RCB vs GT: ಆರ್‌ಸಿಬಿ ಮ್ಯಾಚ್ ನೋಡೋಕೆ ಹೋಗುವ ಮುನ್ನ ಈ ವಿಷಯ ಗಮನದಲ್ಲಿರಲಿ!
ಬೆಂಗಳೂರು, ಮೇ. 04: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ. 04) ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಗುಜರಾತ್ ಟೈಟಾನ್ಸ್ (ಜಿಟಿ) ನಡುವಿನ ಹಣಾಹಣಿಗೆ ಮೈದಾನ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಸಂಚಾರಿ ಪೊಲೀಸ್ ಇಲಾಖೆ ಹೊಸ ಸಲಹೆಗಳನ್ನು ಬಿಡುಗಡೆ ಮಾಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮ್ಯಾಚ್ ನಡೆಯುವ ಕಾರಣ ಸ್ಟೇಡಿಯಂ ಸುತ್ತ ಮುತ್ತ ಪಾರ್ಕಿಂಗ್ ನಿರ್ಬಂಧಗಳು ಮತ್ತು ಪಾರ್ಕಿಂಗ್ ಸ್ಥಾನಗಳ ಬಗ್ಗೆ ಮಾಹಿತಿ ನೀಡುತ್ತದೆ. ಆರ್‌ಸಿಬಿ ಪಂದ್ಯ ನೋಡಲು ಸಾವಿರಾರು ಜನರು ಈ ಕಡೆ ಬರುವ ಕಾರಣ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಇಂದಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಪಂದ್ಯದ ಕಾರಣ ಮಧ್ಯಾಹ್ನ 3 ಗಂಟೆಗೆಯಿಂದ ರಾತ್ರಿ 11 ರವರೆಗೆ ಸಂಚಾರ ನಿರ್ಬಂಧವಿರಲಿದೆ. ಎಂಜಿ ರಸ್ತೆಯ ಕಬ್ಬನ್ ಪಾರ್ಕ್ ಬಳಿ ಇರುವ ಚಿನ್ನಸ್ವಾಮಿ ಕ್ರೀಡಾಂಗಣವು ನಗರದ ಹೃದಯ ಭಾಗದಲ್ಲಿದ್ದು, ವಾಹನ ಸವಾರರು ಈ ರಸ್ತೆಗಳಿಗೆ ಇಳಿಯುವ ಮುನ್ನ ಎಚ್ಚರಿಕೆ ವಹಿಸುವುದು ಅಗತ್ಯ.
"ದಿನಾಂಕ 04.05.2024 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐ.ಪಿ.ಎಲ್ 2024 ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಧ್ಯಾಹ್ನ 03:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ರಸ್ತೆ ಬಳಕೆದಾರರ ಅನುಕೂಲಕ್ಕಾಗಿ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ" ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೊಲೀಸರು ತಿಳಿಸಿದ್ದಾರೆ.
ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ
ಕೆಳಗಿನ ಸ್ಥಳಗಳು ಮತ್ತು ರಸ್ತೆಗಳಲ್ಲಿ ಯಾವುದೇ ವಾಹನಗಳ ಪಾರ್ಕಿಂಗ್ ಅನ್ನು ಅನುಮತಿಸಲಾಗುವುದಿಲ್ಲ ಎಂದು ಸಂಚಾರಿ ಪೊಲೀಸರು ಹೇಳಿದ್ದಾರೆ.
"Traffic Advisory"
— DCP TRAFFIC WEST (@DCPTrWestBCP) May 3, 2024
"ಸಂಚಾರ ಸಲಹೆ"@BlrCityPolice @blrcitytraffic @Jointcptraffic pic.twitter.com/IHglkPJ7EM
* ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ.
* ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
* ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
*ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆ.
ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು
* ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
* ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
* ಬಿ.ಎಂ.ಟಿ.ಸಿ ಬಸ್ ನಿಲ್ದಾಣ (ಶಿವಾಜಿ ನಗರ 1 ನೇ ಮಹಡಿ) ಮೊದಲನೆ ಮಹಡಿ & ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್
*ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ)












Click it and Unblock the Notifications