PhD ವಿದ್ಯಾರ್ಥಿಗಳ ಫೆಲೋಶಿಫ್ ಮತ್ತೆ 25,000 ರೂ.ಗೆ ಏರಿಕೆ
ಬೆಂಗಳೂರು, ಜೂನ್ 8: ಮುಸ್ಲಿಂ, ಕ್ರೈಸ್ತ, ಜೈನ್, ಸಿಖ್ ಸೇರಿದಂತೆ ವಿವಿಧ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ PhD ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ನೀಡಲಾಗುತ್ತಿದ್ದ ಫೆಲೋಶಿಫ್‌ಅನ್ನು 25,000ದಿಂದ ಏಕಾಏಕಿ 8,000 ರೂಪಾಯಿಗೆ ಕಡಿತಗೊಳಿಸಲಾಗಿತ್ತು.
ಈ ಕುರಿತು ಜಾತ್ಯಾತೀತ ಜನತಾದಳ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಪತ್ರ ಬರೆದು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗುತ್ತಿರುವ ಅನ್ಯಾಯದ ಕುರಿತು ಸರ್ಕಾರದ ಗಮನಕ್ಕೆ ತಂದಿದ್ದರು.

ಅದೇ ರೀತಿ ಜೆಡಿಎಸ್ ಪಕ್ಷದ ನಾಯಕರಾದ ವೈ.ಎಸ್.ವಿ ದತ್ತ, ಇಮ್ರಾನ್ ಪಾಷ, ನಜ್ಮಾ ನಜೀರ್‌ರವರ ನಿರಂತರ ಹೋರಾಟದ ಪ್ರತಿಫಲವಾಗಿ ಸರ್ಕಾರ ಧಾರ್ಮಿಕ ಅಲ್ಪಸಂಖ್ಯಾತ PhD ವಿದ್ಯಾರ್ಥಿಗಳಿಗೆ ಹಿಂದಿನಂತೆ ಪ್ರತಿ ತಿಂಗಳು 25,000 ರೂಪಾಯಿಗಳನ್ನು ನೀಡುವುದಾಗಿ ತಿದ್ದುಪಡಿ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಛ್ ಇಲಾಖೆಯ ತಿದ್ದುಪಡಿ ಆದೇಶದಲ್ಲಿ, "ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 3 ವರ್ಷ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆಆರ್‌ಎಫ್ ಮಾದರಿಯಲ್ಲಿ 2 ವರ್ಷಗಳ ಅವಧಿಗೆ ಮಾತ್ರ ಪ್ರತಿ ವಾರ್ಷಿಕ 1 ಲಕ್ಷ ರೂ.ಗಳನ್ನು ನೀಡಲು ತಿದ್ದುಪಡಿ ಮಾಡಿ ಆದೇಶಿಸಿದೆ.

Recommended Video
ಅದೇ ರೀತಿ ವಿದ್ಯಾರ್ಥಿಗಳಿಂದ ಮತ್ತು ಜನಪ್ರತಿನಿಧಿಗಳಿಂದ ಫೆಲೋಶಿಫ್ ಮೊತ್ತವನ್ನು ಮೊದಲಿನ ಆದೇಶದಲ್ಲಿರುವಂತೆ ನೀಡಬೇಕೆಂದು ಕೋರಿಕೆಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿರುವ ಕಾರಣದಿಂದ ಪಿಎಚ್‌ಡಿ (3 ವರ್ಷ) ಮತ್ತು ಎಂ.ಫಿಲ್ (2 ವರ್ಷ) ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಿಂದಿನ ಆದೇಶದಂತೆ ಪ್ರತಿ ತಿಂಗಳು 25,000 ರೂ. ಮತ್ತು ಪ್ರತಿ ವರ್ಷಕ್ಕೆ ಒಂದು ಬಾರಿಗೆ 1 ಲಕ್ಷ ರೂ. (ನಿರ್ವಹಣಾ ವೆಚ್ಚ) ಹೀಗೆ ಒಟ್ಟು 3.10 ಲಕ್ಷ ರೂ.ಗಳನ್ನು 2021-22 ಸಾಲಿನಿಂದ ಜಾರಿಗೆ ಬರುವಂತೆ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಿದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್











Click it and Unblock the Notifications