24 ಗಂಟೆ ವರದಿ: ಕೊವಿಡ್-19 ಸೋಂಕಿನಿಂದ ಬೆಂಗಳೂರಿನಲ್ಲಿ ಒಬ್ಬರೂ ಸತ್ತಿಲ್ಲ!

ಬೆಂಗಳೂರು, ಆಗಸ್ಟ್ 24: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಆರಂಭವಾದಾಗಿನಿಂದ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಶೂನ್ಯಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯ ರಾಜಧಾನಿಯಲ್ಲಿ ಒಂದೇ ಒಂದು ಕೊವಿಡ್-19 ಸಾವಿನ ಪ್ರಕರಣ ವರದಿಯಾಗಿಲ್ಲ.

ಮಾರ್ಚ್ ತಿಂಗಳಿನಿಂದ ಇಲ್ಲಿವರೆಗೂ ಕೊವಿಡ್-19 ಎರಡನೇ ಅಲೆಯಿಂದ ತತ್ತರಿಸಿದ ಹೋದ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸಿದೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಕೇವಲ 10 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೂ 15959 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಪ್ರಮಾಣ ಶೇ.1.29ರಷ್ಟಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾವದರ ಸಂಖ್ಯೆ 37155ಕ್ಕೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.26ರಷ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.08ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 0.86ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊವಿಡ್-19 ಸೋಂಕಿತರ ಸಾವಿನ ಸಂಖ್ಯೆ ಇಳಿಮುಖ

ಕೊವಿಡ್-19 ಸೋಂಕಿತರ ಸಾವಿನ ಸಂಖ್ಯೆ ಇಳಿಮುಖ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಾವಿನ ಪ್ರಕರಣಗಳ ಸಂಖ್ಯೆಯು ಕಳೆದ ಜುಲೈ 10ರಿಂದ ಕ್ರಮೇಣ ಇಳಿಮುಖವಾಗುತ್ತಾ ಬರುತ್ತಿದೆ. ಜೂನ್ 27ರಂದು ರಾಜ್ಯದಲ್ಲಿ ಸಾವಿನ ಪ್ರಕರಣಗಳ ಸಂಖ್ಯೆಯು ಇಳಿಕೆಯಾಗಿದ್ದು, 100ಕ್ಕಿಂತ ಕಡಿಮೆ ಕೇಸ್ ವರದಿಯಾಗಿದ್ದವು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೀಡಿರುವ ಅಂಕಿ-ಅಂಶಗಳ ಪ್ರಕಾರ, ಕಳೆದ ಎಂಟು ವಾರಗಳಲ್ಲಿ ಸಾವಿನ ಪ್ರಮಾಣ ಗರಿಷ್ಠ 2.07 ರಿಂದ 0.84ಕ್ಕೆ ಇಳಿಕೆಯಾಗಿದೆ. ರಾಜಧಾನಿಯಲ್ಲಿ ಮೃತಪಟ್ಟವರಲ್ಲಿ 70 ವರ್ಷ ಮೇಲ್ಪಟ್ಟವರ ಸಂಖ್ಯೆಯೇ ಹೆಚ್ಚಾಗಿದೆ. 70 ವರ್ಷ ಮೇಲ್ಪಟ್ಟ 3,465 ವೃದ್ಧರು ಹಾಗೂ 1,837 ವೃದ್ಧೆಯರು ಕೊವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 270 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1235306ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಂದೇ ಒಂದು ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಬೆಂಗಳೂರಿನಲ್ಲಿ ಈವರೆಗೂ 15959 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7669 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಹೇಗಿವೆ?

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಹೇಗಿವೆ?

ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿಗೆ 10 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 37155ಕ್ಕೆ ಏರಿಕೆಯಾಗಿದೆ. ಇನ್ನೊಂದು ದಿಕ್ಕಿನಲ್ಲಿ ಒಂದೇ ದಿನ 1151 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1442 ಸೋಂಕಿತರು ಗುಣಮುಖರಾಗಿದ್ದಾರೆ. ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2939767ಕ್ಕೆ ಏರಿಕೆಯಾಗಿದೆ. ಒಟ್ಟು 2882331 ಸೋಂಕಿತರು ಗುಣಮುಖರಾಗಿದ್ದು. 20255 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 14,382 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 91,982 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 106,364 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 78,24,343 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,42,47,045 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,20,71,388 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

Recommended Video

    ಇವತ್ತಿಗೂ ನನಗೆ ನೆಹರೂ,ಇಂದಿರಾ ಗಾಂಧಿ ಅಂದ್ರೆ ಇಷ್ಟ | Prathap Simha Part 2 | Oneindia Kannada
    ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

    ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

    ರಾಜ್ಯದಲ್ಲಿ ಒಟ್ಟು 1151 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 10 ಬೆಂಗಳೂರು 270, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 42, ಚಿತ್ರದುರ್ಗ 18, ದಕ್ಷಿಣ ಕನ್ನಡ 236, ದಾವಣಗೆರೆ 1, ಧಾರವಾಡ 0, ಗದಗ 3, ಹಾಸನ 115, ಹಾವೇರಿ 1, ಕಲಬುರಗಿ 17, ಕೊಡಗು 54, ಕೋಲಾರ 7, ಕೊಪ್ಪಳ 5, ಮಂಡ್ಯ 32, ಮೈಸೂರು 76, ರಾಯಚೂರು 0, ರಾಮನಗರ 1, ಶಿವಮೊಗ್ಗ 8, ತುಮಕೂರು 44, ಉಡುಪಿ 137, ಉತ್ತರ ಕನ್ನಡ 42, ವಿಜಯಪುರ 2, ಯಾದಗಿರಿ 5 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+