ಆರ್‌ಸಿಬಿ ಮ್ಯಾಚ್ ಫಿಕ್ಸಿಂಗ್ ಮೂಲಕ ಐಪಿಎಲ್ ಟ್ರೋಫಿ ಗೆದ್ದಿದೆ: ಗಂಭೀರ ಆರೋಪ
RCB won the IPL 2025 trophy: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದು 17 ವರ್ಷಗಳ ಬಳಿಕ ಮೊದಲ ಟ್ರೋಫಿ ತನ್ನದಾಗಿಸಿಕೊಂಡಿದೆ. ಕಪ್ ಗೆದ್ದಾಗಿನಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಒಂದಲ್ಲ ಒಂದು ಅಡೆತಡೆಗಳು ಎದುರಾಗುತ್ತಲಿವೆ. ಇದೀಗ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಯಲ್ ಟೀಂ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.
ಅಹಮದಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು 17 ವರ್ಷಗಳ ಬಳಿಕ ಮೊದಲ ಬಾರಿ ಟ್ರೋಫಿಗೆ ಮುತ್ತಿಟ್ಟಿತು. ಅಂದು ಬರೀ ಕರ್ನಾಟಕ ಅಷ್ಟೇ ಅಲ್ಲದೆ, ದೇಶ, ವಿದೇಶಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಅದ್ಧೂರಿಯಾಗಿ ಸಂಭ್ರಮಾಚರಣೆ ಮಾಡಿದರು. ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಯಯೋತ್ಸವ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದ್ದು, ಈ ವೇಳೆ ಎಂ.ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡರು.

ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ಹಲವು ಬೆಳೆವಣಿಗೆಗಳು ಆದ್ವು. ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗಳಿಸಲಾಯಿತು. ಅಷ್ಟೇ ಅಲ್ಲದೆ, ಆರ್‌ಸಿಬಿ ವಿರುದ್ಧ ಎಫ್‌ಐಆರ್ ಹಾಗೂ ವಿರಾಟ್ ಕೋಹ್ಲಿ ಮೇಲೂ ದೂರು ದಾಖಲಾಯಿತು. ಜೊತೆಗೆ ಆರ್‌ಸಿಬಿ ಬ್ಯಾನ್ ಮಾಡಬೇಕು ಹಾಗೂ ಮಾರಾಟ ಮಾಡಲಾಗುತ್ತದೆ ಎನ್ನುವ ವದ್ದಂತಿಗಳು ಹಬ್ಬಿದ್ದು, ಇದಕ್ಕೆ ಸ್ಪಷ್ಟನೆ ಕೊಡುವ ಕೆಲಸವನ್ನು ಪ್ರಾಂಚೈಸಿ ಮಾಡಿತ್ತು.
ನಾವು ಯಾವುದೇ ಕಾರಣಕ್ಕೂ ಮಾರಾಟ ಮಾಡುವುದಿಲ್ಲ ಎಂದು ತಿಳಿಸಿತ್ತು. ಈ ಬೆಳವಣಿಗೆಗಳ ನಡುವೆಯೇ ಇದೀಗ ರಾಯಲ್ ಚಾಲೆಂಜರ್ಸ್ ವಿರುದ್ಧ ಫಿಕ್ಸಿಂಗ್ ಆರೋಪ ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಆರ್‌ಸಿಬಿ ವಿರುದ್ಧ ಫಿಕ್ಸಿಂಗ್ ಆರೋಪವನ್ನು ಮಾಡಿದವರಾಗಿದ್ದಾರೆ.
ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಸೇರಿದಂತೆ ಐಎಎಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದಾರೆ. ಇದೇ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧವೂ ಫಿಕ್ಸಿಂಗ್ ಆರೋಪ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೈನಲ್ ಪಂದ್ಯಕ್ಕೂ ಮುನ್ನವೇ ವಿಧಾನಸೌಧದ ಬಳಿ ಸಂಭ್ರಮಾಚರಣೆ, ಮೆರವಣಿಗೆ ಸಂಬಂಧ ಕಬ್ಬನ್ ಪಾರ್ಕ್ ಎಸಿಪಿಗೆ ಮಾಹಿತಿ ನೀಡಿ, ವಿಧಾನಸೌಧ ಬಳಿ ತಯಾರಿ ಮಾಡಿದ್ದೀರ. ನಮ್ಮ ತಂಡ ಗೆಲ್ಲುತ್ತದೆ ಎನ್ನುವ ಬಗ್ಗೆ ನಿಮಗೆ ಗೊತ್ತಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ಮಾಡಿದ್ದು ಹೇಗೆ? ಹಾಗಾದ್ರೆ ಮೊದಲೇ ಆರ್‌ಸಿಬಿ ಗೆಲ್ಲುವ ಬಗ್ಗೆ ನಿಮಗೆ ಮಾಹಿತಿ ಇತ್ತಾ? ಅಥವಾ ಮ್ಯಾಚ್ ಫಿಕ್ಸಿಂಗ್ ಆಗಿತ್ತಾ? ಈ ಬಗ್ಗೆ ಅನುಮಾನವಿದೆ. ಈ ಬಗ್ಗೆಯೂ ಬಿಸಿಸಿಐಗೆ ಮುಂದಿನ ದಿನಗಳಲ್ಲಿ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ.
ಐಪಿಎಲ್‌ನಲ್ಲಿ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ ಅಂತಲೇ ಗುರುತಿಸಿಕೊಂಡಿರುವ ಆರ್‌ಸಿಬಿ ಈ ಬಾರಿ ಟ್ರೋಫಿ ಗೆದ್ದು ದಾಖಲೆ ಬರೆದಿತ್ತು. ಆದ್ದರಿಂದ ಜೂನ್ 4ರಂದು ವಿಜಯೋತ್ವವನ್ನು ಬೆಂಗಳೂರಿನಲ್ಲಿ ಇಟ್ಟುಕೊಳ್ಳಲಾಗಿದ್ದು, ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತಳಿತ ಸಂಭವಿಸಿ 11 ಜನ ಪ್ರಾಣ ಕಳೆದುಕೊಂಡಿದ್ದು, ಇದು ತಂಡಕ್ಕೆ ಕಪ್ಪು ಚುಕ್ಕೆಯಾಗಿಬಿಟ್ಟಿತ್ತು. ಈ ನಡುವೆಯೇ ಟಿಜೆ ಅಬ್ರಹಾಂ ಗಂಭೀರ ಆರೋಪ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.












Click it and Unblock the Notifications