ತಾಯವಾಗುವವರೆಗೆ ಮಾನ್ಯವಾಗಿರುತ್ತದೆ.

ಪ್ರೇಕ್ಷಕರು ತಮ್ಮ ವಾಹನಗಳನ್ನು ನಿಗದಿತ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿ, ಮೆಟ್ರೋ ಮೂಲಕ ಸ್ಟೇಡಿಯಂಗೆ ನಡೆದು ಹೋಗಬಹುದಾದ ಅಂತರದಲ್ಲಿರುವ ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣಿಸುವಂತೆ ಸಲಹೆ ನೀಡಲಾಗಿದೆ. ಇದರಿಂದ ಕೇಂದ್ರ ವ್ಯವಹಾರ ಪ್ರದೇಶ (ಸಿಬಿಡಿ) ಹಾಗೂ ಸ್ಟೇಡಿಯಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲು ಸಹಾಯವಾಗುತ್ತದೆ.
ಕ್ರಿಕೆಟ್ ಪ್ರೇಮಿಗಳು ಸೂಚನೆ ಅನುಸರಿಸುವುದು ಕಡ್ಡಾಯ
ಪ್ರಯಾಣಿಕರು ಸುಗಮ ಸಂಚಾರ, ಸುರಕ್ಷತೆ ಮತ್ತು ಜನಸಂದಣಿಯನ್ನು ತಪ್ಪಿಸಲು ಪೊಲೀಸ್, ಸ್ಟೇಡಿಯಂ ನಿರ್ವಹಣೆ ಮತ್ತು ಬಿಎಂಆರ್‌ಸಿಎಲ್ ಸಿಬ್ಬಂದಿಯ ನಿರ್ದೇಶನ ಅನುಸರಿಸಬೇಕು. ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಯಾವುದೇ ಅನಾಹುತಗಳು ಅಥವಾ ಅಹಿತಕರ ಘಟನೆಗಳನ್ನು ತಡೆಗಟ್ಟುವ ಹಿತದೃಷ್ಟಿಯಿಂದ, ಅಗತ್ಯವಿದ್ದಲ್ಲಿ ಮೆಟ್ರೋ ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ನಿಯಂತ್ರಿಸುವ ಅಥವಾ ತಾತ್ಕಾಲಿಕವಾಗಿ ಮುಚ್ಚುವ ಹಕ್ಕನ್ನು ಬಿಎಂಆರ್‌ಸಿಎಲ್ ಹೊಂದಿದೆ.
ಈ ನಿಲ್ದಾಣಗಳಲ್ಲಿ ಪಾರ್ಕಿಂಗ್ ಮಾಡಲು ಅವಕಾಶ ಇದೆ. ಒಟ್ಟು 44 ಮೆಟ್ರೋ ನಿಲ್ದಾಣಗಳು ಇರುವ ಪಟ್ಟಿಯನ್ನು ಈ ಕೆಳಗಿನ ಬಿಎಂಆರ್‍ಸಿಎಲ್ ಎಕ್ಸ್ ಖಾತೆ ಲಿಂಕ್ ನೀಡಲಾಗಿದೆ. ಕ್ಲಿಕ್ ಮಾಡಬಹುದು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications