ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತೆ ಅವಕಾಶ

|
Google Oneindia Kannada News

ಬೆಂಗಳೂರು, ಜೂ.9 : ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸ್ಥಗಿತಗೊಳಿಸಲಾಗಿದ್ದ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಪ್ರಕಿಯೆಯನ್ನು ಕರ್ನಾಟಕ ಚುನಾವಣಾ ಆಯೋಗ ಪುನಃ ಆರಂಭಿಸಿದೆ. ಜನವರಿ 1 ಕ್ಕೆ 18 ವರ್ಷ ಪೂರ್ಣಗೊಂಡ ಅರ್ಹ ನಾಗರಿಕರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಿರುವುದರಿಂದ ಚುನಾವಣಾ ಆಯೋಗ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳುವ ಕಾರ್ಯಕ್ಕೆ ಪುನಃ ಚಾಲನೆ ನೀಡಿದೆ. ಅರ್ಹರು ಹೆಸರು ಸೇರಿಸಲು, ಹೆಸರು, ವಿಳಾಸ, ಇತ್ಯಾದಿಗಳಲ್ಲಿನ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅಥವಾ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಅವಕಾಶ ಕಲ್ಪಿಸಲಾಗಿದೆ.

voter registration

ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ಕಚೇರಿಗಳಿಗೆ ಭೇಟಿ ನೀಡಿ ಸಂಬಂಧಪಟ್ಟ ಅರ್ಜಿಗಳನ್ನು ಪಡೆದು ಮತದಾರರ ಪಟ್ಟಿಯನ್ನು ನಾಗರೀಕರು ಪರಿಷ್ಕರಿಸಿಕೊಳ್ಳಬಹುದಾಗಿದೆ. [ಮತದಾರರ ಪಟ್ಟಿಗೆ ಹೆಸರು ನೋಂದಾವಣಿ ಹೇಗೆ?]

ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಈ ಪ್ರಕ್ರಿಯೆನ್ನು ಆಯೋಗ ಆರಂಭಿಸಿದೆ. ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ, ತಹಸೀಲ್ದಾರ್ ಕಚೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಅವಕಾಶ ಕಲ್ಪಿಸಬಹುದಾಗಿದೆ. [ಚುನಾವಣಾ ಆಯೋಗದ ವೆಬ್ ಸೈಟ್]

ಆನ್ ಲೈನ್ ಗಳ ಮೂಲಕವೂ ಅವಕಾಶ : ಚುನಾವಣಾ ಆಯೋಗ ಆನ್ ಲೈನ್ ಮೂಲಕವೂ ಮತದಾರರ ಪಟ್ಟಿಗೆ ಹೆಸರು ನೋಂದಣಿ ಸೇರಿದಂತೆ ಇತರೆ ಪ್ರಕ್ರಿಯೆಗಳಿಗೆ ಅವಕಾಶ ಕಲ್ಪಸಿದ್ದು, ನೋಂದಣಿಗಾಗಿ http://www.voterreg.kar.nic.in/ ವೆಬ್ ಸೈಟಿಗೆ ಭೇಟಿ ನೀಡಬಹುದಾಗಿದೆ.

English summary
Karnataka Election Commission launched voter registration campaign again after Lok Sabha Election 2014. If your name is not included in voters list, go to nearest govt office and register your name. for more details visit http://www.voterreg.kar.nic.in/ website.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X