RCB vs GT: ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ನಡುವೆ ನಡೆಯುತ್ತಾ ಆರ್‌ಸಿಬಿ ಮ್ಯಾಚ್?

ಬೆಂಗಳೂರು, ಮೇ. 04: ಇಂದು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ನಡುವೆ ಪಂದ್ಯ ನಡೆಯಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 52 ನೇ ಪಂದ್ಯ ಇದಾಗಿದೆ. ಆದರೆ, ಮ್ಯಾಚ್‌ಗೆ ಮಳೆ ಕಾಟ ಶುರುವಾದಂತಿದೆ.

ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಪಂದ್ಯಗಳಿಂದ ಆರು ಪಾಯಿಂಟ್‌ಗಳೊಂದಿಗೆ ಕೆಳಗಿದ್ದರೆ, ಗುಜರಾತ್ ಟೈಟಾನ್ಸ್ 10 ಪಂದ್ಯಗಳಿಂದ ಎಂಟು ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯ ಎರಡು ತಂಡಗಳಿಗೂ ಪ್ರಮುಖವಾಗಿದೆ. ಬೆಂಗಳೂರಿನಲ್ಲಿ ಮ್ಯಾಚ್ ನಡೆಯುವ ಕಾರಣ ಆರ್‌ಸಿಬಿ ಅಭಿಮಾನಿಗಳು ಕೂಡ ಕಾತುರದಿಂದ ಎದುರು ನೋಡುತ್ತಿದ್ದಾರೆ.

RCB vs GT IPL Match Today Pitch Report and Bengaluru Weather Update

ಬೆಂಗಳೂರಿನಲ್ಲಿ ಮಳೆ; ನಡೆಯುತ್ತಾ ಆರ್‌ಸಿಬಿ ಮ್ಯಾಚ್?

ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ಆರಂಭವಾಗಿದೆ. ಶುಕ್ರವಾರದ ಮಳೆ ಸಿಲಿಕಾನ್ ಸಿಟಿಯ ಬಿಸಿಲನ್ನು ಕಡಿಮೆ ಮಾಡಿದೆ. ಇದರ ಜೊತೆಗೆ ಇನ್ನು ಎರಡು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಆರ್‌ಸಿಬಿ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ ಸಾಕಷ್ಟು ಮಳೆ ಸುರಿದರೂ ಸಂಜೆ ವೇಳೆಗೆ ಮಳೆ ಕಡಿಮೆಯಾಗಿದೆ. ಶನಿವಾರದ ಮುನ್ಸೂಚನೆಯು ಕೂಡ ಸಾಧಾರಣ ಮಳೆಯಾಗಲಿದೆ ಎಂದಿದೆ. ಮಧ್ಯಾಹ್ನದ ವರೆಗೆ ಬಿಸಿಲಿದ್ದು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರಲಿದೆ. ಹೀಗಾಗಿ ಮಳೆ ಬರಲಿದೆ.

RCB vs GT IPL Match Today Pitch Report and Bengaluru Weather Update

ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯ ರಾತ್ರಿ 7.30 ರಿಂದ ಶುರುವಾಗಲಿದೆ. ಮಳೆ ಅಲ್ಲಿಯವರೆಗೂ ಮುಂದುವರಿದರೂ ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುವುದು ಖಚಿತವಾಗಿದೆ. ಏಕೆಂದರೆ ಚಿನ್ನಸ್ವಾಮಿ ಕ್ರಿಡಾಂಗಣ ಸಬ್ ಏರ್ ಸಿಸ್ಟಂ ಹೊಂದಿದ್ದು, ಶೀಘ್ರವಾಗಿ ಮಳೆ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮತ್ತೆ ಪಂದ್ಯ ಆರಂಭಿಸಬಹುದು. ಇನ್ನು, ಪಿಚ್ ನಿಜವಾದ ಬೌನ್ಸ್ ನೀಡುವುದರಿಂದ ಬ್ಯಾಟಿಂಗ್ ಸ್ನೇಹಿಯಾಗಿರಬಹುದು ಎಂದು ನಿರೀಕ್ಷಿಸಲಾಗಿದೆ.

RCB ಮತ್ತು GT ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ಕ್ಯಾಪ್ಟನ್), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿಹಿ , ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್

ಗುಜರಾತ್ ಟೈಟಾನ್ಸ್ : ಶುಭಮನ್ ಗಿಲ್ (ಕ್ಯಾಪ್ಟನ್), ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಬಿ. ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ರಶೀದ್ ಖಾನ್, ಜೋಶುವಾ ಲಿಟಲ್, ಮೋಹಿತ್ ಶರ್ಮಾ, ಅಜ್ಮತುಲ್ಲಾ ಒಮರ್ಜಾಯ್, ಉಮೇಶ್ ಯಾದವ್, ಶಾರುಖ್ ಖಾನ್, ಸುಶಾಂತ್ ಮಿಶ್ರಾ, ಕಾರ್ತಿಕ್ ತ್ಯಾಗಿ, ಮಾನವ್ ಸುತಾರ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್, ಬಿಆರ್ ಶರತ್.

ಇನ್ನು, ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಸ್ಟ್ರೀಮ್ ಆಗಲಿದೆ. ಮೇ 4ರ ಶನಿವಾರದಂದು 7:30 ರಿಂದ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+