ಯಲಹಂಕ : ಏರ್ ಶೋ ವೇಳೆ ರೆಡ್ ಬುಲ್ ವಿಮಾನ ಡಿಕ್ಕಿ
ಬೆಂಗಳೂರು, ಫೆ. 19 : ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋನಲ್ಲಿ ಅಪಘಾತ ಸಂಭವಿಸಿದೆ. ವೈಮಾನಿಕ ಪ್ರದರ್ಶನದ ವೇಳೆ ಎರಡು ರೆಡ್ ಬುಲ್ ವಿಮಾನಗಳ ನಡುವೆ ಪರಸ್ಪರ ಡಿಕ್ಕಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಗುರುವಾರ ಮಧ್ಯಾಹ್ನದ ವೈಮಾನಿಕ ಪ್ರದರ್ಶನದ ವೇಳೆ ಈ ಅಪಘಾತ ಸಂಭವಿಸಿದೆ. ರೆಡ್ ಬುಲ್ ವಿಮಾನಗಳ ರೆಕ್ಕೆಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಪೈಲೆಟ್ಗಳು ತಕ್ಷಣ ವಿಮಾನಗಳನ್ನು ತುರ್ತಾಗಿ ಕೆಳಗಿಸಿದ್ದಾರೆ. ಇದರಿಂದ ಆಗಬಹುದಾಗಿದ್ದ ಅನಾಹುತ ತಪ್ಪಿದೆ. [ಏರ್ ಶೋಗೆ ವಿಶೇಷ ಬಿಎಂಟಿಸಿ ಬಸ್ ವ್ಯವಸ್ಥೆ]

ಘಟನೆಯಿಂದಾಗಿ ಕೆಲವು ಹೊತ್ತು ವೈಮಾನಿಕ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿತ್ತು. ಅಪಘಾತದಿಂದಾಗಿ ಒಂದು ರೆಡ್ ಬುಲ್ ವಿಮಾನದ ಒಂದು ರೆಕ್ಕೆಗೆ ಹಾನಿ ಉಂಟಾಗಿದೆ. ಅಪಘಾತದಿಂದಾಗಿ ವೈಮಾನಿಕ ಪ್ರದರ್ಶನವನ್ನು ಕೆಲವು ಹೊತ್ತು ಸ್ಥಗಿತಗೊಳಿಸಿ ನಂತರ ಆರಂಭಿಸಲಾಯಿತು. [ಏರ್ ಶೋ ಚಿತ್ರಗಳನ್ನು ನೋಡಿ]

ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ ತಕ್ಷಣ ಅಗ್ನಿ ಶಾಮಕದಳದ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಎರಡು ವಿಮಾನಗಳು ಡಿಕ್ಕಿಯಾದರೂ ಪೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಯಲಹಂಕದಲ್ಲಿ ನಡೆಯುತ್ತಿರುವ ಏರ್ ಶೋ ಎರಡನೇ ದಿನವಾದ ಇಂದು ವೈಮಾನಿಕ ಪ್ರದರ್ಶನ ನಡೆಯುತ್ತಿತ್ತು. ಸಾಹಸ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ವಾಯುನೆಲೆಯಲ್ಲಿ ಸಾವಿರಾರು ಜನರು ಸೇರಿದ್ದರು. ಈ ಸಮಯದಲ್ಲಿಯೇ ಈ ಅಪಘಾತ ನಡೆಸಿದೆ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications