• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜನಾರ್ದನ ರೆಡ್ಡಿ ಜಾಮೀನಿಗಾಗಿ ಇಂದು ಅರ್ಜಿ ಸಲ್ಲಿಕೆ

|

ಬೆಂಗಳೂರು, ನವೆಂಬರ್ 13: ಆಂಬಿಡೆಂಟ್ ಕಂಪನಿ ಚಿಟ್ ಫಂಡ್ ಹಗರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಪರಪ್ಪನ ಅಗ್ರಹಾಕರದ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಜಾಮೀನು ಕೋರಿ ಮಂಗಳವಾರ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಿದ್ದಾರೆ.

ಭಾನುವಾರ ಬಂಧನಕ್ಕೆ ಒಳಗಾಗಿದ್ದ ರೆಡ್ಡಿ ಸೋಮವಾರವೇ ಜಾಮೀನು ಅರ್ಜಿ ಸಲ್ಲಿಸುವ ಸಿದ್ಧತೆ ನಡೆಸಿದ್ದರೂ ಕೇಂದ್ರ ಸಚಿವ ಅನಂತ ಕುಮಾರ್ ನಿಧನದಿಂದಾಗಿ ನ್ಯಾಯಾಲಯಗಳಿಗೆ ರಜೆ ಘೋಷಿಸಲಾಗಿತ್ತು.

ಜನಾರ್ದನ ರೆಡ್ಡಿಗೆ ಮತ್ತೆ ಜೈಲುವಾಸ ಶುರು, ಖೈದಿ ನಂ 10902

ಕಾರಣ ಸೋಮವಾರವೂ ಜೈಲಿನಲ್ಲೇ ಕಳೆದ ರೆಡ್ಡಿ ಮಂಗಳವಾರ ಬೆಳಗ್ಗೆ ಒಂದನೇ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಮಂಗಳವಾರವೇ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಅಧಿಕಾರಿಗಳು ಕೂಡ ತಯಾರಿ ನಡೆಸಿದ್ದಾರೆ.

ಜನಾರ್ದನ ರೆಡ್ಡಿಗೆ ಆಂಬಿಡೆಂಟ್ 20 ಕೋಟಿ ಕೊಟ್ಟಿದ್ದೇಕೆ? ಡೀಟೇಲ್ಸ್ ಇಲ್ಲಿದೆ

ಆಂಬಿಡೆಂಟ್ ಹಗರಣದಲ್ಲಿ ಕೈ ಬದಲಾವಣೆ ಆಗಿರುವ ಅರ್ಧ ಕ್ವಿಂಟಾಲ್ ಚಿನ್ನದ ಗಟ್ಟಿ ರೆಡ್ಡಿ ಅವರ ಕೈಗೆ ಹೋಗಿದ್ದು ಇದರಿದ ಅದು ಬೇರೆ ಕಡೆ ತಲುಪಿರಬಹುದು ಅಥವಾ ಚಿನ್ನ ಕರಗಿಸಿ ಬೇರೆ ಆಸ್ತಿಯಾಗಿ ಮಾರ್ಪಾಟು ಮಾಡಿರಬಹುದು ಎನ್ನುವ ಶಂಕೆಯನ್ನು ಸಿಸಿಬಿ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ನವೆಂಬರ್ 24ರವರೆಗೆ ಜನಾರ್ದನ ರೆಡ್ಡಿ ನ್ಯಾಯಾಂಗ ಬಂಧನ

ನವೆಂಬರ್ 24ರವರೆಗೆ ಜನಾರ್ದನ ರೆಡ್ಡಿ ನ್ಯಾಯಾಂಗ ಬಂಧನ

ಆಂಬಿಡೆಂಟ್ ಕಂಪನಿ 950 ಕೋಟಿ ಚಿಟ್ ಫಂಡ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ನವೆಂಬರ್ 24ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುತ್ತಿದೆ. ಇಂದು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದು ಸಿಸಿಬಿ ಪೊಲೀಸರು ಆಕ್ಷೇಪಣೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.

ನಾಲ್ಕು ದಿನಗಳ ಬಳಿಕ ರೆಡ್ಡಿ ನೇರವಾಗಿ ಸಿಸಿಬಿ ಕಚೇರಿಗೆ ಹಾಜರ್

ನಾಲ್ಕು ದಿನಗಳ ಬಳಿಕ ರೆಡ್ಡಿ ನೇರವಾಗಿ ಸಿಸಿಬಿ ಕಚೇರಿಗೆ ಹಾಜರ್

ಸಿಸಿಬಿ ಪೊಲೀಸರು ಆಂಬಿಡೆಂಟ್ ಕಂಪನಿ ಹಾಗೂ ಇನ್ನಿತರೆ ಹಗರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿಯನ್ನು ಹೈದರಾಬಾದ್ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಹುಡುಕಾಟ ನಡೆಸುತ್ತಿದ್ದರು ಆದರೆ ನಾಲ್ಕು ದಿನಗಳ ಬಳಿಕ ನಾನು ಎಲ್ಲಿಯೂ ಹೋಗಿಲ್ಲ ಬೆಂಗಳೂರಲ್ಲೇ ಇದ್ದೇನೆ ಎಂದು ನೇರವಾಗಿ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.

ಜನಾರ್ದನ ರೆಡ್ಡಿಗೆ ಪ್ರತಿ ದೀಪಾವಳಿ ಅಮಾವಾಸ್ಯೆ ಕಂಟಕ ಪ್ರಾಯವೇ? ಹೀಗೊಂದು ಜಿಜ್ಞಾಸೆ

ಆಂಬಿಡೆಂಟ್ ಸಂಸ್ಥೆ ವಂಚನೆ

ಆಂಬಿಡೆಂಟ್ ಸಂಸ್ಥೆ ವಂಚನೆ

ಆಂಬಿಡೆಂಟ್ ಮಾರ್ಕೆಟಿಂಗ್ ಪ್ರೈವೈಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಡಿ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತದೆ. ಇದು ಕನಕಪುರದಲ್ಲಿದೆ. ಈ ಕಂಪನಿಯನ್ನು ಸೈಯದ್ ಅಹಮದ್ ಫರೀದ್ ನಡೆಸುತ್ತಿದ್ದ, ಈತ ಸಾರ್ವಜನಿಕರಿಗೆ 4 ತಿಂಗಳ ಅವಧಿಗೆ ಶೇ. 40 ನಿಂದ ಶೇ. 50 ಬಡ್ಡಿ ಹಣವನ್ನು ನೀಡುವುದಾಗಿ ನಂಬಿಸಿ 600 ಕೋಟಿಗೂ ಹೆಚ್ಚು ಹಣ ಹೂಡಿಕೆ ಮಾಡಿಸಿಕೊಂಡು ಸುಮಾರು 15 ಸಾವಿರಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿದ್ದಾರೆ. ಈತನಿಂದ ವಂಚನೆಗೊಳಗಾದವರ ಪೈಕಿ ಸರ್ಫರಾಜ್ ಆಲಂ ತಬರೇಜ್ ರವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಮೊ.ಸಂ. 137/2018 ಕಲಂ 420, ಐಪಿಸಿ. ಕಲಂ 4, 5, 6, ಪ್ರೈಜ್ ಚಿಟ್ & ಮನಿ ಸರ್ಕೂಲೇಷನ್ ಸ್ಕೀಮ್ ಬ್ಯಾನಿಂಗ್ ಆಕ್ಟ್ 1978. ಪ್ರಕಾರ 2018ರ ಮೇ ತಿಂಗಳಲ್ಲಿ ಪ್ರಕರಣಗಳು ದಾಖಲಾಗಿದೆ.

ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ ಭೇಟಿ

ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ ಭೇಟಿ

ಸೈಯದ್ ಅಹಮದ್ ಫರೀದ್, ಈತನ ವಿರುದ್ದ ಇ.ಡಿ. ಯಲ್ಲಿ ನಡೆಯುತ್ತಿರುವ ಪ್ರಕರಣದಲ್ಲಿ ಸಹಾಯಕ ಕೋರಿ ಜನಾರ್ದನರೆಡ್ಡಿ ಹಾಗೂ ಆತನ ಆಪ್ತ ಆಲಿಖಾನ್ ರವರೊಂದಿಗೆ ಸಭೆ ನಡೆಸಿ, ಇದಕ್ಕಾಗಿ 20 ಕೋಟಿ ರೂ ಹಣವನ್ನು ನೀಡುವುದಾಗಿ ಮಾತುಕತೆ ನಡೆಸಿದ್ದಾರೆ. ಇದೇ ಸಮಯದಲ್ಲಿ ಒಪ್ಪಂದ ಪ್ರಕಾರ 20 ಕೋಟಿ ರೂ ಹಣವನ್ನು ಚಿನ್ನದ ರೂಪದಲ್ಲಿ ನೀಡುವಂತೆ ಜನಾರ್ದನರೆಡ್ಡಿಯು ಷರತ್ತು ವಿಧಿಸಿದ್ದು, ಅದರಂತೆ ಸೈಯದ್ ಅಹಮ್ಮದ್ ಫರೀದನು ಜನಾರ್ಧನರೆಡ್ಡಿಯ ಆಪ್ತ ಅಲಿಖಾನ್‌ಗೆ ಪರಿಚಯ ವಿರುವ ಬಳ್ಳಾರಿಯ ರಾಜಮಹಲ್ ಪ್ಯಾನ್ಸಿ ಜುವೆಲ್ಲರ್ಸ್‍ನ ರಮೇಶ್ ಎಂಬುವವರ ಮೂಲಕ ಬೆಂಗಳೂರಿನ ಅಂಬಿಕಾ ಸೇಲ್ಸ್ ಕಾರ್ಪೋರೇಷನ್‍ನ ರಮೇಶ್ ಕೊಠಾರಿ ರವರ ಬಳಿ 18 ಕೋಟಿ ಮೊತ್ತದ 57 ಕೆ.ಜಿ ಚಿನ್ನವನ್ನು ಖರೀದಿ ಮಾಡಿ ಅದನ್ನು ಜನಾರ್ಧನರೆಡ್ಡಿ ರವರಿಗೆ ತಲುಪಿಸಿರುವ ಅಂಶ ಇದುವರೆಗಿನ ತನಿಖೆಯಿಂದ ತಿಳಿದುಬಂದಿದೆ.

ಗಾಲಿ ರೆಡ್ಡಿ ತಿಜೋರಿ ಬಗ್ಗೆ ಎಷ್ಟೆಲ್ಲ ಗುಮಾನಿ! ಬಾಯಿ ಕೊಟ್ಟು ಕೋಲಲ್ಲಿ ಬಡಿಸಿಕೊಂಡರೆ?

English summary
Former minister Janardhan Reddy will file bail application in multi crore Ambident company fraud case before first session court in Bengaluru on Tuesday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X