ರಿಯಲ್ ಎಸ್ಟೇಟ್ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ
ಬೆಂಗಳೂರು, ಜು.19: ಯುವತಿಗೆ ಬಾಡಿಗೆ ಮನೆ ಕೊಡಿಸುವುದಾಗಿ ನಂಬಿಸಿ ಲಾಡ್ಜ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದ ಯುವತಿ ಹಲವು ದಿನಗಳಿಂದ ಬಾಡಿಗೆ ಮನೆಯ ಹುಡುಕಾಟದಲ್ಲಿದ್ದರು. ಸಹೋದ್ಯೋಗಿಯ ಮೂಲಕ ಉದ್ಯಮಿ ಪರಿಚಯವಾಗಿದ್ದ, ಜು.17ರಂದು ಕರೆ ಮಾಡಿ ಮನೆ ತೋರಿಸುವುದಾಗಿ ತಿಳಿಸಿದ್ದ, ಯುವತಿಗೆ ಬಾಡಿಗೆ ಮನೆ ಕೊಡಿಸುವುದಾಗಿ ನಂಬಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಲಾಡ್ಜ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ್ದ ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ
ಬಾಡಿಗೆ ವಿಚಾರ ಮಾತನಾಡೋಣ ಎಂದು ಹೇಳಿ ಸ್ಥಳೀಯ ಲಾಡ್ಜ್ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದ. ಎಚ್.ವಿ. ಹಳ್ಳಿ ಸರ್ಕಲ್ಬಳಿ ಕರೆದಿದ್ದಾನೆ. ನಂತರ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದ ಯುವತಿಯನ್ನು ಹಿಂಬಾಲಿಸಿ ಬಂದಿದ್ದ ಉದ್ಯಮಿ ಪೊಲೀಸರಿಗೆ ದೂರು ಕೊಟ್ಟರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದ.
ಇದಲ್ಲದೆ ನಮ್ಮಿಬ್ಬರ ನಡುವೆ ಲೈಂಗಿಕ ಸಂಪರ್ಕ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಮರ್ಯಾದೆ ತೆಗೆಯುತ್ತೇನೆ ಎಂದು ಹೆದರಿಸಿದ್ದ. ಈ ಕುರಿತು ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ಯುವತಿ ಪ್ರಕರಣ ದಾಖಲಿಸಿದ್ದು, ಸದ್ಯ ಆರೋಪಿ ಓಬಳಪ್ಪನನ್ನ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.