ಅಭಿವೃದ್ಧಿಯ ಜೊತೆಗೆ ಜನರ ಸಮಸ್ಯೆ ಆಲಿಸಿ ಪರಿಹರಿಸುವುದೇ ನಿಜವಾದ ಪ್ರಗತಿ: ಕೃಷ್ಣ ಬೈರೇಗೌಡ
ಬೆಂಗಳೂರು ಜನವರಿ 5: ರಾಜ್ಯದ ಅಭಿವೃದ್ಧಿಯ ಜೊತೆಗೆ ಪ್ರತಿಯೊಬ್ಬ ಸಾರ್ವಜನಿಕರ ವೈಯಕ್ತಿಕ ಸಮಸ್ಯೆಗಳನ್ನೂ ಸರ್ಕಾರ ಆಲಿಸಿ ಪರಿಹರಿಸುವುದೇ ನಿಜವಾದ ಪ್ರಗತಿ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು.
ಯಲಹಂಕದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, "ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಲುವಾಗಿಯೇ ಜನ ನಮ್ಮ ಆಯ್ಕೆ ಮಾಡಿ ಅಧಿಕಾರ ನೀಡಿದ್ದಾರೆ. ಹೀಗಾಗಿ ಎಲ್ಲಾ ಕ್ಷೇತ್ರದಲ್ಲೂ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಕಾರಗೊಳಿಸುವುದು ನಮ್ಮ ಕರ್ತವ್ಯ. ಆದರೆ, ಅಭಿವೃದ್ದಿಯೊಂದೇ ಸಾಲದು" ಎಂದು ತಿಳಿಸಿದರು.

ಜೊತೆಗೆ "ನಾಡಿನ ಪ್ರತಿಯೊಬ್ಬ ವ್ಯಕ್ತಿಗೂ ಸರ್ಕಾರ ಅವರ ಮನೆ ಬಾಗಿಲಿಗೆ ತಲುಪಬೇಕು. ಪ್ರತಿಯೊಬ್ಬರಿಗೂ ವ್ಯಯಕ್ತಿಕ ಸಮಸ್ಯೆಗಳಿದ್ದೂ ಸರ್ಕಾರ ಅದನ್ನೂ ಆಲಿಸಬೇಕು. ಜನರ ಸಮಸ್ಯೆಗೆ ಸ್ಪಂದಿಸುವ ಮೂಲಕ ಪರಿಹಾರವನ್ನೂ ನೀಡಬೇಕು. ಆಗ ಮಾತ್ರ ನಿಜವಾದ ಅಭಿವೃದ್ಧಿ-ಪ್ರಗತಿ ಸಾಧ್ಯ. ಇದೇ ಕಾರಣಕ್ಕೆ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜನರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು" ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದರು.
ಜನರ ಅಹವಾಲುಗಳನ್ನು ಸ್ವೀಕರಿಸಿದರೆ ಮಾತ್ರ ಸಾಲದು, ಅವರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಪರಿಹಾರವನ್ನೂ ನೀಡಬೇಕು. ಇಲ್ಲದಿದ್ದರೆ ಈ ಕಾರ್ಯಕ್ರಮಕ್ಕೆ ಅರ್ಥವೇ ಇರುವುದಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳೂ ಸಾಕಷ್ಟು ಶ್ರಮವಹಿಸಿ ಜನರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕಿದೆ ಎಂದು ಅವರು ಕಿವಿಮಾತು ಹೇಳಿದರು.

ಬೆಂಗಳೂರಿಗೆ ಹೊಸ ದಿಕ್ಕು-ಹೊಸ ಲುಕ್ಕು:
ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಅಭಿವೃದ್ಧಿಗೆ ಹೊಸ ದಿಕ್ಕು-ಹೊಸ ಲುಕ್ಕು ನೀಡಲು ಶ್ರಮಿಸುತ್ತಿದ್ದಾರೆ ಎಂದು ಈ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶಂಸಿಸಿದರು. ರಫ್ತು ಸೇರಿದಂತೆ ಹಲವು ವಿಭಾಗಗಳಲ್ಲಿ ಬೆಂಗಳೂರು ಇಡೀ ದೇಶಕ್ಕೆ ಆದಾಯದ ಮೂಲವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಾಕಷ್ಟು ಹೆಸರು ಮಾಡಿದೆ. ಆದರೆ, ಬೆಂಗಳೂರಿನ ಅಭಿವೃದ್ಧಿ ವೇಗಕ್ಕಿಂತ ಇಲ್ಲಿನ ಜನಸಂಖ್ಯೆ ವೇಗ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ.
ಎಲ್ಲಾ ರಾಜ್ಯದ ಜನರಿಗೂ ಬೆಂಗಳೂರು ಬದುಕು ಕಟ್ಟಿಕೊಡುತ್ತಿದೆ. ಹೀಗಾಗಿ ಜನರ ವಲಸೆಯೂ ಅಧಿಕವಾಗಿದ್ದು, ಅವಶ್ಯಕತೆಗೆ ತಕ್ಕಂತೆ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದು, ರಾಜ್ಯ ರಾಜಧಾನಿಯ ಅಭಿವೃದ್ಧಿಗೆ ಹೊಸ ದಿಕ್ಕು ತೋರಲು ಯೋಜನೆ ರೂಪಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮಾತನಾಡಿ, "ಕಾಂಗ್ರೆಸ್ ಸರ್ಕಾರ ನೀಡಿದ ಮಾತಿನಂತೆ ಐದೂ ಗ್ಯಾರಂಟಿ ಯೋಜನೆಗಳನ್ನೂ ಯಶಸ್ವಿಯಾಗಿ ಜಾರಿಗೆ ತಂದಿದೆ. ಈ ಮೂಲಕ ನಮ್ಮದು ಜನಪರ ಸರ್ಕಾರ ಎಂಬುದನ್ನು ಸಾಭೀತುಪಡಿಸಲಾಗಿದೆ. ಅಲ್ಲದೆ, ಜನಸ್ಪಂದನ ಕಾರ್ಯಕ್ರಮದ ಮೂಲಕ ಸರ್ಕಾರವನ್ನು ಜನಸಾಮಾನ್ಯರ ಮನೆ ಬಾಗಿಲಿಗೇ ತರಲಾಗಿದೆ. ಎಲ್ಲರ ಸಮಸ್ಯೆಯನ್ನೂ ಆಲಿಸಿ ಪರಿಹಾರವನ್ನೂ ನೀಡಲಾಗುವುದು" ಎಂದರು.
ಕಾರ್ಯಕ್ರಮದಲ್ಲಿ 4,000 ಕ್ಕೂ ಅಧಿಕ ಜನ ಭಾಗವಹಿಸಿದ್ದರು. ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಬಿಎಂಟಿಸಿ, ಕಂದಾಯ ಇಲಾಖೆ, ಜಲಮಂಡಲಿ ಹಾಗೂ ಮೂಲಭೂತ ಸೌಕರ್ಯ ಸೇರಿದಂತೆ ಬೆಂಗಳೂರು ನಗರ ವ್ಯಾಪ್ತಿಗೆ ಸಂಬಂಧಿಸಿದ ಹಲವು ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಲಾಯಿತು.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications