ಕೋವಿಡ್ ಮೊದಲು ಹಾಗೂ ನಂತರ ಉನ್ನತ ಶಿಕ್ಷಣ ಇಲಾಖೆ ಹೇಗಿದೆ?

ಬೆಂಗಳೂರು, ಸೆ. 16: ಈ ವರ್ಷ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಜೊತೆಗೆ ಕೊರೊನಾ ವೈರಸ್, ಲಾಕ್‌ಡೌನ್‌ನಿಂದಾಗಿ ಇಡೀ ಶಿಕ್ಷಣ ರಂಗ ಬದಲಾವಣೆ ಹಾದಿಯಲ್ಲಿದೆ. ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ ಗುರುಕುಲ ಮಾದರಿಯ ವಿದ್ಯಾಗಮ ಯೋಜನೆ ಜಾರಿಗೆ ತರಲಾಗಿದೆ. ಹಾಗೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ಆನ್‌ಲೈನ್‌ ಮೂಲಕ ಪಾಠ ಮಾಡಲಾಗುತ್ತಿದೆ. ಈ ಎಲ್ಲದರ ಕುರಿತು ಉನ್ನತ ಶಿಕ್ಷಣ ಇಲಾಖೆ ವಿಧಾನ ಪರಿಷತ್ ಸದಸ್ಯರಿಗೆ ಮಾಹಿತಿ ಕೊಟ್ಟಿದೆ.

ಇದೇ ಸೆಪ್ಟಂಬರ್ 21 ರಿಂದ ವಿಧಾನ ಮಂಡಲ ಅಧಿವೇಶ ಆರಂಭವಾಗಲಿದೆ. ಅದಕ್ಕೂ ಮೊದಲು ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಎಲ್ಲ ಪಕ್ಷಗಳ ಸದಸ್ಯರ ಜೊತೆಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ಮಹತ್ವದ ಮಾತುಕತೆ ನಡೆಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಳೆದ ಒಂದು ವರ್ಷದಿಂದ ಜಾರಿಗೆ ತಂದಿರುವ ವಿವಿಧ ಸುಧಾರಣೆಗಳ ಬಗ್ಗೆ ಪರಿಷತ್ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.

ಕೋವಿಡ್ ಬರುವ ಮುನ್ನ ಹಾಗೂ ಕೋವಿಡ್ ನಂತರ ಇಲಾಖೆಯಲ್ಲಿ ಅನುಷ್ಟಾನಗೊಂಡಿರುವ ಆನ್ ಲೈನ್ ಅಫಿಲಿಯೇಷನ್, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕ್ರಮ ಸೇರಿ ಎಲ್ಲ ಕಾರ್ಯಕ್ರಮಗಳ ಬಗ್ಗೆ ಪರಿಷತ್ ಸದಸ್ಯರಿಗೆ ವಿವರ ನೀಡಲಾಯ್ತು. ಕೋವಿಡ್ ಹಿನ್ನೆಲೆಯಲ್ಲಿ ಡಿಜಿಟಲ್ ಲರ್ನಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿರುವುದು ಸೇರಿದಂತೆ ಕೋವಿಡ್ ಸಂಕಷ್ಟದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಗಳನ್ನು ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಕೊಟ್ಟಿದ್ದಾರೆ.

ವರ್ಗಾವಣೆ ನೀತಿ

ವರ್ಗಾವಣೆ ನೀತಿ

ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಉಪನ್ಯಾಸಕರ ವರ್ಗಾವಣೆಯ ನಿಯಮಗಳನ್ನು ಬದಲಿಸಲಾಗುವುದು. ಈಗಿರುವ 2016ರ ವರ್ಗಾವಣೆ ಕಾಯ್ದೆಯನ್ನು ವಾಪಸ್ ಪಡೆದು ಸೂಕ್ತವಾದ ತಿದ್ದುಪಡಿಗಳೊಂದಿಗೆ ಹೊಸ ನಿಯಮಗಳನ್ನು ತರಲಾಗುವುದು. ಕಳೆದ ಅಧಿವೇಶನದಲ್ಲಿಯೇ ಇದರಲ್ಲಿ ಕೆಲ ತಿದ್ದುಪಡಿಗಳನ್ನು ಮಾಡುವ ಉದ್ದೇಶವಿತ್ತು. ಆದರೆ, ಆ ಕಾಯ್ದೆಯಲ್ಲಿ ಹಲವಾರು ದೋಷಗಳಿದ್ದ ಕಾರಣ ಇಡೀ ಕಾಯ್ದೆಯನ್ನೇ ವಾಪಸ್ ಪಡೆದು ಹೊಸ ನಿಯಮ ರೂಪಿಸಲು ನಿರ್ಧರಿಸಲಾಗಿದೆ. ಹೀಗೆ ಮಾಡುವುದರಿಂದ ವರ್ಗಾವಣೆ ನಿಯಮಗಳು ಸರಳವಾಗಿರುತ್ತವೆ, ಗೊಂದಲಗಳು ಇರುವುದಿಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ ಅವರು ಹೇಳಿದರು.

ಪರಿಷತ್ ಸದಸ್ಯರ ಸಲಹೆ

ಪರಿಷತ್ ಸದಸ್ಯರ ಸಲಹೆ

ಈಗಾಗಲೇ ಈ ಕಾಯ್ದೆಯ ಬಗ್ಗೆ ಪರಿಷತ್ ಸದಸ್ಯರಿಂದಲೂ ಸಲಹೆ ಪಡೆಯಲಾಗಿದೆ. ಅದೇ ರೀತಿ ಶಿಕ್ಷಕರ ಸಂಘದ ಪದಾಧಿಕಾರಿಗಳಿಂದಲೂ ಸಲಹೆಗಳನ್ನು ಪಡೆಯಲಾಗಿದೆ. ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿಯೇ ಮಂಡಿಸಲಾಗುವುದು. ಬಳಿಕ ಅದಕ್ಕೆ ಬರುವ ಆಕ್ಷೇಪ ಮತ್ತಿತರೆ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕಾಯ್ದೆಯಾಗಿ ಜಾರಿಗೆ ತರಲಾಗುವುದು ಎಂದ ಡಿಸಿಎಂ, ಕಾಯ್ದೆಯು ಅತ್ಯಂತ ಪರಿಣಾಮಕಾರಿ ಹಾಗೂ ಪರಿಪೂರ್ಣವಾಗಿರುತ್ತದೆ ಎಂಬ ನಂಬಿಕೆ ನನ್ನದು ಎಂದರು.

ಅನುಭವಿ ಅಧಿಕಾರಿಗಳ ನೇಮಕ

ಅನುಭವಿ ಅಧಿಕಾರಿಗಳ ನೇಮಕ

ವಿಶ್ವವಿದ್ಯಾಲಯಗಳಲ್ಲಿನ ಆಡಳಿತಕ್ಕೆ ಮತ್ತಷ್ಟು ಚುರುಕು ನೀಡುವ ಉದ್ದೇಶದಿಂದ ಎಲ್ಲ ವಿವಿಗಳ ರಿಜಿಸ್ಟ್ರಾರ್ ಹುದ್ದೆಗಳಿಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಲು ಸುಗ್ರಿವಾಜ್ಞೆ ತರಲಾಗಿದೆ. ಅದಕ್ಕೆ ಈ ಅಧಿವೇಶನದಲ್ಲಿಯೇ ಒಪ್ಪಿಗೆ ಪಡೆಯಲಾಗುವುದು.

ಇದಕ್ಕೆ ಪ್ರತಿಕ್ರಿಯಿಸಿದ ಪರಿಷತ್ ಸದಸ್ಯ ವೈ.ಎ. ನಾರಾಯಣ ಸ್ವಾಮಿ ಅವರು, ರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ತರುವುದು ಉತ್ತಮ ಯೋಚನೆ. ಆದರೆ, ಐಪಿಎಸ್ ಮತ್ತು ಐಎಫ್ಎಸ್ ಅಧಿಕಾರಿಗಳನ್ನು ದಯವಿಟ್ಟು ನೇಮಕ ಮಾಡಬೇಡಿ. ಹಾಗೆಯೇ, ವಿವಿಗಳಲ್ಲಿ ಅಧ್ಯಾಪಕರಿಂದ ಮೊದಲಗೊಂಡು ಎಲ್ಲ ಹಂತಗಳ ನೇಮಕಾತಿಗಾಗಿ ಒಂದು ಕೇಂದ್ರೀಕೃತ ಸೆಲ್ ಮಾಡಿ.

ಅದು ಬಿಟ್ಟು ವಿಶ್ವವಿದ್ಯಾಲಯಗಳ ಮಟ್ಟದಲ್ಲಿಯೇ ನೇಮಕಾತಿ ಮಾಡಿಕೊಳ್ಳಲು ಅವಕಾಶ ನೀಡಬೇಡಿ. ಹೀಗೆ ಮಾಡುವುದರಿಂದ ಎಲ್ಲ ವಿವಿಗಳಲ್ಲೂ ರಾಜಕಾರಣಿಗಳ ಹಸ್ತಕ್ಷೇಪ ಬಹುತೇಕ ನಿಲ್ಲುತ್ತದೆ. ಜತೆಗೆ ಬಡ್ತಿ ನೀಡುವಾಗ ಸೇವಾ ಹಿರಿತನಕ್ಕಿಂತ ಕಾರ್ಯನಿರ್ವಹಣೆಯ ದಕ್ಷತೆಯನ್ನು ಪರಿಗಣಿಸಿ ಕೊಡಬೇಕು. ವಿವಿಗಳಲ್ಲಿ ಮೂಲಭೂತ ಸೌಕರ್ಯ, ಕಟ್ಟಡಗಳ ನಿರ್ಮಾಣದ ಕೆಲಸವನ್ನು ವಿವಿಗಳ ಆಡಳಿತದಿಂದ ಹೊರಗೆ ತರಬೇಕು ಎಂದು ಅವರು ಸಲಹೆ ನೀಡಿದರು. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಡಿಸಿಎಂ ಭರವಸೆ ನೀಡಿದರು.

Recommended Video

    RCB ಈ ಸಲ ಕಪ್ ಗೆದ್ದೇ ಗೆಲ್ತಾರೆ , ಯಾಕೆ ಗೊತ್ತಾ | Oneindia Kannada
    ಅನಗತ್ಯ ಖರೀದಿಗೆ ಕಡಿವಾಣ

    ಅನಗತ್ಯ ಖರೀದಿಗೆ ಕಡಿವಾಣ

    ಇದೇ ವೇಳೆ, ವಿವಿಗಳಲ್ಲಿ ಅನಗತ್ಯ ಖರೀದಿಗಳಿಗೆ ಕಡಿವಾಣ ಹಾಕಬೇಕು. ಅಗತ್ಯವಿಲ್ಲದ ಸಾಫ್ಟ್ ವೇರ್ ಖರೀದಿ, ಕಂಪ್ಯೂಟರುಗಳ ಖರೀದಿ ಇತ್ಯಾದಿಗಳ ಮೇಲೆ ತೀವ್ರ ನಿಗಾ ನಿಡಬೇಕು. ಇದರಿಂದ ವಿವಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದ ಅಂಶವನ್ನು ಕೆಲ ಸದಸ್ಯರು ಡಾ. ಅಶ್ವಥ್ ನಾರಾಯಣ ಅವರ ಗಮನಕ್ಕೆ ತಂದರು.

    ಹಾಗೆಯೇ ಕುಲಪತಿಗಳ ನೇಮಕದಲ್ಲಿ ಗುಣಮಟ್ಟವನ್ನು ಗಣನೆಗೆ ತೆಗೆದುಕೊಳ್ಳಲೇಬೇಕು. ಅದಕ್ಕೆ ಉತ್ತಮವಾದ ಮಾನದಂಡವನ್ನು ರೂಪಿಸಿ. ಅದಕ್ಕೆ ಅಗತ್ಯಬಿದ್ದರೆ ತಜ್ಞರ ಸಮಿತಿಯನ್ನು ರಚಿಸಿ ಎಂದು ಪರಿಷತ್ ಸದಸ್ಯರು ಸಲಹೆ ಮಾಡಿದರು.

    ವಿಧಾನ ಪರಿಷತ್ ಸದಸ್ಯರಾದ ಬಸವರಾಜ್ ಹೊರಟ್ಟಿ, ಅರುಣ್ ಶಹಾಪುರ, ಅ. ದೇವೇಗೌಡ, ತಾರಾ ಅನುರಾಧ, ಹನುಮಂತ್ ನಿರಾಣಿ, ಮರಿತಿಬ್ಬೆ ಗೌಡ ಮುಂತಾದವರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+